Madhya Pradesh; ಡಬಲ್ ಎಂಜಿನ್ ಸರ್ಕಾರದ ಗೆಲುವು ಎಂದ ಸಿಎಂ!

ಭೋಪಾಲ್, ಡಿಸೆಂಬರ್ 03; ಮಧ್ಯಪ್ರದೇಶ ವಿಧಾನಸಭಾ ಚುನಾವಣೆ 2023ರಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ. 158 ಕ್ಷೇತ್ರದಲ್ಲಿ ಪಕ್ಷ ಮುನ್ನಡೆ ಪಡೆದಿದ್ದು, ಸರ್ಕಾರ ರಚನೆ ಮಾಡುವ ತಯಾರಿ ಆರಂಭಿಸಿದೆ. ಕಾಂಗ್ರೆಸ್‌ 69 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.

ವಿಧಾನಸಭೆ ಚುನಾವಣೆ ಮತ ಎಣಿಕೆ ಭಾನುವಾರ ನಡೆಯುತ್ತಿದೆ. ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 17ರ ಶುಕ್ರವಾರ ಮತದಾನ ನಡೆದಿತ್ತು. ರಾಜ್ಯದಲ್ಲಿ ಬಿಜೆಪಿ ಮಾತ್ರ ಮುನ್ನಡೆ ಪಡೆದಿಲ್ಲ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಸಹ ಬುಧ್ನಿ ಕ್ಷೇತ್ರದಲ್ಲಿ ಗೆಲುವಿನ ಸನಿಹದಲ್ಲಿದ್ದಾರೆ.

Madhya Pradesh Election Results 2023 BJP Lead Credits For Double Engine Says CM

ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 116. ಈ ಬಾರಿ ಬಿಜೆಪಿ ರಾಜ್ಯದಲ್ಲಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಅಂದಾಜಿಸಿದ್ದವು. ಆದರೆ ಲೆಕ್ಕಾಚಾರ ಉಲ್ಟಾ ಆಗಿದ್ದು, ಜನರು ಬಿಜೆಪಿ ಬೆಂಬಲಿಸಿದ್ದಾರೆ.

ಡಬಲ್ ಎಂಜಿನ್ ಸರ್ಕಾರ; ಚುನಾವಣಾ ಫಲಿತಾಂಶದ ಬಗ್ಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಪ್ರತಿಕ್ರಿಯೆ ನೀಡಿದ್ದಾರೆ. "ಇದು ಡಬಲ್ ಎಂಜಿನ್ ಸರ್ಕಾರದ ಸಾಧನೆ" ಎಂದು ಅವರು ಬಣ್ಣಿಸಿದ್ದಾರೆ.

ಭಾನುವಾರ ಮಾತನಾಡಿದ ಅವರು, "ನಾನು ಹಿಂದೆಯೂ ಹೇಳಿದ್ದೆ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚನೆ ಮಾಡಲಿದೆ ಎಂದು. ನಮ್ಮ ಆಡಳಿತವನ್ನು ಜನರು ಮೆಚ್ಚಿ ಬೆಂಬಲ ಸೂಚಿಸಿದ್ದಾರೆ" ಎಂದರು.

"ನರೇಂದ್ರ ಮೋದಿಜಿ ಮಧ್ಯಪ್ರದೇಶದ ಜನರ ಮನಸ್ಸಿನಲ್ಲಿ ಇದ್ದಾರೆ. ನಮ್ಮ ಮನಸ್ಸಿನಲ್ಲಿಯೂ ಇದ್ದಾರೆ. ಅವರು ರಾಜ್ಯದಲ್ಲಿ ನಡೆಸಿದ ಪ್ರಚಾರ ಜನರ ಹೃದಯ ತಲುಪಿದೆ. ಅವರು ಪಕ್ಷ ಬೆಂಬಲಿಸುವಂತೆ ಮಾಡಿದ ಮನವಿಯನ್ನು ಜನರು ಮನಃ ಪೂರ್ವಕವಾಗಿ ಸ್ವೀಕಾರ ಮಾಡಿದ್ದಾರೆ" ಎಂದು ಹೇಳಿದರು.

"ರಾಜ್ಯದ ಡಬಲ್ ಎಂಜಿನ್ ಸರ್ಕಾರ ಯೋಜನೆಗಳನ್ನು ಸರಿಯಾಗಿ ಜಾರಿಗೊಳಿಸಿದೆ. ಮಧ್ಯಪ್ರದೇಶದ ಜನರು ಹೆಚ್ಚಿನ ಅಭಿವೃದ್ಧಿಗಾಗಿ ಮತ್ತೆ ಬಿಜೆಪಿಯನ್ನು ಬೆಂಬಲಿಸಿದ್ದಾರೆ" ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಭೋಪಾಲ್‌ನಲ್ಲಿ ಕೇಂದ್ರ ಸಚಿವ ನರೇಂದ್ರ ಸಿಂಘ್ ಥೋಮರ್, ಜ್ಯೋತಿರಾಧಿತ್ಯ ಸಿಂಧಿಯಾ ಜೊತೆಗೆ ಚುನಾವಣಾ ಫಲಿತಾಂಶದ ಕುರಿತು ಚರ್ಚೆ ನಡೆಸುತ್ತಿದ್ದಾರೆ.

ಕೇಂದ್ರ ಚುನಾವಣಾ ಆಯೋಗದ 12.22ರ ಅಪ್‌ಡೇಟ್ ಪ್ರಕಾರ ಮಧ್ಯಪ್ರದೇಶದಲ್ಲಿ ಬಿಜೆಪಿ 159, ಕಾಂಗ್ರೆಸ್ 68, ಬಿಎಸ್‌ಪಿ 2 ಮತ್ತು ಇತರರು 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+