Madhya Pradesh; ಕಾಂಗ್ರೆಸ್‌ನ ಕಮಲ್‌ನಾಥ್‌ಗೂ ಹಿನ್ನಡೆ!

ಭೋಪಾಲ್, ಡಿಸೆಂಬರ್ 03; ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆ 2023ರಲ್ಲಿ ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಬಿಜೆಪಿ 85, ಕಾಂಗ್ರೆಸ್ 36, ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದಿಕೊಂಡಿದ್ದಾರೆ. ರಾಜ್ಯದ ಆಡಳಿತ ಪಕ್ಷ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಬಹುಮತಕ್ಕೆ ಬೇಕಾದ ಮ್ಯಾಜಿಕ್ ನಂಬರ್ ಹತ್ತಿರ ಬರುತ್ತಿದೆ.

ಭಾನುವಾರ ಮಧ್ಯಪ್ರದೇಶ ರಾಜ್ಯದ ವಿಧಾನಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 17ರ ಶುಕ್ರವಾರ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 116.

Madhya Pradesh Election Results 2023 BJP Lead In Kamal Nath Chhindwara Seat

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಬುಧ್ನಿ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಹಿನ್ನಡೆ ಕಾಣುವುದು ಮಾತ್ರವಲ್ಲ. ಚಿಂದ್ವಾರಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಕಮಲ್‌ನಾಥ್ ಸಹ ಹಿನ್ನಡೆ ಅನುಭವಿಸಿದ್ದಾರೆ. ಎದುರಾಳಿ ಬಿಜೆಪಿಯ ವಿವೇಕ್ ಬಂಟಿ ಶಾಹೂ ಮುನ್ನಡೆಯಲ್ಲಿದ್ದಾರೆ.

ಚಿಂದ್ವಾರಾ ಕ್ಷೇತ್ರದಲ್ಲಿ ಮಹಿಳಾ ಮತದಾರರ ಸಂಖ್ಯೆಯೇ ಹೆಚ್ಚು. ಕ್ಷೇತ್ರದ 2,81,676 ಮತದಾರರದಲ್ಲಿ ಪುರುಷರು 1,40,674. ಮಹಿಳೆಯರು 1,41,002. ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಶೇ 81.77ರಷ್ಟು ಮತದಾನವಾಗಿತ್ತು.

ಚಿಂದ್ವಾರಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಕಮಲ್‌ನಾಥ್ 40 ವರ್ಷಗಳ ಪ್ರಾಬಲ್ಯ ಹೊಂದಿದ್ದಾರೆ. ಬಿಜೆಪಿಯ ವಿವೇಕ್ ಬಂಟಿ ಶಾಹೂ ಬಿಜೆಪಿಯ ರಾಜ್ಯ ಯುವ ಮೋರ್ಚಾದ ಮಾಜಿ ಅಧ್ಯಕ್ಷರು. ಈ ಬಾರಿ ಅವರು ಪ್ರಬಲ ಪೈಪೋಟಿ ನೀಡಿದ್ದು, ಮುನ್ನಡೆಯಲ್ಲಿದ್ದಾರೆ.

ಚಿಂದ್ವಾರಾ ಕ್ಷೇತ್ರದಲ್ಲಿ ಈ ಬಾರಿ ಶಿವ ಭಕ್ತ ಮತ್ತು ಹನುಮ ಭಕ್ತರ ನಡುವೆ ಸ್ಪರ್ಧೆ ಎಂದು ವಿಶ್ಲೇಷಿಸಲಾಗುತ್ತಿದೆ. 76 ವರ್ಷದ ಕಮಲ್‌ ನಾಥ್ ಅವರೇ ಹೇಳುವಂತೆ 'ಹನುಮ ಭಕ್ತ'ರು. ಚುನಾವಣೆಯಲ್ಲಿ ಅವರ ಎದುರಾಳಿ ಬಿಜೆಪಿಯ ವಿವೇಕ್ ಬಂಟಿ ಶಾಹೂ ಜನರ ಪ್ರಕಾರ ಅಪ್ಪಟ 'ಶಿವ ಭಕ್ತ'. ಕ್ಷೇತ್ರದಲ್ಲಿ 102 ಅಡಿ ಎತ್ತರದ ಶಿವನ ಪ್ರತಿಮೆ ಸ್ಥಾಪನೆ ಮಾಡಿದ್ದಾರೆ.

ಎರಡೂ ಪಕ್ಷಗಳು ಕ್ಷೇತ್ರದಲ್ಲಿ ಮಹಿಳಾ ಮತದಾರರನ್ನು ಸೆಳೆಯಲು ವಿವಿಧ ತಂತ್ರ ರೂಪಿಸಿದ್ದವು. ಬಿಜೆಪಿ ಶಿವರಾಜ್ ಸಿಂಗ್ ಚೌವ್ಹಾಣ್ ಜಾರಿಗೆ ತಂದ ಯೋಜನೆಗಳನ್ನು ಮುಂದಿಟ್ಟುಕೊಂಡು ಮತ ಕೇಳಿತ್ತು.

ಚಿಂದ್ವಾರಾ ಕ್ಷೇತ್ರದಲ್ಲಿ 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ದೀಪಕ್ ಸಕ್ಸೇನಾ 1,04,034 ಮತಗಳನ್ನು ಪಡೆದು 14,547 ಮತಗಳ ಅಂತರದಿಂದ ಬಿಜೆಪಿಯ ಅಭ್ಯರ್ಥಿ ಸೋಲಿಸಿದ್ದರು. 2019ರ ಉಪ ಚುನಾವಣೆಯಲ್ಲಿ ಕಮಲ್‌ ನಾಥ್ ಗೆಲುವು ಸಾಧಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+