Madhya Pradesh; ಹಿರಿಯ ನಾಯಕನ ರಾಜೀನಾಮೆ ಕೇಳಿದ ಕಾಂಗ್ರೆಸ್!
ಭೋಪಾಲ್, ಡಿಸೆಂಬರ್ 05; ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆ ಫಲಿತಾಂಶ ಭಾನುವಾರ ಪ್ರಕಟವಾಗಿದೆ. ರಾಜ್ಯದಲ್ಲಿ ಬಿಜೆಪಿ ಮರಳಿ ಅಧಿಕಾರವನ್ನು ಪಡೆದಿದೆ. ಚುನಾವಣಾ ಪೂರ್ವ ಸಮೀಕ್ಷೆಗಳು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಅಂದಾಜಿಸಿದ್ದು, ಲೆಕ್ಕಾಚಾರ ತಲೆಕೆಳಗಾಗಿದೆ.
ರಾಜ್ಯದ 230 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ 17ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಬಿಜೆಪಿ 163, ಕಾಂಗ್ರೆಸ್ 66 ಮತ್ತು ಬಿಎಪಿ ಪಕ್ಷ 1 ಸ್ಥಾನದಲ್ಲಿ ಜಯಗಳಿಸಿದೆ. ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 116. ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಿದೆ.

ರಾಜೀನಾಮೆಗೆ ಕಾಂಗ್ರೆಸ್ ಸೂಚನೆ; ಮಧ್ಯಪ್ರದೇಶ ರಾಜ್ಯದ ಮಾಜಿ ಮಖ್ಯಮಂತ್ರಿ ಕಮಲ್ ನಾಥ್ ರಾಜ್ಯ ಕಾಂಗ್ರೆಸ್ ಮುಖ್ಯಸ್ಥರು. ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಅವರಿಗೆ ರಾಜೀನಾಮೆ ನೀಡುವಂತೆ ಪಕ್ಷ ಸೂಚನೆ ನೀಡಿದೆ ಎಂಬ ಮಾಹಿತಿ ಸಿಕ್ಕಿದೆ.
ಕಾಂಗ್ರೆಸ್ ಪಕ್ಷ ಅಧಿಕಾರ ಪಡೆಯಲಿದೆ ಎಂಬ ನಿರೀಕ್ಷೆ ಇತ್ತು. ಆದರೆ 100 ಸೀಟುಗಳನ್ನು ಸಹ ಪಡೆಯಲು ವಿಫಲವಾಗಿದೆ. ಆದ್ದರಿಂದ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಪಕ್ಷದ ಹೈಕಮಾಂಡ್ ಸೂಚನೆ ಕೊಟ್ಟಿದೆ.
ಶಿವರಾಜ್ ಸಿಂಗ್ ಚೌವ್ಹಾಣ್ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ ಎಂದು ಕಾಂಗ್ರೆಸ್ ಕಮಲ್ ನಾಥ್ ನೇತೃತ್ವದಲ್ಲಿ ಚುನಾವಣೆಯನ್ನು ಎದುರಿಸಿತ್ತು. ಆದರೆ ಜನರ ಬೆಂಬಲಗಳಿಸುವಲ್ಲಿ ಪಕ್ಷ ವಿಫಲವಾದ ಹಿನ್ನಲೆಯಲ್ಲಿ ಪಕ್ಷದ ಅಧ್ಯಕ್ಷರನ್ನು ಬದಲಾವಣೆ ಮಾಡಲು ಕಾಂಗ್ರೆಸ್ ಮುಂದಾಗಿದೆ.
ಬಿಜೆಪಿ ಸರ್ಕಾರದ ವಿರುದ್ಧ ಜನರ ಆಕ್ರೋಶವಿದ್ದರೂ ಜನರ ಜೊತೆ ನಿಲ್ಲುವಲ್ಲಿ ಪಕ್ಷ ವಿಫಲವಾಗಿದೆ ಎಂಬುದು ವಿಶ್ಲೇಷಣೆ. ಬೃಹತ್ ಹೋರಾಟಗಳನ್ನು ಹಮ್ಮಿಕೊಳ್ಳುವ ಮೂಲಕ ಕಮಲ್ ನಾಥ್ ಜನರಿಗೆ ಹತ್ತಿರವಾಗಿಲ್ಲ. ಕಾಂಗ್ರೆಸ್‌ನ ಇರುವಿಕೆಯನ್ನು ಮನದಟ್ಟು ಮಾಡಿಕೊಟ್ಟಿಲ್ಲ ಎಂದು ಪಕ್ಷದ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿನ ತಳಮಟ್ಟದ ಅಲೆಯನ್ನು ಅರಿಯುವಲ್ಲಿ ಪಕ್ಷ ವಿಫಲವಾಗಿದೆ. ಇಂಡಿಯಾ ಮೈತ್ರಿಕೂಟದ ಭಾಗವಾದ ಸಮಾಜವಾದಿ ಪಕ್ಷ ರಾಜ್ಯದಲ್ಲಿ ಕಾಂಗ್ರೆಸ್‌ನಿಂದ 6-7 ಕ್ಷೇತ್ರಗಳನ್ನು ಕೇಳಿತ್ತು. ಈ ಮೈತ್ರಿ ಮಾತುಕತೆಯನ್ನು ಮುಂದೆ ತೆಗೆದುಕೊಂಡು ಹೋಗುವಲ್ಲಿ ಸಹ ಕಮಲ್ ನಾಥ್ ವಿಫಲರಾದರು ಎಂಬ ಆರೋಪವೂ ಇದೆ.
ರಾಜ್ಯ ಕಾಂಗ್ರೆಸ್‌ಗೆ ಹೊಸ, ಯುವ ನಾಯಕನ ಅಗತ್ಯವಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಬೇಡಿಕೆ ಇಟ್ಟಿದ್ದಾರೆ. ಕಮಲ್ ನಾಥ್, ದಿಗ್ವಿಜಯ್ ಸಿಂಗ್ ಇಬ್ಬರೂ ನಾಯಕರು 70 ವರ್ಷ ಮೇಲ್ಪಟ್ಟವರು. ತೆಲಂಗಾಣ ಮಾದರಿಯಲ್ಲಿ ಯುವ ನಾಯಕ ಬೇಕು ಎಂಬುದು ಬೇಡಿಕೆಯಾಗಿದೆ.
2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷ ರಾಜ್ಯಕ್ಕೆ ಹೊಸ ಸಾರಥಿಯನ್ನು ಕರೆದುಕೊಂಡು ಬರಲಿದೆ. ಕಮಲ್ ನಾಥ್ 2020ರಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಂಡ ಬಳಿಕ ರಾಜ್ಯಾಧ್ಯಕ್ಷರಾಗಿದ್ದರು. ಈಗ ಅವರ ರಾಜೀನಾಮೆಗೆ ಪಕ್ಷ ಸೂಚನೆ ನೀಡಿದೆ.
ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷಿತ ಸಾಧನೆ ಮಾಡದೇ ಭಾರೀ ಹಿನ್ನಡೆ ಅನುಭವಿಸಿದೆ. ಆದರೆ ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್ ಚಿಂದ್ವಾರಾ ಕ್ಷೇತ್ರದಲ್ಲಿ ಎದುರಾಳಿ ಬಿಜೆಪಿಯ ವಿವೇಕ್ ಬಂಟಿ ಶಾಹೂ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಚಿಂದ್ವಾರಾ ಕ್ಷೇತ್ರದ ಹಾಲಿ ಶಾಸಕರಾಗಿದ್ದ ಕಮಲ್‌ನಾಥ್ 1,32,302 ಮತಗಳನ್ನು ಪಡೆದು 36,594 ಮತಗಳ ಅಂತರದಿಂದ ಬಾರಿಯ ಚುನಾವಣೆಯಲ್ಲಿ ಗೆದ್ದಿದ್ದಾರೆ. ವಿವೇಕ್ ಬಂಟಿ ಶಾಹೂ 95,708 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಬಿಎಸ್‌ಪಿಯ ಠಾಕೂರ್ ತ್ರಿವಿಕ್ರಮ್ 1897 ಮತಗಳನ್ನು ಪಡೆದು 3ನೇ ಸ್ಥಾನ ಪಡೆದರು.
ಕಮಲ್‌ನಾಥ್ 2ನೇ ಸುತ್ತಿನಲ್ಲಿ 7805 ಮತಗಳ ಮುನ್ನಡೆ ಪಡೆದುಕೊಂಡಿದ್ದರು. 8ನೇ ಸುತ್ತಿನಲ್ಲಿ 4457 ಮತಗಳ ಮುನ್ನಡೆ ಪಡೆದರು. 12ನೇ ಸುತ್ತಿನಲ್ಲಿ 72609 ಮತಗಳನ್ನು ಪಡೆದುಕೊಂಡರು. 17ಮೇ ಸುತ್ತಿನಲ್ಲಿ 101054 ಮತಗಳನ್ನು ಪಡೆದುಕೊಂಡಿದ್ದರು. ಪುರುಷ ಮತದಾರರಿಗಿಂತ ಮಹಿಳಾ ಮತದಾರರೇ ಅಧಿಕವಾಗಿರುವ ಕ್ಷೇತ್ರ ಚಿಂದ್ವಾರಾ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications