Madhya Pradesh; ಕಮಲ್ ನಾಥ್ ರಾಜೀನಾಮೆ, ಸುಳ್ಳು ಎಂದ ಕಾಂಗ್ರೆಸ್!
ಭೋಪಾಲ್, ಡಿಸೆಂಬರ್ 08; ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ. 230 ಸದಸ್ಯ ಬಲದ ವಿಧಾನಸಭೆಯಲ್ಲಿ 163 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ ಮರಳಿ ಅಧಿಕಾರವನ್ನು ಪಡೆದಿದೆ. ಕಾಂಗ್ರೆಸ್ 66 ಕ್ಷೇತ್ರದಲ್ಲಿ ಗೆದ್ದಿದೆ.
ನವೆಂಬರ್ 17ರಂದು ಒಂದೇ ಹಂತದಲ್ಲಿ ಮಧ್ಯಪ್ರದೇಶ ರಾಜ್ಯದ ವಿಧಾನಸಭೆಗೆ ಮತದಾನ ನಡೆದಿತ್ತು. ಶೇ 76.22ರಷ್ಟು ದಾಖಲೆಯ ಮತದಾನವಾಗಿತ್ತು. ಡಿಸೆಂಬರ್ 3ರ ಭಾನುವಾರ ಚುನಾವಣಾ ಫಲಿತಾಂಶ ಘೋಷಣೆಯಾಗಿದೆ. ಬಿಜೆಪಿ 163, ಕಾಂಗ್ರೆಸ್ 66 ಮತ್ತು ಬಿಎಪಿ ಪಕ್ಷ 1 ಸ್ಥಾನದಲ್ಲಿ ಜಯಗಳಿಸಿದೆ.

ಮಧ್ಯಪ್ರದೇಶ ರಾಜ್ಯದ ಚುನಾವಣೆಯ ಸೋಲಿಗೆ ಮಾಜಿ ಮಖ್ಯಮಂತ್ರಿ, ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಹೊಣೆ ಎಂದು ಹಲವು ನಾಯಕರು ಆರೋಪ ಮಾಡುತ್ತಿದ್ದಾರೆ. ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಅವರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿಗಳು ಹಬ್ಬಿದೆ.
ವರದಿ ತಳ್ಳಿ ಹಾಕಿದ ಕಾಂಗ್ರೆಸ್; 77 ವರ್ಷದ ಕಮಲ್ ನಾಥ್ ರಾಜ್ಯ ಕಾಂಗ್ರೆಸ್‌ನ ಹಿರಿಯ ನಾಯಕರು. ರಾಜ್ಯದ ಮಾಜಿ ಮುಖ್ಯಮಂತ್ರಿ. ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಅವರು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ವರದಿಯನ್ನು ಕಾಂಗ್ರೆಸ್ ತಳ್ಳಿ ಹಾಕಿದೆ.
ಬುಧವಾರ ನವದೆಹಲಿಯಲ್ಲಿ ಕಮಲ್ ನಾಥ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿದ್ದರು. ಆಗ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನೂತನ ಅಧ್ಯಕ್ಷರ ನೇಮಕದ ಕುರಿತು ಪಕ್ಷ ಶೀಘ್ರವೇ ತೀರ್ಮಾನ ಕೈಗೊಳ್ಳಲಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಆದರೆ ಕಾಂಗ್ರೆಸ್‌ನ ರಾಜ್ಯ ಘಟಕ ಮತ್ತು ಹೈಕಮಾಂಡ್ ಸಹ ಇದು ಸುಳ್ಳು ಸುದ್ದಿ ಎಂದು ಹೇಳಿದೆ.
ಡಿಸೆಂಬರ್ 5ರಂದು ಮಾಜಿ ಮಖ್ಯಮಂತ್ರಿ ಕಮಲ್ ನಾಥ್‌ಗೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಪಕ್ಷ ಸೂಚನೆ ನೀಡಿದೆ ಎಂಬ ಸುದ್ದಿ ಹಬ್ಬಿತ್ತು. ಈ ಸುದ್ದಿಯ ನಡುವೆಯೇ ಕಮಲ್ ನಾಥ್ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ್ದರು.
ಈ ಬಾರಿಯ ಮಧ್ಯಪ್ರದೇಶ ರಾಜ್ಯದ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಅಂದಾಜಿಸಿದ್ದವು. 2024ರ ಲೋಕಸಭೆ ಚುನಾವಣೆಗೂ ಮೊದಲು ಚುನಾವಣೆ ನಡೆದ ರಾಜ್ಯಗಳಲ್ಲಿ ಮಧ್ಯಪ್ರದೇಶ ಸಹ ಒಂದು.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ ಎಂದು ವರದಿಗಳು ಹೇಳಿದ್ದವು. ಆದರೆ ಪ್ರತಿಪಕ್ಷ ಕಾಂಗ್ರೆಸ್ ಕಮಲ್ ನಾಥ್ ನೇತೃತ್ವದಲ್ಲಿ ಜನರ ಬೆಂಬಲಗಳಿಸುವಲ್ಲಿ ವಿಫಲವಾಗಿದೆ. ಬಿಜೆಪಿ 163 ಕ್ಷೇತ್ರಗಳಲ್ಲಿ ಜಯಗಳಿಸಿ ಸ್ಪಷ್ಟ ಬಹುಮತ ಪಡೆದಿದೆ.
ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಜನರ ಆಕ್ರೋಶವಿದ್ದರೂ ಕಾಂಗ್ರೆಸ್ ಪಕ್ಷ ಜನರ ಜೊತೆ ನಿಲ್ಲುವಲ್ಲಿ, ಆಡಳಿತ ಪಕ್ಷದ ವಿರುದ್ಧ ಬೃಹತ್ ಹೋರಾಟ ನಡೆಸಿ, ಜನಾಂದೋಲನ ನಡೆಸುವಲ್ಲಿ ವಿಫಲವಾಗಿದೆ ಎಂಬುದು ಆರೋಪ. ಆದ್ದರಿಂದ ಪಕ್ಷ ಚುನಾವಣೆಯಲ್ಲಿ ಸೋಲು ಕಂಡಿದೆ.
ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್‌ರನ್ನು ಬದಲಾವಣೆ ಮಾಡಿ, 2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಅಧ್ಯಕ್ಷರನ್ನು ನೇಮಕ ಮಾಡಬೇಕು. ಯುವ ನಾಯಕರಿಗೆ ಮಣೆ ಹಾಕಬೇಕು ಎಂಬುದು ಬೇಡಿಕೆಯಾಗಿದೆ. ಇಂತಹ ಸಮಯದಲ್ಲಿಯೇ ಕಮಲ್ ನಾಥ್ ರಾಜೀನಾಮೆ ಸುದ್ದಿ ಹೊರಬಂದಿದೆ.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಆದರೆ ಪಕ್ಷದ ಹಿರಿಯ ನಾಯಕರಾದ ಕಮಲ್ ನಾಥ್ ಚಿಂದ್ವಾರಾ ಕ್ಷೇತ್ರದಲ್ಲಿ ಎದುರಾಳಿಯಾಗಿದ್ದ ಬಿಜೆಪಿಯ ವಿವೇಕ್ ಬಂಟಿ ಶಾಹೂ ವಿರುದ್ಧ 36,594 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕ್ಷೇತ್ರದಲ್ಲಿ ಕಮಲ್‌ನಾಥ್ 1,32,302 ಮತಗಳನ್ನು ಪಡೆದರು. ವಿವೇಕ್ ಬಂಟಿ ಶಾಹೂ 95,708 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ರಾಜ್ಯದಲ್ಲಿ ಕುತೂಹಲ ಕೆರಳಿಸಿದ್ದ ಕ್ಷೇತ್ರದಲ್ಲಿ ಚಿಂದ್ವಾರಾ ಸಹ ಒಂದಾಗಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications