Get Updates
Get notified of breaking news, exclusive insights, and must-see stories!

Madhya Pradesh; ಮಧ್ಯಪ್ರದೇಶ ಜನರ ತೀರ್ಪು ಒಪ್ಪಿದ ಕಾಂಗ್ರೆಸ್ ನಾಯಕ

ಭೋಪಾಲ್, ಡಿಸೆಂಬರ್ 03; ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆ 2023ರ ಫಲಿತಾಂಶ ಘೋಷಣೆಯಾಗಿದೆ. 230 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 163 ಕ್ಷೇತ್ರಗಳಲ್ಲಿ ಮುನ್ನಡೆ ಪಡೆಯುವ ಮೂಲಕ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚನೆ ಮಾಡುವತ್ತ ಹೆಜ್ಜೆ ಹಾಕಿದೆ. ಕಾಂಗ್ರೆಸ್ 66 ಕ್ಷೇತ್ರದಲ್ಲಿ ಮುನ್ನಡೆ ಪಡೆದಿದೆ. ಬಿಎಪಿ ಪಕ್ಷ ರಾಜ್ಯದಲ್ಲಿ 1 ಸ್ಥಾನದಲ್ಲಿ ಗೆದ್ದು, ರಾಜ್ಯದಲ್ಲಿ ಮೊದಲ ಬಾರಿಗೆ ಖಾತೆ ತೆರೆದಿದೆ.

ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆ ಮತ ಎಣಿಕೆ ಭಾನುವಾರ ನಡೆಯಿತು. ಚುನಾವಣಾ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಪತ್ರಿಕಾಗೋಷ್ಠಿ ನಡೆಸಿದರು.

Madhya Pradesh Election Results 2023 Hope BJP Will Live Up To People Trust Says Kamal Nath

"ರಾಜ್ಯದ ಜನರು ನೀಡಿರುವ ತೀರ್ಪನ್ನು ಕಾಂಗ್ರೆಸ್ ಪಕ್ಷ ಒಪ್ಪಿಕೊಳ್ಳಲಿದೆ. ಬಿಜೆಪಿ ಜನರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲಿದೆ ಎಂಬ ವಿಶ್ವಾಸವಿದೆ" ಎಂದರು. 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 116. ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿದೆ. ಚುನಾವಣಾ ಫಲಿತಾಂಶ ಅಧಿಕೃತವಾಗಿ ಘೋಷಣೆಯಾಗಬೇಕಿದೆ.

"ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ರಾಜ್ಯದ ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ. ನಾವು ಜನರ ನಿರೀಕ್ಷೆ ತಲುಪಲು ಏಕೆ ವಿಫಲರಾದೆವು? ಎಂದು ಪರಾಮರ್ಶೆ ನಡೆಸುತ್ತೇವೆ. ರಾಜ್ಯದ ಮತದಾರರ ಮೇಲೆ ನಮಗೆ ನಂಬಿಕೆ ಇದೆ. ಇಂದಿಗೂ ಸಹ ಆ ನಂಬಿಕೆ ಉಳಿದಿದೆ" ಎಂದು ಕಮಲ್‌ನಾಥ್ ಹೇಳಿದರು.

"ನಾವು ಗೆದ್ದ ಮತ್ತು ಸೋತ ಅಭ್ಯರ್ಥಿಗಳ ಜೊತೆ ಮಾತುಕತೆ ನಡೆಸುತ್ತೇವೆ. ನಾವು ಸೋಲಿಗೆ ಕಾರಣ ಏನು? ಎಂಬ ಬಗ್ಗೆ ಪರಾಮರ್ಶೆ ಮಾಡಲಿದ್ದೇವೆ" ಎಂದು ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.

ಸಿಎಂ ಚೌವ್ಹಾಣ್ ಗೆಲುವು; ಮಧ್ಯಪ್ರದೇಶ ರಾಜ್ಯದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಅಲ್ಲದೇ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಬುಧ್ನಿ ಕ್ಷೇತ್ರದಲ್ಲಿ 1,64,951 ಮತಗಳನ್ನು ಪಡೆದು ಜಯಗಳಿಸಿದ್ದಾರೆ. 104974 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಎದುರಾಳಿಯಾದ ಕಾಂಗ್ರೆಸ್‌ನ ವಿಕ್ರಂ ಮಸ್ತಲ್ ಶರ್ಮಾ 59,997 ಮತಗಳನ್ನು ಪಡೆದಿದ್ದಾರೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್‌ ನಾಥ್ ಚಿಂದ್ವಾರಾ ಕ್ಷೇತ್ರದಲ್ಲಿ 1,29,829 ಮತಗಳನ್ನು ಪಡೆದು 35009 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಎದುರಾಳಿ ಬಿಜೆಪಿಯ ವಿವೇಕ್ ಬಂಟಿ ಶಾಹೂ 94,820 ಮತಗಳನ್ನು ಪಡೆದಿದ್ದಾರೆ.

ಸಂಜೆ 6.37ರ ಮಾಹಿತಿಯಂತೆ ಇನ್ನೂ ಚಿಂದ್ವಾರಾ ಕ್ಷೇತ್ರದ ಅಂತಿಮ ಫಲಿತಾಂಶ ಘೋಷಣೆಯಾಗಿಲ್ಲ. ಆದ್ದರಿಂದ ಕಮಲ್‌ನಾಥ್ ಎಷ್ಟು ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ? ಎಂದು ಕಾದು ನೋಡಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+