Get Updates
Get notified of breaking news, exclusive insights, and must-see stories!

Madhya Pradesh; ಮಧ್ಯಪ್ರದೇಶ ಚುನಾವಣೆ ಗೆದ್ದ ರಾಷ್ಟ್ರೀಯ ನಾಯಕ!

ಭೋಪಾಲ್, ಡಿಸೆಂಬರ್ 03; ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಚುನಾವಣಾ ಪೂರ್ವ ಸಮೀಕ್ಷೆಗಳು ಅಂದಾಜಿಸಿದಂತೆ ಫಲಿತಾಂಶ ಬಂದಿಲ್ಲ. 230 ಸದಸ್ಯ ಬಲದ ವಿಧಾನಸಭೆಯಲ್ಲಿ ಸಂಜೆ 7.40ರ ಮಾಹಿತಿಯಂತೆ ಬಿಜೆಪಿ 164 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ. ಕಾಂಗ್ರೆಸ್‌ 65 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ.

ರಾಜ್ಯದ ಚುನಾವಣೆಯಲ್ಲಿ ಬಿಜೆಪಿ ಹಲವು ಹೊಸ ತಂತ್ರವನ್ನು ರೂಪಿಸಿತ್ತು. ಇನ್ನೂ 125 ಕ್ಷೇತ್ರಗಳ ಚುನಾವಣಾ ಫಲಿತಾಂಶ ಅಧಿಕೃತವಾಗಿ ಚುನಾವಣಾ ಆಯೋಗದಿಂದ ಘೋಷಣೆಯಾಗಬೇಕಿದೆ. ರಾತ್ರಿ 10 ಗಂಟೆಯ ವೇಳೆಗೆ ಅಂತಿಮ ಚಿತ್ರಣ ಲಭ್ಯವಾಗುವ ನಿರೀಕ್ಷೆ ಇದೆ.

Madhya Pradesh Election Results 2023 Kailash Vijayvargiya Wins

ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 65 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಭಾರತೀಯ ಆದಿವಾಸಿ ಪಕ್ಷ 1 ಸ್ಥಾನದಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಗೆಲುವಿನ ಖಾತೆಯನ್ನು ತೆರೆದಿದೆ.

ಚುನಾವಣೆ ಗೆದ್ದ ರಾಷ್ಟ್ರೀಯ ನಾಯಕ; ಬಿಜೆಪಿ ಈ ಬಾರಿಯ ಚುನಾವಣೆಗೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾರನ್ನು ಕಣಕ್ಕಿಳಿಸಿತ್ತು. ಇಂಧೋರ್-1 ಕ್ಷೇತ್ರದಲ್ಲಿ ಅವರು ಜಯಗಳಿಸಿದ್ದಾರೆ.

ಮೂವರು ಕೇಂದ್ರ ಸಚಿವರು, 7 ಸಂಸದರು ಮತ್ತು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರನ್ನು ಬಿಜೆಪಿ ಕಣಕ್ಕಿಳಿಸುವ ಮೂಲಕ ಅಚ್ಚರಿಯನ್ನು ಮೂಡಿಸಿತ್ತು. ಕೈಲಾಶ್ ವಿಜಯವರ್ಗಿಯಾ ಅವರು 1,58,123 ಮತಗಳನ್ನು ಪಡೆದು 57,939 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಸಂಜಯ್ ಶುಕ್ಲಾ ಕೈಲಾಶ್ ಎದುರಾಳಿಯಾಗಿದ್ದರು. ಅವರು 100184 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ರಾಷ್ಟ್ರೀಯ ನಾಯಕರನ್ನು ಕಣಕ್ಕಿಳಿಸಿದ ಬಗ್ಗೆ ಎದ್ದಿದ್ದ ಚರ್ಚೆಗಳಿಗೆ ಕೈಲಾಶ್ ಗೆಲುವಿನ ಮೂಲಕ ಉತ್ತರವನ್ನು ನೀಡಿದ್ದಾರೆ.

ಕೈಲಾಶ್ ವಿಜಯವರ್ಗಿಯ ಮಧ್ಯಪ್ರದೇಶದ 2023ರ ಚುನಾವಣೆಯಲ್ಲಿ ಗಮನ ಸೆಳೆದಿದ್ದ ಬಿಜೆಪಿಯ ಅಭ್ಯರ್ಥಿಗಳಲ್ಲಿ ಒಬ್ಬರು. ಅವರು ಇಂಧೋರ್‌ನ ಮಾಜಿ ಮೇಯರ್ ಸಹ ಹೌದು. ಇದುವರೆಗೂ ಕೈಲಾಶ್ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇದುವರೆಗೂ ಯಾವುದೇ ವಿಧಾನಸಭಾ ಚುನಾವಣೆಯಲ್ಲಿ ಅವರು ಸೋಲು ಕಂಡಿರಲಿಲ್ಲ.

ರಾಷ್ಟ್ರ ರಾಜಕೀಯಕ್ಕೆ ಹೋಗುವ ಮೊದಲು ಅವರು 12 ವರ್ಷಗಳ ಕಾಲ ರಾಜ್ಯದ ವಿವಿಧ ಖಾತೆಗಳ ಸಚಿವರಾಗಿದ್ದರು. ಈ ಬಾರಿಯ ಚುನಾವಣೆಯಲ್ಲಿ ಮತ್ತೆ ಗೆಲುವು ಕಂಡಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಪ್ರಬಲ ಖಾತೆಯನ್ನೇ ಅವರು ಪಡೆಯಲಿದ್ದಾರೆ.

ಮಧ್ಯಪ್ರದೇಶದ ರಾಜ್ಯದಲ್ಲಿ ಬಿಜೆಪಿ ಗೆಲುವು ಅಭೂತಪೂರ್ವ ಗೆಲುವು ಸಾಧಿಸುವುದು ಮಾತ್ರವಲ್ಲ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಬುಧ್ನಿ ಕ್ಷೇತ್ರದಲ್ಲಿ 1,64,951 ಮತಗಳನ್ನು ಪಡೆದು 104974 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಆದರೆ ಅವರು ಮುಖ್ಯಮಂತ್ರಿಯಾಗಲಿದ್ದಾರೆಯೇ? ಕಾದು ನೋಡಬೇಕಿದೆ.

ಶಿವರಾಜ್‌ ಸಿಂಗ್ ಚೌವ್ಹಾಣ್ ಎದುರಾಳಿಯಾದ ಕಾಂಗ್ರೆಸ್‌ನ ವಿಕ್ರಂ ಮಸ್ತಲ್ ಶರ್ಮಾ 59,997 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ರಾಜ್ಯದ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಆದರೆ ಪಕ್ಷದ ರಾಜ್ಯಾಧ್ಯಕ್ಷ ಕಮಲ್‌ ನಾಥ್ ಚಿಂದ್ವಾರಾ ಕ್ಷೇತ್ರದಲ್ಲಿ 1,29,829 ಮತಗಳನ್ನು ಪಡೆದು 35009 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅಂತಿಮ ಚುನಾವಣಾ ಫಲಿತಾಂಶ ಇನ್ನೂ ಘೋಷಣೆಯಾಗಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+