Madhya Pradesh; ಕಾಂಗ್ರೆಸ್ ಸೋತರು ಗೆದ್ದು ಬೀಗಿದ ಕಮಲ್ ನಾಥ್
ಭೋಪಾಲ್, ಡಿಸೆಂಬರ್ 03; ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಭಂಗ ಅನುಭವಿಸಿದೆ. 230 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ 17ರಂದು ಚುನಾವಣೆ ನಡೆದಿತ್ತು. ಸಂಜೆ 8.40ರ ಮಾಹಿತಿಯಂತೆ ಬಿಜೆಪಿ 165 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ. ಕಾಂಗ್ರೆಸ್ 64 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.
ರಾಜ್ಯದ ಚುನಾವಣಾ ಪೂರ್ವ ಸಮೀಕ್ಷೆ ಕಾಂಗ್ರೆಸ್ ಜಯಗಳಿಸಲಿದೆ ಎಂದು ಹೇಳಿತ್ತು. ಆದರೆ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಅಧಿಕಾರ ಪಡೆಯಲಿದೆ ಎಂದು ತಿಳಿಸಿದ್ದವು. ಇದುವರೆಗಿನ ಮಾಹಿತಿ ಅನ್ವಯ ಬಿಜೆಪಿ 141, ಕಾಂಗ್ರೆಸ್ 45, ಭಾರತೀಯ ಆದಿವಾಸಿ ಪಕ್ಷ 1 ಸ್ಥಾನದಲ್ಲಿ ಜಯಗಳಿಸಿದೆ. ಒಟ್ಟು 187 ಸ್ಥಾನದ ಅಂತಿಮ ಫಲಿತಾಂಶ ಚುನಾವಣಾ ಆಯೋಗದಿಂದ ಪ್ರಕಟವಾಗಿದೆ.

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭಾರೀ ಹಿನ್ನಡೆ ಅನುಭವಿಸಿದೆ. ಆದರೆ ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್ ಚಿಂದ್ವಾರಾ ಕ್ಷೇತ್ರದಲ್ಲಿ ಎದುರಾಳಿ ಬಿಜೆಪಿಯ ವಿವೇಕ್ ಬಂಟಿ ಶಾಹೂ ವಿರುದ್ಧ ಗೆದ್ದು ಬೀಗಿದ್ದಾರೆ.
ಚಿಂದ್ವಾರಾ ಕ್ಷೇತ್ರದಲ್ಲಿ ಕಮಲ್‌ನಾಥ್ 1,32,302 ಮತಗಳನ್ನು ಪಡೆದು 36,594 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ವಿವೇಕ್ ಬಂಟಿ ಶಾಹೂ 95,708 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಬಿಎಸ್‌ಪಿಯ ಠಾಕೂರ್ ತ್ರಿವಿಕ್ರಮ್ 1897 ಮತಗಳನ್ನು ಪಡೆದು 3ನೇ ಸ್ಥಾನ ಪಡೆದಿದ್ದಾರೆ.
ಕದನ ಕುತೂಹಲ; ಕಮಲ್‌ನಾಥ್ 2ನೇ ಸುತ್ತಿನಲ್ಲಿ 7805 ಮತಗಳ ಮುನ್ನಡೆ ಪಡೆದುಕೊಂಡಿದ್ದರು. 8ನೇ ಸುತ್ತಿನಲ್ಲಿ 4457 ಮತಗಳ ಮುನ್ನಡೆ ಪಡೆದರು. 12ನೇ ಸುತ್ತಿನಲ್ಲಿ 72609 ಮತಗಳನ್ನು ಪಡೆದುಕೊಂಡರು. 17ಮೇ ಸುತ್ತಿನಲ್ಲಿ 101054 ಮತಗಳನ್ನು ಪಡೆದುಕೊಂಡಿದ್ದರು. ಅಂತಿಮವಾಗಿ 36,594 ಮತಗಳನ್ನು ಪಡೆದು ಗೆಲುವು ಕಂಡರು.
ಚಿಂದ್ವಾರಾ ಕ್ಷೇತ್ರದ ಕದನವನ್ನು ಹನುಮ ಭಕ್ತ ಮತ್ತು ಶಿವ ಭಕ್ತನ ನಡುವಿನ ಹೋರಾಟ ಎಂದು ಬಣ್ಣಿಸಲಾಗಿತ್ತು. ವಿವೇಕ್ ಬಂಟಿ 'ಶಿವ ಭಕ್ತ' ಮತ್ತು ಕಮಲ್‌ನಾಥ್ ಅವರೇ ಹೇಳುವಂತೆ 'ಹನುಮ ಭಕ್ತ'. ವಿವೇಕ್ ಬಂಟಿ ಶಾಹೂ ಕ್ಷೇತ್ರದಲ್ಲಿ 102 ಅಡಿ ಎತ್ತರದ ಶಿವನ ಪ್ರತಿಮೆ ಸ್ಥಾಪನೆ ಮಾಡಿದ್ದರು. ಈ ಮೂಲಕ ಚುನಾವಣೆ ಪ್ರಚಾರ ಆರಂಭಿಸಿದ್ದರು.
ಚಿಂದ್ವಾರಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಕಮಲ್‌ನಾಥ್ 40 ವರ್ಷಗಳ ಪ್ರಾಬಲ್ಯ ಹೊಂದಿದ್ದಾರೆ. ಈ ಬಾರಿ ಗೆಲ್ಲುವ ಮೂಲಕ ಅವರು ತಮ್ಮ ಪ್ರಾಬಲ್ಯವನ್ನು ಮುಂದುವರೆಸಿದ್ದಾರೆ. 2019ರ ಉಪ ಚುನಾವಣೆಯಲ್ಲಿ ಕಮಲ್‌ನಾಥ್ ವಿರುದ್ಧ ಸೋತಿದ್ದ ಬಿಜೆಪಿಯ ವಿವೇಕ್ ಬಂಟಿ ಶಾಹೂ ಈ ಬಾರಿಯೂ ಎದುರಾಳಿಯಾಗಿದ್ದರು. ಬಿಜೆಪಿಯ ರಾಜ್ಯ ಯುವ ಮೋರ್ಚಾದ ಮಾಜಿ ಅಧ್ಯಕ್ಷರು ಆಗಿರುವ ಅವರು ಈ ಬಾರಿ ಪ್ರಬಲ ಪೈಪೋಟಿ ನೀಡಿದ್ದಾರೆ.
ಅಚ್ಚರಿಯ ವಿಷಯವೆಂದರೆ ಕ್ಷೇತ್ರದಲ್ಲಿ ಮಹಿಳಾ ಮತದಾರರ ಸಂಖ್ಯೆಯೇ ಹೆಚ್ಚು. ಕ್ಷೇತ್ರದ 2,81,676 ಮತದಾರರದಲ್ಲಿ ಪುರುಷರು 1,40,674. ಮಹಿಳೆಯರು 1,41,002. ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಶೇ 81.77ರಷ್ಟು ಮತದಾನವಾಗಿತ್ತು. ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿ ಮತ್ತು ಕಾಂಗ್ರೆಸ್ ಭಾರೀ ಕಸರತ್ತು ನಡೆಸಿದ್ದವು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications