Get Updates
Get notified of breaking news, exclusive insights, and must-see stories!

Madhya Pradesh; ಬಿಜೆಪಿ ಗೆದ್ದರೂ ಸೋಲುಂಡ 10ಕ್ಕೂ ಅಧಿಕ ಸಚಿವರು!

ಭೋಪಾಲ್, ಡಿಸೆಂಬರ್ 04; ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮರಳಿ ಅಧಿಕಾರವನ್ನು ಪಡೆದಿದೆ. 230 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ 17ರಂದು ಚುನಾವಣೆ ನಡೆದಿತ್ತು. ಭಾನುವಾರ ಮತ ಎಣಿಕೆ ನಡೆದಿದೆ. ಬಿಜೆಪಿ 163, ಕಾಂಗ್ರೆಸ್ 66 ಮತ್ತು ಬಿಎಪಿ ಪಕ್ಷ 1 ಸ್ಥಾನದಲ್ಲಿ ಜಯಗಳಿಸಿದೆ.

ರಾಜ್ಯದ ಚುನಾವಣಾ ಪೂರ್ವ ಸಮೀಕ್ಷೆಗಳನ್ನು ಸುಳ್ಳಾಗಿಸಿದ ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿದಿದೆ. ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭಾರೀ ಹಿನ್ನಡೆ ಅನುಭವಿಸಿದೆ. ಆದರೆ ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್ ಚಿಂದ್ವಾರಾ ಕ್ಷೇತ್ರದಲ್ಲಿ ಎದುರಾಳಿ ಬಿಜೆಪಿಯ ವಿವೇಕ್ ಬಂಟಿ ಶಾಹೂ ವಿರುದ್ಧ ಗೆಲುವು ಸಾಧಿಸಿದ್ದಾರೆ.

Madhya Pradesh Election Results 2023 List Of Ministers Who Lost Elections

ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 116. ಬಿಜೆಪಿ 163 ಕ್ಷೇತ್ರಗಳಲ್ಲಿ ಗೆದ್ದು ಸ್ಪಷ್ಟ ಬಹುಮತ ಪಡೆದಿದೆ. ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಬುಧ್ನಿ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ ಅವರೇ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆಯೇ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.

12 ಸಚಿವರ ಸೋಲು; ಬಿಜೆಪಿ ಶೇ 48.55ರಷ್ಟು ಮತಗಳಿಕೆಯೊಂದಿಗೆ 163 ಸ್ಥಾನಗಳಲ್ಲಿ ಜಯಗಳಿಸಿದರೂ ಸಹ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಸಂಪುಟದ 12 ಸಚಿವರು ಸೋಲು ಕಂಡಿರುವುದು ಅಚ್ಚರಿಗೆ ಕಾರಣವಾಗಿದೆ.

ರಾಜ್ಯದ ಪ್ರಭಾವಿ ನಾಯಕ, ಗೃಹ ಸಚಿವ ನರೋತ್ತಮ್ ಮಿಶ್ರಾ ದಾಟಿಯಾ ಕ್ಷೇತ್ರದಲ್ಲಿ 7,742 ಮತಗಳ ಅಂತರದಲ್ಲಿ ಕಾಂಗ್ರೆಸ್‌ನ ರಾಜೇಂದ್ರ ಭಾರತಿ ವಿರುದ್ಧ ಸೋಲು ಕಂಡಿದ್ದಾರೆ. ಮತ್ತೊಬ್ಬ ಸಚಿವ ಅರವಿಂದ್ ಬರೋರಿಯಾ 20,228 ಮತಗಳ ಅಂತರದಿಂದ ಸೋತಿದ್ದಾರೆ.

ಕಮಲ್ ಪಟೇಲ್ 870 ಮತಗಳಿಂದ, ಗೌರಿ ಶಂಕರ್ ಬಿಸೇನ್ 29,195 ಮತ, ಪ್ರೇಮ್ ಸಿಂಗ್ ಪಟೇಲ್ 11,172 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಮಹೇಂದ್ರ ಸಿಂಗ್ ಸಿಸೋಡಿಯಾ 14,796 ಮತಗಳಿಂದ ರಾಜವರ್ಧನ್ ಸಿಂಗ್ 2976 ಮತಗಳಿಂದ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ.

ಭರತ್ ಸಿಂಗ್ ಕುಶ್ವಾ 3282 ಮತ, ರಾಮ್ ಖೆಲ್ವಾನ್ ಪಟೇಲ್ 6490 ಮತ, ಸುರೇಶ್ ದಾಖಡ್ 49,481 ಮತಗಳಿಂದ, ರಾಮ್‌ ಕಿಶೋರ್ ಕ್ವಾರೆ 25,948 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಬಿಜೆಪಿ ಸಚಿವರನ್ನು ಸೋಲಿಸಿದ ಕೆಲ ಕಾಂಗ್ರೆಸ್ ಅಭ್ಯರ್ಥಿಗಳು ಚುನಾವಣೆಗೆ ಕೆಲವೇ ದಿನ ಇರುವಾಗ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದವರು ಎಂಬುದು ಕಹಿ ಸತ್ಯ.

ಅಚ್ಚರಿಯ ವಿಚಾರ ಎಂದರೆ ಸಚಿವರಾದ ಮಹೇಂದ್ರ ಸಿಂಗ್ ಸಿಸೋಡಿಯಾ ಮತ್ತು ರಾಜವರ್ಧನ್ ಸಿಂಗ್ ಕೇಂದ್ರ ವಿಮಾನಯಾನ ಖಾತೆ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಆಪ್ತರು. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಭನ್ವರ್ ಸಿಂಗ್ ಶೆಖಾವರ್ ರಾಜವರ್ಧನ್ ಸಿಂಗ್‌ ಸೋಲಿಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿರುವ ಬಿಜೆಪಿ ಸರ್ಕಾರ ರಚನೆ ಕಸರತ್ತು ಆರಂಭಿಸಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಸಿಎಂ ಹುದ್ದೆಗೆ ರಾಜೀನಾಮೆ ನೀಡಲಿದ್ದು, ಹೊಸ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಯಾವಾಗ? ಎಂಬುದು ಇನ್ನೂ ಅಂತಿಮವಾಗಿಲ್ಲ.

ಶಿವರಾಜ್ ಸಿಂಗ್ ಚೌವ್ಹಾಣ್, ಜ್ಯೋತಿರಾಧಿತ್ಯ ಸಿಂಧಿಯಾ ಹೆಸರು ಮುಖ್ಯಮಂತ್ರಿ ಹುದ್ದೆಗೆ ಪ್ರಬಲವಾಗಿ ಕೇಳಿ ಬರುತ್ತಿದೆ. ಬಿಜೆಪಿ ಇನ್ನೂ ಶಾಸಕಾಂಗ ಪಕ್ಷದ ಸಭೆಗೆ ದಿನಾಂಕ ನಿಗದಿ ಮಾಡಿಲ್ಲ. ಕೇಂದ್ರದ ವರಿಷ್ಠರು ರಾಜ್ಯಕ್ಕೆ ವೀಕ್ಷಕರನ್ನು ಸಹ ನೇಮಕ ಮಾಡಿಲ್ಲ. ಈ ವಾರದಲ್ಲಿ ಹೊಸ ಮುಖ್ಯಮಂತ್ರಿ ಪ್ರಮಾಣ ವಚನ ನಡೆಯುವ ನಿರೀಕ್ಷೆ ಇದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+