Madhya Pradesh; ಕಾಂಗ್ರೆಸ್, ಬಿಜೆಪಿ ನಡುವೆ ತೀವ್ರ ಪೈಪೋಟಿ
ಭೋಪಾಲ್, ಡಿಸೆಂಬರ್ 03; ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆ 2023ರ ಮತ ಎಣಿಕೆ ಭಾನುವಾರ ನಡೆಯುತ್ತಿದೆ. ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 17ರ ಶುಕ್ರವಾರ ಒಂದೇ ಹಂತದಲ್ಲಿ ಮತದಾನ ನಡೆದಿತ್ತು.
2024ರ ಲೋಕಸಭಾ ಚುನಾವಣೆಗೆ ಮೊದಲು ವಿಧಾನಸಭೆ ಚುನಾವಣೆ ನಡೆಯುತ್ತಿರುವ ರಾಜ್ಯಗಳಲ್ಲಿ ಮಧ್ಯಪ್ರದೇಶ ಸಹ ಒಂದು. ಈ ಬಾರಿ ರಾಜ್ಯದಲ್ಲಿ ದಾಖಲೆಯ 76.22ರಷ್ಟು ಮತದಾನವಾಗಿತ್ತು. ರಾಜ್ಯದಲ್ಲಿ ಅಧಿಕಾರದಲ್ಲಿರುವ ಪಕ್ಷ ಬಿಜೆಪಿ.

ಬಿಜೆಪಿಯ ಶಿವರಾಜ್ ಸಿಂಗ್ ಚೌವ್ಹಾಣ್ ಮತ್ತು ಕಾಂಗ್ರೆಸ್‌ನ ಕಮಲ್ ನಾಥ್ ರಾಜ್ಯದ ಪ್ರಮುಖ ನಾಯಕರು. ಕಾಂಗ್ರೆಸ್ ಮತ್ತು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡದೇ ವಿಧಾನಸಭೆ ಚುನಾವಣೆಯನ್ನು ಎದುರಿಸಿವೆ.
ಭಾನುವಾರ ಬೆಳಗ್ಗೆ 8 ಗಂಟೆಗೆ ಮಧ್ಯಪ್ರದೇಶದಲ್ಲಿ ಅಂಚೆ ಮತಗಳ ಎಣಿಕೆ ಆರಂಭವಾಗಿದೆ. 44 ಕ್ಷೇತ್ರಗಳಲ್ಲಿ ಕಾಂಗ್ರೆಸ್, 50 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿವೆ.
ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಪೈಪೋಟಿ ಇದೆ. ಅಂಚೆ ಮತಗಳ ಎಣಿಕೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಇದೆ. ಇದು ಕೇವಲ ಪ್ರಾಥಮಿಕ ಟ್ರೆಂಡ್ ಆಗಿದ್ದು, ಇವಿಎಂ ಯಂತ್ರಗಳ ಮತ ಎಣಿಕೆ ಹೊತ್ತಿಗೆ ಟ್ರೆಂಡ್ ಬದಲಾದರೂ ಅಚ್ಚರಿ ಇಲ್ಲ.
ರಾಜ್ಯದಲ್ಲಿ ನಡೆದ ಚುನಾವಣೋತ್ತರ ಸಮೀಕ್ಷೆಗಳು ಸಹ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ಇದೆ ಎಂದು ಅಂದಾಜಿಸಿದ್ದವು. 230 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್ ನಂಬರ್ 116.
ಮಧ್ಯಪ್ರದೇಶ ರಾಜ್ಯದ ಪ್ರತಿಪಕ್ಷ ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇದೆ. ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಅಂದಾಜಿಸಿದೆ. ಪ್ರಧಾನಿ ನರೇಂದ್ರ ಮೋದಿ ಪ್ರಚಾರ, ಶಿವರಾಜ್ ಸಿಂಗ್ ಚೌವ್ಹಾಣ್ ಮೂರು ವರ್ಷಗಳ ಆಡಳಿತಕ್ಕೆ ರಾಜ್ಯದ ಜನರು ಹೇಗೆ ಬೆಂಬಲ ನೀಡಿದ್ದಾರೆ? ಎಂದು ಕಾದು ನೋಡಬೇಕಿದೆ.
130 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಪಕ್ಷ ಅಧಿಕಾರ ಪಡೆಯಲಿದೆ. ಇದನ್ನು ಹಿಂದೆಯೂ ಹಲವು ಬಾರಿ ನಾನು ಹೇಳಿದ್ದೆ. ಈಗಲೂ ಹೇಳುತ್ತಿದ್ದೇನೆ ಎಂದು ಮಧ್ಯಪ್ರದೇಶ ರಾಜ್ಯದ ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.












Click it and Unblock the Notifications