Madhya Pradesh; ಮಧ್ಯಪ್ರದೇಶದ ಮುಖ್ಯಮಂತ್ರಿ ಯಾರು?

ಭೋಪಾಲ್, ಡಿಸೆಂಬರ್ 03; ಮಧ್ಯಪ್ರದೇಶ ವಿಧಾನಸಭಾ ಚುನಾವಣೆ 2023ರಲ್ಲಿ ಬಿಜೆಪಿ ಅಭೂತಪೂರ್ವ ಜಯಸಾಧಿಸಿದೆ. 5ನೇ ಬಾರಿಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ. ಆದರೆ ಮುಖ್ಯಮಂತ್ರಿ ಯಾರು?. ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅಥವ ಶಿವರಾಜ್ ಸಿಂಗ್ ಚೌವ್ಹಾಣ್?.

ಡಿಸೆಂಬರ್ 3ರ ಭಾನುವಾರ ವಿಧಾನಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 17ರಂದು ಮತದಾನ ನಡೆದಿತ್ತು. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 116. ಈಗಾಗಲೇ ಬಿಜೆಪಿ 161 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ.

Madhya Pradesh Election Results 2023 Who Will Next CM Jyotiraditya Scindia Shivraj Singh

ರಾಜ್ಯದಲ್ಲಿ ಬಿಜೆಪಿ ಗೆಲುವಿನಲ್ಲಿ ಜ್ಯೋತಿರಾಧಿತ್ಯ ಸಿಂಧಿಯಾ ಪಾತ್ರವನ್ನು ಯಾರೂ ಅಲ್ಲಗಳೆಯುವಂತಿಲ್ಲ. ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದಾಗ 22 ಶಾಸಕರು ಅವರ ಜೊತೆ ಹೋದರು. ಕಮಲ್‌ನಾಥ್ ಸರ್ಕಾರ ಬಹುಮತ ಕಳೆದುಕೊಂಡು ಪತನಗೊಂಡಿತು. ಈ ಬಾರಿ ಬಿಜೆಪಿ ಗೆಲುವಿನಲ್ಲಿಯೂ ಸಿಂಧಿಯಾ ಪ್ರಭಾವ ಕೆಲಸ ಮಾಡಿದೆ.

ಸಿಎಂ ಯಾರಾಗಲಿದ್ದಾರೆ?; ಜ್ಯೋತಿರಾಧಿತ್ಯ ಸಿಂಧಿಯಾ, ಶಿವರಾಜ್ ಸಿಂಗ್ ಚೌವ್ಹಾಣ್ ಇಬ್ಬರ ಹೆಸರು ಸಹ ಮುಖ್ಯಮಂತ್ರಿ ಹುದ್ದೆಗೆ ಕೇಳಿ ಬರುತ್ತಿದೆ. ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡದೇ ಚುನಾವಣೆಯನ್ನು ಎದುರಿಸಿದೆ.

ಭಾನುವಾರ ಬೆಳಗ್ಗೆ ಜ್ಯೋತಿರಾಧಿತ್ಯ ಸಿಂಧಿಯಾ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ಇದುವರೆಗೆ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಫಲಿತಾಂಶ ಘೋಷಣೆಯಾದ ಬಳಿಕ ಈ ಕುರಿತು ಪಕ್ಷ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಹಲವು ಸವಾಲು ಎದುರಿಸಿತ್ತು. ಕೇಂದ್ರ ಸಚಿವರನ್ನು, ಸಂಸದರನ್ನು ಕಣಕ್ಕಿಳಿಸಿ ಪಕ್ಷ ಹೊಸ ತಂತ್ರ ರಚನೆ ಮಾಡಿತ್ತು. ಚುನಾವಣಾ ಪೂರ್ವ ಸಮೀಕ್ಷೆಗಳು ಬಿಜೆಪಿ ಸೋಲು ಕಾಣಲಿದೆ ಎಂದು ಹೇಳಿತ್ತು. ಆದರೆ ಚುನಾವಣಾ ಫಲಿತಾಂಶ ಬಿಜೆಪಿ ಪರವಾಗಿಯೇ ಬಂದಿದೆ.

2018ರ ಚುನಾವಣೆಯಲ್ಲಿ ಕಾಂಗ್ರೆಸ್ 114 ಕ್ಷೇತ್ರಗಳಲ್ಲಿ ಜಯಗಳಿಸಿತು. ಬಹುಮತ ಪಡೆಯಲು 2 ಸ್ಥಾನದ ಕೊರತೆ ಎದುರಾಯಿತು. ಆಗಲೂ ಪಕ್ಷದ ಗೆಲುವಿನಲ್ಲಿ ಜ್ಯೋತಿರಾಧಿತ್ಯ ಸಿಂಧಿಯಾ ಪಾತ್ರ ದೊಡ್ಡದಿತ್ತು. ಅವರು ಮುಖ್ಯಮಂತ್ರಿಯಾಗಲಿದ್ದಾರೆ? ಎಂಬ ಲೆಕ್ಕಾಚಾರವಿತ್ತು. ಆದರೆ ಕಮಲ್‌ನಾಥ್ ಮುಖ್ಯಮಂತ್ರಿಯಾದರು.

ಜ್ಯೋತಿರಾಧಿತ್ಯ ಸಿಂಧಿಯಾ ಪಕ್ಷದ ವಿರುದ್ಧ ಬಂಡಾಯವೆದ್ದರು. ಬಿಜೆಪಿ ಸೇರಿದರು, 22 ಶಾಸಕರು ಅವರನ್ನು ಹಿಂಬಾಲಿಸಿದರು. ಕಮಲ್‌ನಾಥ್ ಸರ್ಕಾರ ಬಹುಮತ ಕಳೆದುಕೊಂಡು ಪತನಗೊಂಡಿತು. ಸಿಂಧಿಯಾ ಸಂಸದರಾಗಿ ಕೇಂದ್ರ ವಿಮಾನಯಾನ ಖಾತೆ ಸಚಿವರಾದರು.

ಈ ಬಾರಿಯ ಚುನಾವಣೆಗೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಶಿವರಾಜ್ ಸಿಂಗ್ ಚೌವ್ಹಾಣ್ ಮತ್ತು ಜ್ಯೋತಿರಾಧಿತ್ಯ ಸಿಂಧಿಯಾ ಇಬ್ಬರ ಹೆಸರು ಸಹ ಪ್ರಮುಖವಾಗಿ ಕೇಳಿ ಬರುತ್ತಿದೆ. ಆದರೆ ಯಾರು ಸಿಎಂ?.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+