Madhya Pradesh Opinion Poll 2023: ಕರ್ನಾಟಕದಂತೆ ಮಧ್ಯಪ್ರದೇಶದಲ್ಲೂ ಒನ್‌ಸೈಡೆಡ್‌ ಗೇಮ್‌- ನಿಖರ ಸಮೀಕ್ಷೆಯ ಅಂಕಿಅಂಶ, ವಿವರ

ಮಧ್ಯಪ್ರದೇಶ ವಿಧಾನಸಭೆಯ ಚುನಾವಣಾ ದಿನಾಂಕ ಪ್ರಕಟಗೊಂಡಿದೆ. ನವೆಂಬರ್‌ 17 ರಂದು ಮಧ್ಯಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಡಿಸೆಂಬರ್‌ 3 ರಂದು ಫಲಿತಾಂಶ ಹೊರಬೀಳಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಧ್ಯಪ್ರದೇಶದಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಮಧ್ಯಪ್ರದೇಶದಲ್ಲಿ ಕಳೆದ ಬಾರಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಬಂದಿತ್ತು. ಕಮಲ್‌ನಾಥ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಅಧಿಕಾರದ ಗದ್ದುಗೆ ಏರಿತ್ತು. ಆದರೆ, ಕಮಲ್‌ನಾಥ್‌ ಅವರ ಸರ್ಕಾರವು ಒಂದುವರೆ ವರ್ಷವಷ್ಟೇ ಆಡಳಿತ ನಡೆಸಲು ಸಫಲವಾಗಿತ್ತು.

Madhya Pradesh Opinion Poll 2023: which political party going to get majority in MP?

ಬಿಜೆಪಿ ನಡೆಸಿದ ಆಪರೇಷನ್‌ ಕಮಲದಲ್ಲಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಅವರ ಬೆಂಬಲಿಗರು ಕೇಸರಿ ಪಾಳಯಕ್ಕೆ ಸೇರಿದರು. ಶಿವರಾಜ್‌ ಸಿಂಗ್‌ ಚೌಹಾಣ್‌ ನೇತೃತ್ವದಲ್ಲಿ ಬಿಜೆಪಿಯು ಮಧ್ಯಪ್ರದೇಶದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರಿದೆ.

ಮಧ್ಯಪ್ರದೇಶದಲ್ಲಿ ಶಿವರಾಜ್‌ ಸಿಂಗ್‌ ಚೌಹಾಣ್‌ ನೇತೃತ್ವದ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಮೇಲಾಗಿ, ಬಿಜೆಪಿ ಹೈಕಮಾಂಡ್‌ ಸ್ಥಳೀಯ ನಾಯಕರಿಗೆ ಮನ್ನಣೆ ನೀಡುತ್ತಿಲ್ಲವೆಂಬ ಮಾತುಗಳೂ ಕೇಳಿಬಂದಿದೆ.

ಕರ್ನಾಟಕದಂತೆ ಮಧ್ಯಪ್ರದೇಶದಲ್ಲೂ ಪ್ರಧಾನಿ ಮೋದಿಯೇ ಸ್ಟಾರ್‌ ಕ್ಯಾಂಪೇನರ್‌ ಆಗಿದ್ದಾರೆ. ಈಗಾಗಲೇ ಎರಡು ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿರುವ ಬಿಜೆಪಿ ಏಳು ಸಂಸದರಿಗೆ ಟಿಕೆಟ್‌ ನೀಡಿದೆ. ಇದು ಸ್ಥಳೀಯ ನಾಯಕರನ್ನು ಕೆರಳಿಸಿದೆ ಎಂದು ಹೇಳಲಾಗುತ್ತಿದೆ.

Madhya Pradesh Opinion Poll 2023: which political party going to get majority in MP?

ಕೇಂದ್ರ ನಾಯಕರಿಗೆ ಮಣೆ ಹಾಕುತ್ತಿರುವುದು ಬಿಜೆಪಿಯ ಸ್ಥಳೀಯ ನಾಯಕರ ಬಂಡಾಯಕ್ಕೂ ಕಾರಣವಾಗಬಹುದು ಎಂಬ ಅಭಿಪ್ರಾಯಗಳು ವ್ಯಕ್ತವಾಗಿದೆ.

ಬಿಜೆಪಿಗೆ ಪೈಪೋಟಿ ನೀಡುತ್ತಿರುವ ಕಾಂಗ್ರೆಸ್‌ ಕರ್ನಾಟಕದಂತೆಯೇ ಗ್ಯಾರಂಟಿಗಳನ್ನು ಘೋಷಿಸಿದೆ. ಪಕ್ಷದ ನಾಯಕರಾದ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ವ್ಯಾಪಕ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಬಿಜೆಪಿ ಅಧಿಕಾರ ವಿರೋಧಿ ಅಲೆಯನ್ನು ಬಳಸಿಕೊಳ್ಳುವತ್ತ ಕಾಂಗ್ರೆಸ್‌ ನಾಯಕರು ಚಿತ್ತ ನೆಟ್ಟಿದ್ದಾರೆ. ಒಟ್ಟಾರೆಯಾಗಿ ಹೇಳುವುದಾದರೆ, ಮಧ್ಯಪ್ರದೇಶದಲ್ಲಿ ಈ ಬಾರಿ ಬಿಜೆಪಿಗಿಂತ ಕಾಂಗ್ರೆಸ್‌ ಪರ ಅಲೆ ಇರುವುದು ಗೋಚರವಾಗುತ್ತಿದೆ.

ಇತ್ತೀಚೆಗೆ ಬಂದಿರುವ ಸಮೀಕ್ಷೆಗಳು ಇದನ್ನೇ ಹೇಳುತ್ತಿವೆ. ಈ ವರೆಗೂ ಬಂದಿರುವ ಯಾವುದೇ ಸಮೀಕ್ಷೆಗಳು ಬಿಜೆಪಿ ಗೆಲುವಿನ ಮುನ್ಸೂಚನೆಯನ್ನು ನೀಡಿಲ್ಲವೆಂಬುದನ್ನು ನಾವಿಲ್ಲಿ ಗಮನಿಸಬೇಕಿದೆ.

Madhya Pradesh Opinion Poll 2023: which political party going to get majority in MP?

ಗ್ರೌಂಡ್‌ ಜಿರೋ ರಿಸರ್ಚ್‌ ಸಮೀಕ್ಷೆ ಹೇಳುವುದೇನು?

ಮಧ್ಯಪ್ರದೇಶದ ಚುನಾವಣಾ ಸಮೀಕ್ಷೆಯನ್ನು ಗ್ರೌಂಡ್‌ ಜಿರೋ ರಿಸರ್ಚ್ ಸಂಸ್ಥೆ ಕೈಗೊಂಡಿದೆ. ಈ ಸಮೀಕ್ಷೆಯ ಪ್ರಕಾರ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತ ಪಡೆಯಲಿದೆ. ಬಿಜೆಪಿ ಹೀನಾಯ ಸೋಲನ್ನು ಅನುಭವಿಸಲಿದೆ.

160 ಕ್ಷೇತ್ರಗಳಲ್ಲಿ ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 5 ರ ವರೆಗೆ ಸಮೀಕ್ಷೆಯನ್ನು ನಡೆಸಲಾಗಿದೆ. ಎಲ್ಲಾ ಜಾತಿಗಳು, ಸಮುದಾಯಗಳು ಮತ್ತು ಸಮಸ್ಯೆಗಳನ್ನು ಮುಖಾಮುಖಿ ಸಂದರ್ಶನಗಳನ್ನು ಸಮೀಕ್ಷೆ ಒಳಗೊಂಡಿದೆ.

ಸಮೀಕ್ಷೆ ಪ್ರಕಾರ, ಮಧ್ಯಪ್ರದೇಶದ 230 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷವು 126 ರಿಂದ 131 ಸ್ಥಾನಗಳನ್ನು ಗಳಿಸಲಿದೆ. ಬಿಜೆಪಿಯು 100 ರಿಂದ 105 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು ಎಂದು ಸಮೀಕ್ಷೆ ಹೇಳಿದೆ.

ಉಳಿದಂತೆ ಪಕ್ಷೇತರರು 2 ರಿಂದ 4 ಸ್ಥಾನಗಳನ್ನು ಗಳಿಸಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಕಾಂಗ್ರೆಸ್‌ಗೆ ಶೇ 45 ರಿಂದ ಶೇ 45 ಮತ ಪ್ರಮಾಣ ದೊರೆಯಲಿದೆ. ಬಿಜೆಪಿಗೆ ಶೇ 41 ರಿಂದ ಶೇ 43ರಷ್ಟು ಮತಗಳು ಸಿಗಲಿವೆ. ಪಕ್ಷೇತರರು ಶೇ 16 ರಿಂದ 18 ಮತಗಳು ಸಿಗಲಿವೆ ಎಂದು ಸಮೀಕ್ಷೆ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+