ಮಧ್ಯಪ್ರದೇಶ: ಮಹಿಳೆಗೆ ಮನಬಂದಂತೆ ಥಳಿಸಿದ ಪತಿ ಮತ್ತು ಅತ್ತೆ

ರತ್ಲಾಮ್ ಡಿಸೆಂಬರ್ 19: ಮಧ್ಯಪ್ರದೇಶದ ರತ್ಲಾಮ್‌ನಲ್ಲಿ 30 ವರ್ಷದ ಮಹಿಳೆಯನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿರುವ ಘಟನೆ ಮಧ್ಯಪ್ರದೇಶದ ರತ್ಲಾಮ್‌ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಮಹಿಳೆ ರಕ್ತಸಿಕ್ತಳಾಗಿ ಅಳುತ್ತಿರುವುದನ್ನು ಕಾಣಬಹುದು.

ಮಹಿಳೆ ತನ್ನ ಪತಿಯಿಂದ ಬೇರ್ಪಟ್ಟು ಕಳೆದ ಕೆಲವು ತಿಂಗಳುಗಳಿಂದ ಬೇರೆ ಪುರುಷನೊಂದಿಗೆ ನೆಲೆಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯನ್ನು ಪತಿ ಮತ್ತು ಅತ್ತೆ ಗಂಡನ ಮನೆಗೆ ಹಿಂತಿರುಗುವಂತೆ ಒತ್ತಾಯಿಸಿದರು. ಆದರೆ ಅವಳು ನಿರಾಕರಿಸಿದಳು. ಬಳಿಕ ಮನೆಗೆ ಬೀಗ ಹಾಕಿ ಬೇರೆಡೆಗೆ ತೆರಳಿದ್ದಳು ಎಂದು ತಿಳಿದು ಬಂದಿದೆ.

Madhya Pradesh: Woman brutally beaten by husband and mother-in-law

ಮಹಿಳೆ ಮತ್ತೆ ಹಳ್ಳಿಗೆ ಬಂದು ತನ್ನ ಗಂಡನ ಖಾಲಿ ಮನೆಯಲ್ಲಿ ವಾಸಿಸಲು ಪ್ರಾರಂಭಿಸಿದಳು. ಆಕೆ ಹಿಂದಿರುಗಿದ ಬಗ್ಗೆ ಗ್ರಾಮಸ್ಥರು ಆಕೆಯ ಪತಿ ಮತ್ತು ಅತ್ತೆಯವರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ಕೋಪಗೊಂಡ ಕುಟುಂಬಸ್ಥರು ಗ್ರಾಮಕ್ಕೆ ಬಂದು ಅವಳನ್ನು ಬರ್ಬರವಾಗಿ ಥಳಿಸಿದ್ದಾರೆ. ಪತಿ ಸೇರಿದಂತೆ ಎಂಟು ಮಂದಿ ಆಕೆಗೆ ಮನಬಂದಂತೆ ಥಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ನಂತರ ಮಹಿಳೆಯನ್ನು ಮರಕ್ಕೆ ಕಟ್ಟಿ ದೊಣ್ಣೆಗಳಿಂದ ಥಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಕೆಯನ್ನು ಪೊಲೀಸ್ ಅಧಿಕಾರಿಗಳು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆಕೆಯ ಪತಿ ಮತ್ತು ಇತರ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+