ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಯಾ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಬಹಿರಂಗ ಪಡಿಸಿ: ಹೈಕೋರ್ಟ್ ಆದೇಶ!

By Ramesh
|
Google Oneindia Kannada News

ಚೆನ್ನೈ, ಅಕ್ಟೋಬರ್. 04 : ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ಸ್ಥಿತಿ ಬಗ್ಗೆ ಊಹಾಪೋಹಗಳು ಹರಡುತ್ತಿದ್ದಂತೆ, ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಬಹಿರಂಗ ಪಡಿಸಿ ಎಂದು ಮಂಗಳವಾರ ಮದ್ರಾಸ್ ಹೈಕೋರ್ಟ್ ಅಪೋಲೋ ಆಸ್ಪತ್ರೆ ವೈದ್ಯರಿಗೆ ಸೂಚನೆ ನೀಡಿದೆ.

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಬಹಿರಂಗ ಪಡಿಸಿ ಎಂದು ಸಾಮಾಜಿಕ ಕಾರ್ಯಕರ್ತ ರಾಮಸ್ವಾಮಿ ಎನ್ನುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಎಐಎಡಿಎಂಕೆ ನಾಯಕಿ ಜೆ. ಜಯಲಲಿತಾ ಅವರ ಆರೋಗ್ಯ ಸ್ಥಿತಿ ಬಗ್ಗೆ ಗುರುವಾರದೊಳಗೆ (ಅಕ್ಟೋಬರ್ 6) ಮಾಹಿತಿ ನೀಡಿ ಎಂದು ಅಪೋಲೋ ಆಸ್ಪತ್ರೆ ವೈದ್ಯರಿಗೆ ಆದೇಶಿಸಿದೆ. [ಜಯಲಲಿತಾ ಆರೋಗ್ಯ ಮಾಹಿತಿಗಾಗಿ ಹೈಕೋರ್ಟ್ ಗೆ ಪಿಐಎಲ್]

Jaya

68ರ ಜಯಲಲಿತಾ ಕಳೆದ 12 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿರ್ಜಲೀಕರಣ ಮತ್ತು ಜ್ವರದಿಂದ ಬಳಲುತ್ತಿದ್ದ ಜಯಾ ಅವರನ್ನು ಆಸ್ಪತ್ರೆಗೆ ದಾಖಲಿಸಿದ ನಂತರ ಅವರ ಆರೋಗ್ಯ ಸ್ಥಿತಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಊಹಾಪೋಹಗಳು ಹುಟ್ಟಿಕೊಂಡಿದ್ದವು.

ಜಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಕಲಿ ಫೋಟೋಗಳು ಸಾಮಾಜಿಕ ತಾಣದಲ್ಲಿ ಹರಿದಾಡಿದ್ದು ಮಾತ್ರವಲ್ಲದೆ ಜಯಾ ಸಾವಿನ ಬಗ್ಗೆ ವದಂತಿಯೂ ಕೇಳಿ ಬಂದಿತ್ತು.

ಹೀಗಿರುವಾಗ ಜಯಾ ಅವರ ಆರೋಗ್ಯ ಸ್ಥಿತಿ ಹೇಗಿದೆ? ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ನೀಡಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ 'ಟ್ರಾಫಿಕ್' ರಾಮಸ್ವಾಮಿ ಅವರು ಮದ್ರಾಸ್ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

English summary
The Madras High Court on Tuesday directed the doctors of the Apollo hospitals Chennai to submit a detailed report on Tamil Nadu Chief Minister J Jayalalithaa’s health condition by Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X