ಅಮಿತಾಬ್, ಮಾಧುರಿ ವಿರುದ್ಧ ಎಫ್ ಐಆರ್ ಹಾಕಿ: ಕೋರ್ಟ್
ಮುಜಾಫರ್ ನಗರ, ಜೂ. 02: ನೆಸ್ಲೆ ಸಂಸ್ಥೆಯ 2 ಮಿನಿಟ್ ನ ರೆಡಿಮೇಡ್ ಫುಡ್ ಮ್ಯಾಗಿ ಉತ್ಪನ್ನಗಳ ಕಳಪೆ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿನ ಸ್ಥಳೀಯ ನ್ಯಾಯಾಲಯವೊಂದು ಎಲ್ಲಾ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ತೀವ್ರಗೊಳಿಸುವಂತೆ ಪೊಲೀಸರಿಗೆ ಆದೇಶಿಸಿದೆ.
ಮ್ಯಾಗಿ ಪರ ಪ್ರಚಾರ ನಡೆಸಿದ ಅಮಿತಾಬ್ ಬಚ್ಚನ್, ಮಾಧುರಿ ದೀಕ್ಷಿತ್ ಹಾಗೂ ಪ್ರೀತಿ ಜಿಂಟಾ ವಿರುದ್ಧ ಎಫ್ ಐಆರ್ ದಾಖಲಿಸಲಾಗುತ್ತದೆ.
ನೆಸ್ಲೆ ಸಂಸ್ಥೆಯ 2 ಮಿನಿಟ್ ನ ರೆಡಿಮೇಡ್ ಫುಡ್ ಮ್ಯಾಗಿ ಉತ್ಪನ್ನಗಳ ಪರ ಪ್ರಚಾರ ನಡೆಸಿದ್ದಕ್ಕೆ ನೋಟಿಸ್ ಪಡೆದಿದ್ದ ಮಾಧುರಿ ದೀಕ್ಷಿತ್, ಅಮಿತಾಬ್ ಬಚ್ಚನ್, ನಟಿ ಪ್ರೀತಿ ಜಿಂಟಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನೆಸ್ಲೆ ಸಂಸ್ಥೆ ಸೇರಿ ಐವರ ವಿರುದ್ಧ ಪ್ರತ್ಯೇಕ ಪ್ರಕರಣಗಳು ಬಾರಾಬಂಕಿ ಎಸಿಜೆಎಂ ಕೋರ್ಟಿನಲ್ಲಿ ದಾಖಲಾಗಿದೆ.
ಎಫ್‌ಎಸ್‌ಡಿಎ ಆಯುಕ್ತ ಪಿ.ಪಿ.ಸಿಂಗ್‌ರವರ ಅನುಮತಿ ಮೇರೆಗೆ ಇಲ್ಲಿನ ಹೆಚ್ಚುವರಿ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ನೆಸ್ಲೆ ಇಂಡಿಯಾ ವಿರುದ್ಧ ಪ್ರಕರಣವೊಂದನ್ನು ದಾಖಲಿಸಲಾಗಿದೆ ಎಂದು ಬಾರಾಬಂಕಿಯ ಆಹಾರ ಸುರಕ್ಷತಾ ಅಧಿಕಾರಿ ವಿ.ಕೆ.ಪಾಂಡೆ ತಿಳಿಸಿದ್ದಾರೆ. [ಮ್ಯಾಗಿ ಪರ ಪ್ರಚಾರ, ಮಾಧುರಿ, ಬಿಗ್ ಬಿ, ಪ್ರೀತಿ ಮೇಲೆ ಕೇಸ್]

ನೆಸ್ಲೆ ಇಂಡಿಯಾದ ಮ್ಯಾಗಿ ಉತ್ಪನ್ನಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಮೊನೊಸೋಡಿಯಂ ಗ್ಲುಟಮೇಟ್ ಮತ್ತು ಸತುವಿನ ಅಂಶಗಳು ಮಾದರಿ ಪರೀಕ್ಷೆಯ ಸಂದರ್ಭದಲ್ಲಿ ಕಂಡುಬಂದಿತ್ತು.
ಬಾರಾಬಂಕಿಯಲ್ಲಿರುವ ಈಸೀ ಡೇ ಅಂಗಡಿ ಮಳಿಗೆಯಿಂದ ಮ್ಯಾಗಿಯ ಮಾದರಿ ಪ್ಯಾಕೆಟ್‌ಗಳನ್ನು ಎಫ್‌ಎಸ್‌ಡಿಎ ಅಧಿಕಾರಿಗಳು ಸಂಗ್ರಹಿಸಿದ್ದು, ಪ್ರಯೋಗಾಲಯದಲ್ಲಿ ಪರೀಕ್ಷೆಗೆಂದು ಕಳುಹಿಸಿದ್ದರು. [ಮ್ಯಾಗಿ ಪರ ಪ್ರಚಾರ, ಮಾಧುರಿಗೆ ಬಂತು ಗ್ರಹಚಾರ!]
ಮ್ಯಾಗಿ ಉತ್ಪನ್ನಗಳಲ್ಲಿ ಸತುವಿನ ಅಂಶ 17 ಪಟ್ಟು ಅಧಿಕವಾಗಿರುವುದು ಪತ್ತೆಯಾಗಿದೆ. ಐಪಿಸಿ ಸೆಕ್ಷನ್ 420, 272, 273 ಹಾಗೂ 109 ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ. [ಕವನ ಹಂಚಿದ ಬಿಗ್ ಬಿ ಅಮಿತಾಬ್ ಗೆ 'ಬಿಗ್' ಶಾಕ್]
ರಾಷ್ಟ್ರೀಯ ಗ್ರಾಹಕ ವ್ಯಾಜ್ಯ ಆಯೋಗದಲ್ಲಿ ಈ ಬಗ್ಗೆ ದೂರು ದಾಖಲಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು, ದೇಶದ ಯುವ ಜನತೆ ಹಾಗೂ ಮಕ್ಕಳ ಆರೋಗ್ಯದ ಜೊತೆ ಚೆಲ್ಲಾಟವಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಪ್ರತಿಕ್ರಿಯಿಸಿದ್ದಾರೆ. (ಪಿಟಿಐ)
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications