Prakash Raj: ಮಹಾ ಕುಂಭಮೇಳ: ಪ್ರಶಾಂತ್ ಸಂಬರಗಿಗೆ ಶಾಕ್ ಕೊಟ್ಟ ನಟ ಪ್ರಕಾಶ್‌ರಾಜ್!
ನಟ ಪ್ರಕಾಶ್‌ರಾಜ್ ಅವರು ಮಹಾ ಕುಂಭಮೇಳಕ್ಕೆ ಸಂಬಂಧಿಸಿದಂತೆ ವಿಡಿಯೋವೊಂದನ್ನು ಹಂಚಿಕೊಂಡ ಮೇಲೆ ಅವರ ಮೇಲೆ ಹಿಂದೂಗಳು ಮುಗಿಬಿದಿದ್ದರು. ಇದರ ಬೆನ್ನಲ್ಲೇ ಮಹಾ ಕುಂಭಮೇಳ 2025ರಲ್ಲಿ ನಟ ಪ್ರಕಾಶ್ ರಾಜ್ ಅವರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ ಎನ್ನಲಾದ ಫೋಟೋ ವೈರಲ್ ಆಗಿತ್ತು. ಇದನ್ನು ಕೃತಕ ಬುದ್ಧಿಮತ್ತೆ ಟೂಲ್ (AI) ಮೂಲಕ ರಚಿಸಲಾಗಿದೆ. ಇದರ ಬೆನ್ನಲ್ಲೇ ಪ್ರಕಾಶ್ ರಾಜ್ ಅವರು ದೂರು ದಾಖಲು ಮಾಡಿದ್ದಾರೆ. ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅವರು ಸೋಷಿಯಲ್ ಮೀಡಿಯಾದಲ್ಲಿ ಪ್ರಕಾಶ್ ರಾಜ್ ಅವರ AI ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದರು. ಈ ಫೋಟೋ ಭಾರೀ ವೈರಲ್ ಆಗಿತ್ತು.
ನಟ ಪ್ರಕಾಶ್ ರಾಜ್ ಅವರು ಇದೀಗ ಮತ್ತೊಂದು ವಿಷಯದಿಂದ ಸುದ್ದಿಯಲ್ಲಿ ಇದ್ದಾರೆ. ಪ್ರಕಾಶ್ ರಾಜ್ ಅವರು ರಾಜಕೀಯ ಹಾಗೂ ಹಿಂದೂ ಧರ್ಮದ ಕೆಲವೊಂದು ವಿಚಾರಗಳ ವಿಮರ್ಶೆ, ಚರ್ಚೆ ಮಾಡುವುದು ಇದೆ. ಆದರೆ ಅದರಿಂದ ಅವರು ಟ್ರೋಲ್‌ಗೆ ಗುರಿಯಾಗಿದ್ದೇ ಹೆಚ್ಚು. ಈಚೆಗೆ ಅವರು ಸೋಷಿಯಲ್ ಮೀಡಿಯಾದಲ್ಲಿ ಮಹಾಕುಂಭ ಮೇಳಕ್ಕೆ ಸಂಬಂಧಿಸಿದಂತೆ ಅವರು ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದರು.

ಮಹಾ ಕುಂಭಮೇಳಕ್ಕೆ ಭೇಟಿ ನೀಡಿದ್ದ ಮಹಿಳೆಯೊಬ್ಬರು ಅಲ್ಲಿ ಜನ ಸ್ವಚ್ಛತೆ ಕಾಪಾಡಿಕೊಳ್ಳುತ್ತಿಲ್ಲ. ಜನ ಇಲ್ಲಿ ಹೊಲಸು ಮಾಡುತ್ತಿದ್ದಾರೆ ಎಂದು ದೂರಿದ್ದರು. ಈ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದ ಪ್ರಕಾಶ್ ರಾಜ್ ಇದು ಅಸಹ್ಯಕರವಲ್ಲವೇ ಎಂದು ಪ್ರಶ್ನೆ ಮಾಡಿದ್ದರು. ಇದರ ಬೆನ್ನಲ್ಲೇ ಅವರು ಪ್ರಕಾಶ್ ರಾಜ್ ಅವರು ಸಹ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡುತ್ತಿರುವಂತಹ ಫೋಟೋ ವೈರಲ್ ಮಾಡಲಾಗಿತ್ತು.
ಸೋಷಿಯಲ್ ಮೀಡಿಯಾದಲ್ಲಿ ಪ್ರಶಾಂತ್ ಸಂಬರಗಿ ಅವರು ಪ್ರಕಾಶ್ ರಾಜ್ ಅವರ ಫೋಟೋ ಶೇರ್ ಮಾಡಿಕೊಂಡಿದ್ದರು. ಅಲ್ಲದೆ ಮಹಾಕುಂಭ ಮೇಳದಲ್ಲಿ ಪ್ರಕಾಶ್ ರಾಜ್ ಸ್ನಾನ ಮಾಡುತ್ತಿರುವಂತೆಯೂ. ಕುಂಭಮೇಳದಲ್ಲಿ ನಟ ಪ್ರಕಾಶ್‌ರಾಜ್ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು. ಪ್ರಕಾಶ್ ರಾಜ್ ಅವರ ಪಾಪಗಳನ್ನು ಮನ್ನಿಸಲಾಗುತ್ತದೆ. ಅವರ ಪಾಪ ಕಳೆಯುತ್ತದೆ ಎನ್ನುವ ಆಶಾಭಾವನೆ ಇದೆ ಎಂದು ಬರೆದುಕೊಂಡಿದ್ದರು. ಈ ಫೋಟೋ ಭಾರೀ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಪ್ರಕಾಶ್‌ರಾಜ್ ಅವರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.
ಕಾನೂನು ಹೋರಾಟಕ್ಕೆ ಮುಂದಾದ ಪ್ರಕಾಶ್‌ರಾಜ್: ಇನ್ನು ಈ ರೀತಿ ಫೇಕ್ ಫೋಟೋ ವೈರಲ್ ಮಾಡಿದ ಬೆನ್ನಲ್ಲೇ ನಟ ಪ್ರಕಾಶ್ ರಾಜ್ ಅವರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಶೇರ್ ಮಾಡಿಕೊಂಡು ರಿಯಾಕ್ಟ್ ಮಾಡಿರುವ ಪ್ರಕಾಶ್‌ರಾಜ್ ಅವರು, ಸುಳ್ಳು ಸುದ್ದಿ... ಸುಳ್ಳು ರಾಜನ ಹೇಡಿಗಳ ಸೈನ್ಯಕ್ಕೆ ಎನ್ನುವ ಸಾಲುಗಳೊಂದಿಗೆ ಟ್ವೀಟ್ ಮಾಡಿದ್ದಾರೆ. ಮುಂದುವರಿದು ಅವರ ಪವಿತ್ರ ಪೂಜೆಯಲ್ಲೂ ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಹೊಲಸು ಮಾಡುವುದೇ ಕೆಲಸ ಎಂದು ಕಿಡಿ ಕಾರಿದ್ದಾರೆ. ಈ ಸಂಬಂಧ ಪೊಲೀಸ್ ದೂರು ದಾಖಲಾಗಿದೆ. ಮುಂದೆ ಕೋರ್ಟಿನ ಕಟಕಟೆಯಲ್ಲಿ ಏನು ಮಾಡುತ್ತಾರೋ ನೋಡೋಣ ಎಂದು ನಟ ಪ್ರಕಾಶ್ ರಾಜ್ ಅವರು ಹೇಳಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ: ನಟ ಪ್ರಕಾಶ್‌ರಾಜ್ ಅವರ ಟ್ವೀಟ್‌ಗೆ ಸೋಷಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.












Click it and Unblock the Notifications