ಮಹಾ ಕುಂಭಮೇಳದಲ್ಲಿ ಕಾಲ್ತುಳಿತ: ಮೃತರ ಕುಟುಂಬಸ್ಥರಿಗೆ ತಲಾ ₹25,00,000 ಹಣ ಪರಿಹಾರ ಘೋಷಣೆ
Maha Kumbh Stampede: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲಗಲಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 30 ಭಕ್ತರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದ್ದು, ಮೃತಪಟ್ಟಂತಹ ಮೃತ ಕುಟುಂಬಸ್ಥರಿಗೆ ಪರಿಹಾರ ನೀಡುವುದಾಗಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ಘೋಷಣೆ ಮಾಡಿದ್ದಾರೆ. ಹಾಗಾದರೆ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಉತ್ತರಪ್ರದೇಶದ ಪ್ರಯಾಗ್ ರಾಜ್‌ನ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟಂತಹ ಮೃತರ ಕುಟುಂಬಸ್ಥರಿಗೆ ತಲಾ 25,00,000 ರೂಪಾಯಿ ಪರಿಹಾರ ನೀಡುವುದಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಸುದ್ದಿಗಾರರಿಗೆ ಮಾತನಾಡಿದ ಯೋಗಿ ಆದಿತ್ಯನಾಥ್ ಅವರು, ಮಹಾ ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ 30 ಜನರು ಬಲಿಯಾದ ಬಳಿಕ, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ನ್ಯಾಯಾಂಗ ಆಯೋಗದಿಂದ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.
ಪೊಲೀಸ್ ಲೋಪಗಳ ಬಗ್ಗೆ ಪ್ರತ್ಯೇಕ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು. ಇದೇ ವೇಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಹಾ ಕುಂಭಮೇಳದಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿಗಳ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಟ್ರಾಫಿಕ್ ಜಾಮ್: ಕುಂಭಮೇಳದಿಂದಾಗಿ ಪ್ರಯಾಗ್‌ರಾಜ್ ರಸ್ತೆಗಳಲ್ಲಿ ಭಾರಿ ಜಾಮ್ ಉಂಟಾಗಿದೆ. ಬಿಹಾರದ ಕೈಮೂರ್ ಜಿಲ್ಲೆಯಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗಿದ್ದು, ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್)-19ರಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗಿದೆ.
ಪರಿಣಾಮ ಪ್ರಯಾಣಿಕರು ಮತ್ತು ಚಾಲಕರು ತೊಂದರೆಗೆ ಒಳಗಾಗಿದ್ದಾರೆ. ಆಂಬ್ಯುಲೆನ್ಸ್‌ನಂತಹ ತುರ್ತು ಸೇವೆಗಳಿಗೆ ದಾರಿ ಸಿಗುತ್ತಿಲ್ಲ. ಸ್ಥಳೀಯ ಪೊಲೀಸ್ ಆಡಳಿತವು ನಿರಂತರ ಪ್ರಯತ್ನಗಳನ್ನ ಮಾಡುತ್ತಿದ್ದು, ವಿವಿಧೆಡೆ ವಾಹನಗಳ ನಿಯಂತ್ರಣ ಮಾಡುತ್ತಿದ್ದಾರೆ. ಆದರೂ ಎರಡೂ ಮಾರ್ಗದಲ್ಲೂ ಸಂಚಾರ ಹದಗೆಟ್ಟಿದೆ.
ಅನೇಕ ಪ್ರಯಾಣಿಕರು 72 ಗಂಟೆಗಳಿಗೂ ಹೆಚ್ಚು ಕಾಲ ಜಾಮ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಕೆಲವರು ರೈಲಿನಲ್ಲಿ 8 ಗಂಟೆಗಳ ಕಾಲ ಕಳೆದಿದ್ದಾರೆ. ಸತತ 8 ಗಂಟೆಯಿಂದ ರೈಲು ಒಂದೇ ಜಾಗದಲ್ಲಿ ನಿಂತಿತ್ತು ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ.
ಮುರ್ಷಿದಾಬಾದ್‌ನಿಂದ ಕುಂಭಮೇಳಕ್ಕೆ ಛೋಟು ಕುಮಾರ್ ಎಂಬಾತ ಬಸ್ ಡ್ರೈವ್ ಮಾಡಿಕೊಂಡು ಹೊರಟಿದ್ದರು. ಅವರು ಹೇಳುವ ಪ್ರಕಾರ, ನಾನು 30 ಪ್ರಯಾಣಿಕರೊಂದಿಗೆ ಕುಂಭಕ್ಕೆ ಹೋಗುತ್ತಿದ್ದೇನೆ. ಬಿಹಾರ ಪ್ರವೇಶಿಸಿದ ತಕ್ಷಣ ಟ್ರಾಫಿಕ್ ಜಾಮ್ ಎದುರಾಗಿದೆ. ಕೇವಲ 12 ಗಂಟೆಗಳಲ್ಲಿ 50 ಕಿಲೋ ಮೀಟರ್ ದೂರ ಪ್ರಯಾಣಿಸಲು ಸಾಧ್ಯವಾಗಿದೆ ಎಂದಿದ್ದಾರೆ.
ಅಸನ್ಸೋಲ್‌ನಿಂದ ಚಂದೌಲಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅನಿತಾ ಶುಕ್ಲಾ ಹೇಳುವಂತೆ, ಮೂರು ದಿನಗಳ ಕಾಲ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿಕೊಂಡಿದ್ದೇವು. ಸತತ 8 ಗಂಟೆಗಳಿಂದ ನಮಗೆ ಕಾರು ಒಂದಿಂಚು ಕೂಡ ಚಲಿಸಲು ಸಾಧ್ಯವಾಗಲಿಲ್ಲ. ಯಾಕೆ ಇಷ್ಟೊಂದು ಜಾಮ್ ಆಗಿದೆ ಎಂದು ಗೊತ್ತಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.












Click it and Unblock the Notifications