Maha kumbh Mela Stampede: ಪ್ರಯಾಗ್ ರಾಜ್‌ ಕುಂಭಮೇಳ ಕಾಲ್ತುಳಿತ ಪ್ರಕರಣ: 16,000 ಮೊಬೈಲ್ ಸಂಖ್ಯೆಗಳ ತನಿಖೆ

Maha kumbh Mela Stampede: ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಜನವರಿ 29ರಂದು ಕಾಲ್ತುಳಿತ ದುರಂತ ಸಂಭವಿಸಿತ್ತು. ಈ ವೇಳೆ 30 ಸಾವು, 60 ಮಂದಿ ಭಕ್ತಾದಿಗಳು ಗಾಯಗೊಂಡಿದ್ದರು. ಈ ಬಗ್ಗೆ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪಡಿಗಣಿಸಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ, ಘಟನೆ ದಿನದಂದು ಸಂಗಮ್ ನೋಸ್ ಪ್ರದೇಶದಲ್ಲಿ ಸಕ್ರಿಯವಾಗಿದೆ ಎಂದು ಹೇಳಲಾದ 16,000ಕ್ಕೂ ಹೆಚ್ಚು ಮೊಬೈಲ್ ಸಂಖ್ಯೆಗಳ ದತ್ತಾಂಶಗಳನ್ನು ತನಿಖಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆ ಸಂಖ್ಯೆಗಳಲ್ಲಿ ಹಲವು ಪ್ರಸ್ತುತ ಸ್ವಿಚ್ ಆಫ್ ಆಗಿವೆ ಎಂದು ತನಿಖೆಯಿಂದ ತಿಳಿದುಬಂದಿದೆ.

Maha kumbh Mela Stampede Case Investigation of 16 000 Mobile Numbers

ನಿಯಂತ್ರಣ ಕೊಠಡಿಯಲ್ಲಿ ಸಂಗ್ರಹಿಸಿದ ಸಿಸಿಟಿವಿ ದೃಶ್ಯಾವಳಿಗಳಿಂದ ಮುಖ ಗುರುತಿಸುವಿಕೆ ಅಪ್ಲಿಕೇಶನ್ ಮೂಲಕ ಶಂಕಿತರನ್ನು ಗುರುತಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ವಸಂತ ಪಂಚಮಿಯ ಸಂದರ್ಭದಲ್ಲಿ ಸೋಮವಾರ ಬೆಳಗ್ಗೆ ನಡೆಯಲಿರುವ 3ನೇ ಅಮೃತ ಸ್ನಾನಕ್ಕೆ ಮುಂಚಿತವಾಗಿ ಪೊಲೀಸರು ಹೆಚ್ಚಿನ ಎಚ್ಚರಿಕೆ ವಹಿಸುವುದರೊಂದಿಗೆ ಆವರಣಕ್ಕೆ ಹೆಚ್ಚುವರಿ ಭದ್ರತೆಯನ್ನು ನಿಯೋಜನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

4ನೇ ಮಹಾ ಸ್ನಾನವು ಫೆಬ್ರವರಿ 12ರಂದು ಮಾಘ ಪೂರ್ಣಿಮೆಯಂದು ನಡೆಯಲಿದ್ದು, ಕೊನೆಯದು ಫೆಬ್ರವರಿ 26ರಂದು ಮಹಾ ಶಿವರಾತ್ರಿಯಂದು ನಡೆಯಲಿದೆ. ಮೌನಿ ಅಮಾವಾಸ್ಯೆಯ ಪವಿತ್ರ ಸ್ನಾನದ ಹಬ್ಬದಲ್ಲಿ ಪವಿತ್ರ ಸ್ನಾನಕ್ಕಾಗಿ ಭಾರಿ ಜನಸಮೂಹ ಜಮಾಯಿಸಿದ್ದರಿಂದ ಉಂಟಾದ ಕಾಲ್ತುಳಿತದಲ್ಲಿ 30 ಜನ ಸಾವಾನ್ನಪ್ಪಿದ್ದರು. ಅವರಲ್ಲಿ ಹೆಚ್ಚಿನವರು ಬಿಹಾರದವರಾಗಿದ್ದಾರೆ. ಇನ್ನು 60ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

30 ಸಾವು, 60 ಮಂದಿಗೆ ಗಾಯ: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲಗಲಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ ಈವರೆಗೂ 30 ಭಕ್ತರು ಮೃತಪಟ್ಟಿದ್ದು, 60 ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಯಾಗ್‌ ರಾಜ್ ಡಿಐಜಿ ವೈಭವ್ ಕೃಷ್ಣ ಮಾಹಿತಿ ನೀಡಿದ್ದರು. ಅಲ್ಲದೆ, ಮತ್ತೊಂದೆಡೆ ಮೃತರ ಸಂಖ್ಯೆ ಇನ್ನೂ ಏರಿಕೆಯಾಗುತ್ತಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ವೇಳೆ ಸಂಗಮದಲ್ಲಿ ಕಾಲ್ತುಳಿತದಂತಹ ಘಟನೆ ಸಂಭವಿಸಿದ ಬಳಿಕ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ಇನ್ನು ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯಕ್ಕೆ ಧಾವಿಸಿದೆ ಎಂದು ತಿಳಿಸಿದ್ದಾರೆ.

ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ: ಇನ್ನು ವಿಶ್ವಪ್ರಸಿದ್ಧ ತಿರುಪತಿ ತಿಮ್ಮಪ್ಪನ ಸರ್ವದರ್ಶನ ಟಿಕೆಟ್​​ ಖರೀದಿಯ ವೇಳೆ ಉಂಟಾದ ಕಾಲ್ತುಳಿತದಲ್ಲಿ ಮೃತಪಟ್ಟ ಭಕ್ತರ ಕುಟುಂಬಕ್ಕೆ ಆಂಧ್ರಪ್ರದೇಶ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಿತ್ತು. ವೈಕುಂಠ ಏಕಾದಶಿ ಹಿನ್ನೆಲೆ ತಿಮ್ಮಪ್ಪನ ದರ್ಶನಕ್ಕೆಂದು ದೇಶದ ವಿವಿಧೆಡೆಯಿಂದ ಭಕ್ತರು ತಿರುಪತಿಗೆ ಆಗಮಿಸಿದ್ದಾರೆ. ಸರ್ವದರ್ಶನ ಟಿಕೆಟ್​ ವಿತರಣೆಯ ವೇಳೆ ಜನರು ಏಕಾಏಕಿ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿತ್ತು. ಇದರಲ್ಲಿ 5 ಜನ ಮಹಿಳೆಯರು ಸೇರಿ 6 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+