ಉತ್ತರ ಪ್ರದೇಶದಲ್ಲಿ ಹಳಿ ತಪ್ಪಿದ ರೈಲು, 32 ಜನರಿಗೆ ಗಾಯ

ಜಭಲ್ಪುರದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ರೈಲು, ಮಹೋಬಾ ರೈಲು ನಿಲ್ದಾಣದ ಹತ್ತಿರ ಬರುತ್ತಿದ್ದಂತೆ ಹಳಿ ತಪ್ಪಿದೆ ಎಂದು ಮೂಲಗಳು ತಿಳಿಸಿವೆ.

ಲಕ್ನೋ, ಮಾರ್ಚ್30: ಮಹೋಬಾ ರೈಲು ನಿಲ್ದಾಣದ ಬಳಿ ಮಹಾ ಕೌಶಲ್ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿ 32 ಜನರು ಗಾಯಗೊಂಡಿದ್ದಾರೆ. ಗುರುವಾರ ಬೆಳಗಿನ ಜಾವ ಸುಮಾರು 2 ಗಂಟೆಗೆ ಈ ಘಟನೆ ನಡೆದಿದೆ.

ಈ ರೈಲು ಜಭಲ್ಪುರದಿಂದ ದೆಹಲಿಗೆ ಚಲಿಸುತ್ತಿತ್ತು. ಮಹೋಬಾ ರೈಲು ನಿಲ್ದಾಣದ ಸಮೀಪ ಬರುತ್ತಿದ್ದಂತೆ ಹಳಿ ತಪ್ಪಿದ್ದರಿಂದ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ಕು ಎ.ಸಿ. ಹಾಗೂ ನಾಲ್ಕು ಸಾಮಾನ್ಯ ಕೋಚ್ ಗಳು ಹಳಿ ತಪ್ಪಿವೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ಪರಿಹಾರ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+