Mahakumbh Mela 2025: ಮಹಾಕುಂಭ ಮೇಳಕ್ಕೆ ಮಹಾ ಭದ್ರತೆ ಹೇಗಿದೆ ಗೊತ್ತಾ?; ಪ್ರವಾಸಿಗರಿಗೆ ಇಲ್ಲಿದೆ ಪ್ರಮುಖ ಮಾಹಿತಿ
Mahakumbh Mela 2025: ಪ್ರಯಾಗರಾಜ್‌ನಲ್ಲಿ ಮಹಾಕುಂಭ ಮೇಳಕ್ಕೆ ಇಂದು (ಜನವರಿ 13) ವಿದ್ಯುಕ್ತ ಚಾಲನೆ ದೊರತಿದೆ. ಇಂದಿನಿಂದ ಫೆಬ್ರವರಿ 26ರ ವರೆಗೆ 44 ದಿನಗಳ ಕಾಲ ಪ್ರಯಾಗ್‌ರಾಜ್‌ಮಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ 45 ಕೋಟಿಗೂ ಅಧಿಕ ಜನರು ಪಾಲ್ಗೊಳ್ಳುವ ಸಾಧ್ಯತೆಯಿದೆ. ಆದ್ಧರಿಂದ ಬರುವ ಭಕ್ತರಿಗೆ ಯಾವುದೇ ತೊಂದರೆ ಆಗಬಾರದು ಎನ್ನುವ ದೃಷ್ಟಿಯಿಂದ ಭಾರೀ ಬಿಗಿ ಭದ್ರೆತೆಯನ್ನು ಕೈಗೊಳ್ಳಲಾಗಿದೆ.
ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭ ಮೇಳದಲ್ಲಿ 45 ಕೋಟಿಗೂ ಹೆಚ್ಚು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿರುವ ಈ ಹಿನ್ನೆಲೆ ಪ್ರಯಾಗ್‌ರಾಜ್ ಪೊಲೀಸರು ನಗರದಾದ್ಯಂತ ಮುಂಜಾಗ್ರತಾ ಕ್ರಮವಾಗಿ ಯಾವುದೇ ತೊಂದರೆಯಾಗದಂತೆ ಭಾರೀ ಬಿಗಿ ಭದ್ರತಾ ವ್ಯವಸ್ಥೆ ಮಾಡಿದ್ದಾರೆ. ಇಂದು (ಜನವರಿ 13) ಮೊದಲ ದಿನವೇ ಸುಮಾರು 40,00,000ಕ್ಕೂ ಅಧಿಕ ಭಕ್ತರು ಪುಣ್ಯ ಸ್ನಾನ ಮಾಡಿ ಗಮನ ಸೆಳೆದಿದ್ದಾರೆ.

2025ರ ಮಹಾಕುಂಭ ಮೇಳ ಆರಂಭಕ್ಕೂ ಮುಂಚಿತವಾಗಿ, ಅಂದರೆ ಜನವರಿ 11ರಂದೇ ಪ್ರಯಾಗರಾಜ್‌ನಲ್ಲಿ ಮುಂಜಾಗ್ರತಾ ಕ್ರಮವಾಗಿ ಡ್ರೋನ್ ಬಿಟ್ಟು ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿದ, ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪ್ರಶಾಂತ್ ಕುಮಾರ್ ಅವರು ಜನವರಿ 13ರಿಂದ ಫೆಬ್ರವರಿ 26ರ ವರೆಗೆ ನಡೆಯುವ ಕಾರ್ಯಕ್ರಮಕ್ಕೆ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜಿಲ್ಲೆಯನ್ನು ನೆರೆಯ ಪ್ರದೇಶಗಳಿಗೆ ಸಂಪರ್ಕಿಸುವ ಪ್ರಮುಖ ಮಾರ್ಗಗಳು ಸೇರಿದಂತೆ ಪ್ರಯಾಗ್ರಾಜ್ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಆದ್ದರಿಂದ ಪೊಲೀಸರು ಸೂಕ್ತ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಭದ್ರತೆ ವ್ಯವಸ್ಥೆ ಹೇಗಿದೆ?
* ಮಹಾ ಕುಂಭ ಮೇಳದಲ್ಲಿ ಜನರ ಸುರಕ್ಷತೆ ದೃಷ್ಟಿಯಿಂದ ಪೊಲೀಸರು ಪ್ರಯಾಗ್‌ರಾಜ್ ನಗರದಾದ್ಯಂತ ಭಾರೀ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದಾರೆ.
* ಅನಪೇಕ್ಷಿತ ಪೋಸ್ಟ್‌ಗಳನ್ನು ಪತ್ತೆ ಹಚ್ಚಿ, ಅವುಗಳನ್ನು ತಡೆಯಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸಂಸ್ಥೆಗಳು ಮತ್ತು ರಾಜ್ಯ ಸರ್ಕಾರದ ನಡುವೆ ಅತ್ಯುತ್ತಮ ಸಮನ್ವಯ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
* ಪ್ರಯಾಗ್ ರಾಜ್‌ಗೆ ಸಂಪರ್ಕಿಸುವ 7 ಪ್ರಮುಖ ಮಾರ್ಗಗಳಲ್ಲಿ ಪೊಲೀಸರು 102 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿದ್ದಾರೆ. ಇಲ್ಲಿ ವಾಹನಗಳು ಮತ್ತು ವ್ಯಕ್ತಿಗಳ ತಪಾಸಣೆಯನ್ನು ಮಾಡಲಾಗುತ್ತದೆ.
* ಕೃತಕ ಬುದ್ಧಿಮತ್ತೆ (AI) 2,700 ಕ್ಯಾಮೆರಾಗಳು, ಮತ್ತು 113 ನೀರೊಳಗಿನ ಡ್ರೋನ್‌ಗಳ ವ್ಯವಸ್ಥೆ ಮಾಡಲಾಗಿದೆ.
* ಅಲ್ಲದೆ, 56 ಸೈಬರ್ ಯೋಧರ ತಂಡ, ನಗರದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸೈಬರ್ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
* 71 ಇನ್ಸ್‌ಪೆಕ್ಟರ್‌ಗಳು, 234 ಸಬ್ ಇನ್‌ಸ್ಪೆಕ್ಟರ್‌ಗಳು ಮತ್ತು 645 ಕಾನ್‌ಸ್ಟೆಬಲ್, 113 ಗೃಹ ರಕ್ಷಕರು ಸೇರಿದಂತೆ 1,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಪ್ರಯಾಗರಾಜ್ ಜಿಲ್ಲೆಗೆ ಸಂಪರ್ಕಿಸುವ 7 ಪ್ರಮುಖ ಮಾರ್ಗಗಳ 102 ಚೆಕ್‌ಪೋಸ್ಟ್‌ಗಳಿಗೆ ನಿಯೋಜಿಸಲಾಗಿದೆ.
* ಉತ್ತರ ಪ್ರದೇಶದ ಪೊಲೀಸರು ದೇವಾಲಯಗಳು ಸೇರಿದಂತೆ ಪ್ರಯಾಗರಾಜ್ ಸುತ್ತಲೂ ಭಾರೀ ಬಿಗಿ ಭದ್ರತಾ ವ್ಯವಸ್ಥೆಯನ್ನು ಮಾಡಿದ್ದಾರೆ.
* ಕುಂಭ ಮೇಳದ ಪುಣ್ಯ ಸ್ನಾನದ ವೇಳೆ ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನದಿಯ ಉದ್ದಕ್ಕೂ 12 ಕಿಲೋ ಮೀಟರ್ ಘಾಟ್‌ಗಳನ್ನು ನಿರ್ಮಿಸಲಾಗಿದೆ.
ಪ್ರವಾಸಿಗರಿಗೆ ಪ್ರಮುಖ ಮಾಹಿತಿ: ಕುಂಭ ಮೇಳ ಕಾರ್ಯಕ್ರಮದ ಜೊತೆಗೆ ಪ್ರವಾಸೋದ್ಯಮಕ್ಕೂ ಆದ್ಯತೆ ನೀಡಲಾಗಿದೆ. ವಿಶ್ವದ ವಿವಿಧೆಡೆಯಿಂದ ಬರುತ್ತಿರುವ ಜನರಿಗಾಗಿ ರೈಲು, ಬಸ್ ಹಾಗೂ ವಿಮಾನ ಸಂಚಾರದ ವ್ಯವಸ್ಥೆಗಳನ್ನು ಮಾಡಲಾಗಿದೆ. ಅಲ್ಲದೆ, ದೇಶದ ವಿವಿಧ ನಗರಗಳಿಂದ ಪ್ರಯಾಗ್‌ರಾಜ್‌ಗೆ ವಿಮಾನ ಸೌಕರ್ಯ ಕಲ್ಪಿಸಲಾಗಿದೆ. ವಿದೇಶದಿಂದ ಬರುವ ಪ್ರವಾಸಿಗರು, ವಿದ್ವಾಂಸರು, ಸಂಶೋಧಕರು ಮುಂತಾದವರಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಅಲ್ಲಿ ಪ್ರವಾಸಿಗರು ಭಾರತದ ಸಾಂಸ್ಕೃತಿಕ ಮತ್ತು ಧಾರ್ಮಿಕ ಹಿರಿಮೆಯನ್ನು ಹಾಗೂ ಕುಂಭಮೇಳದ ಹಿನ್ನೆಲೆಯನ್ನು ತಿಳಿಯಲು ವ್ಯವಸ್ಥೆ ಮಾಡಲಾಗಿದೆ.
ಅದರಲ್ಲೂ ದೇಶದಲ್ಲಿ ಅವರ ನೆಚ್ಚಿನ ಪ್ರವಾಸಿ ತಾಣಗಳನ್ನು ವೀಕ್ಷಣೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಪ್ರವಾಸಿಗರ ಅನುಕೂಲಕ್ಕಾಗಿ ಟೋಲ್ ಫ್ರೀ ನಂಬರ್ ಅನ್ನು ಸಿದ್ಧಗೊಳಿಸಲಾಗಿದೆ. ಅದು 10 ವಿದೇಶಿ ಭಾಷೆಗಳು ಮತ್ತು ಕನ್ನಡ ಸೇರಿದಂತೆ ಹಲವು ಭಾರತೀಯ ಭಾಷೆಗಳಲ್ಲಿ ಮಾಹಿತಿ ನೀಡಲಿದೆ. ಭಕ್ತರ ಅನುಕೂಲಕ್ಕಾಗಿ ಡಿಜಿಟಲ್ ಪ್ರವಾಸಿ ನಕ್ಷೆಗಳನ್ನು ರೂಪಿಸಲಾಗಿದೆ.
ಪ್ರವಾಸಿಗರಿಗೆ ಸೂಕ್ತ ವ್ಯವಸ್ಥೆಗಳು
* ಮಹಾ ಕುಂಭಮೇಳದ ಯಶಸ್ಸಿಗಾಗಿ ಉತ್ತರ ಪ್ರದೇಶದ ಸರ್ಕಾರ ಈಗಾಗಲೇ 9,000 ಕೋಟಿ ರೂಪಾಯಿ ಅನುದಾನ ನೀಡಿದ್ದು, ಬರು ಭಕ್ತರಿಗಾಗಿ ವಿಶಾಲವಾದ ಪ್ರದೇಶದಲ್ಲಿ 1.5 ಲಕ್ಷ ಟೆಂಟ್‌ಗಳನ್ನು ನಿರ್ಮಿಸಲಾಗಿದೆ.
* ಭಕ್ತಾಧಿಗಳ ಸಂಚಾರಕ್ಕಾಗಿ 30 ಕಿರು ಸೇತುವೆಗಳನ್ನು ನಿರ್ಮಾಣ ಮಾಡಲಾಗಿದೆ. 400 ಕಿಲೋ ಮೀಟರ್‌ಗೂ ಹೆಚ್ಚು ತಾತ್ಕಾಲಿಕ ರಸ್ತೆಗಳನ್ನು ರಚಿಸಲಾಗಿದೆ. 69,000 ಬೀದಿ ದೀಪಗಳ ವ್ಯವಸ್ಥೆ ಮಾಡಲಾಗಿದೆ.
* ಕುಂಭ ಮೇಳದ ಪುಣ್ಯ ಸ್ನಾನದ ವೇಳೆ ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನದಿಯ ಉದ್ದಕ್ಕೂ 12 ಕಿಲೋ ಮೀಟರ್ ಘಾಟ್‌ಗಳನ್ನು ನಿರ್ಮಿಸಲಾಗಿದೆ. ಈಗಾಗಲೇ 1.5 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ.
* 1,800 ಹೆಕ್ಟೇರ್ ಪ್ರದೇಶವನ್ನು ವಾಹನಗಳ ಪಾರ್ಕಿಂಗ್‌ಗಾಗಿ ಕಾಯ್ದಿರಿಸಲಾಗಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications