Get Updates
Get notified of breaking news, exclusive insights, and must-see stories!

Maharashtra ABP- Matrix Exit Poll: ಬಿಜೆಪಿ & ಮಹಾಯುತಿ ಮತ್ತೆ ಅಧಿಕಾರಕ್ಕೆ, ಸಣ್ಣ ಪಕ್ಷಗಳಿಗೆ ದೊಡ್ಡ ಆಘಾತ!

ಜಿದ್ದಾಜಿದ್ದಿನ ರಾಜಕೀಯ ಹಾಗೂ ಮಹಾ ಹೈಡ್ರಾಮಾಗಳ ನಡುವೆ ಮಹಾರಾಷ್ಟ್ರ ಚುನಾವಣೆ ಮುಕ್ತಾಯವಾಗಿದೆ. ಇನ್ನು ಮೂರು ದಿನದಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ನಡುವೆ ಎಕ್ಸಿಟ್ ಪೋಲ್‌ ಪ್ರಕಟವಾಗಿವೆ. ಮಹಾರಾಷ್ಟ್ರದಲ್ಲಿ ಈ ಬಾರಿ ಮತ್ತೆ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಅಧಿಕಾರಕ್ಕೆ ಬರಲಿವೆ ಎಂದು ವಿವಿಧ ಎಕ್ಸಿಟ್‌ ಪೋಲ್‌ಗಳು ಭವಿಷ್ಯ ನುಡಿದಿವೆ.

ಈ ಬಾರಿ ಬಿಜೆಪಿ ನೇತೃತ್ವದ ಮಹಾಯುತಿಯೇ ಅಧಿಕಾರಕ್ಕೆ ಬರಲಿದೆ ಎಂದು ಎಬಿಪಿ-ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಹೇಳಿದೆ.

Maharashtra assembly Election 2024 ABP- Matrix Exit Polls BJP amp amp Mahayuti back to power

ಎಬಿಪಿ-ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಪ್ರಕಾರ, ಮಹಾರಾಷ್ಟ್ರದಲ್ಲಿ ಈ ಬಾರಿ ಮಹಾಯುತಿಯೇ ಅಧಿಕಾರಕ್ಕೆ ಬರಲಿದೆ. ಕಳೆದ ಎರಡೂವರೆ ವರ್ಷದಿಂದ ಮಹಾರಾಷ್ಟ್ರದಲ್ಲಿ ಮಹಾಯುತಿ ಮಿತ್ರ ಪಕ್ಷಗಳು ಅಧಿಕಾರ ನಡೆಸುತ್ತಿವೆ. ಈ ನೇತೃತ್ವದ ಮೈತ್ರಿ ಪಕ್ಷದಲ್ಲಿ ಏಕನಾಥ್ ಶಿಂಧೆ ಅವರು ಮುಖ್ಯಮಂತ್ರಿಯಾಗಿದ್ದರು. ದೇವೇಂದ್ರ ಫಡ್ನವಿಸ್‌ ಹಾಗೂ ಅಜಿತ್‌ ಪವಾರ್‌ ಅವರು ಉಪ ಮುಖ್ಯಮಂತ್ರಿಯಾಗಿದ್ದರು.

ಎಬಿಪಿ - ಮ್ಯಾಟ್ರಿಜ್ ಎಕ್ಸಿಟ್ ಪೋಲ್ (Exit poll) ಪ್ರಕಟಿಸಿದ್ದು, ಮಹಾಯುತಿ (ಬಿಜೆಪಿ - ಎನ್‌ಡಿಎ) 150ರಿಂದ 170 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಒಟ್ಟು 288 ಕ್ಷೇತ್ರಗಳಿದ್ದು, 145 ಮ್ಯಾಜಿಕ್‌ ನಂಬರ್‌ (ಬಹುಮತದ ಸಂಖ್ಯೆ) ಆಗಿದೆ. ಬಿಜೆಪಿ ಒಳಗೊಂಡ ಮಹಾಯುತಿ ಬಹುಮತ ಗಳಿಸಲಿದೆ ಎಂದು ಹೇಳಿದೆ.

ಮಹಾ ವಿಕಾಸ್ ಅಘಾಡಿಯು (ಕಾಂಗ್ರೆಸ್‌) 110 ಸ್ಥಾನಗಳಿಂದ 130 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದೆ. ಇನ್ನು ಇತರೆ ಪಕ್ಷಗಳು 8 ರಿಂದ 10 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಎಬಿಪಿ-ಮ್ಯಾಟ್ರಿಜ್ ಎಕ್ಸಿಟ್ ಪೋಲ್ ವರದಿ ಉಲ್ಲೇಖಿಸಿದೆ.

ಮಹಾರಾಷ್ಟ್ರ ವಿಧಾನಸಭೆ ಚಿತ್ರಣ: ಮಹಾರಾಷ್ಟ್ರದ ವಿಧಾನಸಭೆಯ ಸಂಖ್ಯೆ ಒಟ್ಟು 288 ಇದೆ. 145 ಮಹಾರಾಷ್ಟ್ರದ ಮ್ಯಾಜಿಕ್‌ ನಂಬರ್‌ ಆಗಿದೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಸೇರಿದಂತೆ ಒಟ್ಟು 6 ಪ್ರಮುಖ ಪಕ್ಷಗಳಿವೆ. ಅಲ್ಲದೇ 15ಕ್ಕೂ ಹೆಚ್ಚು ಸಣ್ಣ ಪಕ್ಷಗಳು ಇಲ್ಲಿ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿವೆ.

ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಈ ಬಾರಿ ಬರೋಬ್ಬರಿ 4,136 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಇದ್ದರು. ಇನ್ನು ಜಾರ್ಖಂಡ್ ವಿಧಾನಸಭೆ ಚುನಾವಣೆಯೂ ಇದೇ ಸಂದರ್ಭದಲ್ಲಿ ನಡೆದಿದ್ದು. ಜಾರ್ಖಂಡ್‌ನ 81 ವಿಧಾನಸಭಾ ಕ್ಷೇತ್ರಗಳಿಗೆ ಅಂತಿಮ ಕಣದಲ್ಲಿ 528 ಅಭ್ಯರ್ಥಿಗಳು ಇದ್ದರು. ಈ ಎರಡೂ ರಾಜ್ಯಗಳ ಚುನಾವಣೆ ಫಲಿತಾಂಶ ನವೆಂಬರ್‌ 23ಕ್ಕೆ ಪ್ರಕಟವಾಗಲಿದೆ.

ಮಹಾರಾಷ್ಟ್ರದಲ್ಲಿ ಮಹಾಯುತಿ ಹಾಗೂ ಮಹಾ ವಿಕಾಸ್‌ ಅಘಾಡಿ ಮೈತ್ರಿ ಪಕ್ಷಗಳ ನಡುವೆ ಜಿದ್ದಾ ಜಿದ್ದಿನ ಪೈಪೋಟಿ ಇದೆ. ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಇದೀಗ ಅಧಿಕಾರದಲ್ಲಿ ಇದೆ. ಇದೇ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು 9 ಎಕ್ಸಿಟ್‌ ಪೋಲ್‌ಗಳು ಭವಿಷ್ಯ ನುಡಿದಿವೆ.

ಇನ್ನು ಮಹಾಯುತಿ ಮೈತ್ರಿಕೂಟದಲ್ಲಿ ಬಿಜೆಪಿ, ನ್ಯಾಶನಲಿಸ್ಟ್‌ ಕಾಂಗ್ರೆಸ್‌ (ಅಜಿತ್‌ ಪವಾರ್‌) ಹಾಗೂ ಶಿವಸೇನೆ (ಏಕನಾಥ್‌ ಶಿಂಧೆ) ಪಕ್ಷಗಳು ಇವೆ. ಮಹಾ ವಿಕಾಸ್‌ ಅಘಾಡಿ ಮೈತ್ರಿಕೂಟದಲ್ಲಿ ಕಾಂಗ್ರೆಸ್‌, ನ್ಯಾಶನಲಿಸ್ಟ್‌ ಕಾಂಗ್ರೆಸ್‌ (ಶರದ್ ಪವಾರ್‌) ಹಾಗೂ ಶಿವಸೇನೆ (ಉದ್ಧವ್‌ ಠಾಕ್ರೆ) ಪಕ್ಷಗಳು ಇವೆ.

ಮಹಾಯುತಿ ಮೈತ್ರಿಕೂಟದ ಬಿಜೆಪಿ 149 ವಿಧಾನಸಭಾ ಕ್ಷೇತ್ರಗಳಲ್ಲಿ, ಶಿವಸೇನೆ 81 ಹಾಗೂ ಅಜಿತ್ ಪವಾರ್ ಪಕ್ಷ 59 ಸ್ಥಾನಗಳಲ್ಲಿ ಸ್ಪರ್ಧಿಸಿವೆ. ಇನ್ನು ಮಹಾ ವಿಕಾಸ್‌ ಅಘಾಡಿಯ ಕಾಂಗ್ರೆಸ್, ಶಿವಸೇನೆ (ಯುಬಿಟಿ) ಹಾಗೂ ಶರದ್ ಪವಾರ್ ನೇತೃತ್ವದ ಪಕ್ಷವು ಕ್ರಮವಾಗಿ 101, 95 ಹಾಗೂ 86 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿವೆ. ಅಲ್ಲದೇ ಬಿಎಸ್‌ಪಿ, ಕಮ್ಯುನಿಸ್ಟ್‌ ಹಾಗೂ ಎಐಎಂಐಎಂ ಸೇರಿದಂತೆ 15ಕ್ಕೂ ಹೆಚ್ಚು ಸಣ್ಣ ಪಕ್ಷಗಳು ಚುನಾವಣೆ ಕಣದಲ್ಲಿ ಇವೆ.

20ಕ್ಕೆ ಚುನಾವಣೆ ಫಲಿತಾಂಶ ಪ್ರಕಟ: ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದೆ. ಈ ಎರಡೂ ರಾಜ್ಯಗಳ ಚುನಾವಣೆಯ ಫಲಿತಾಂಶ ಶನಿವಾರ (ನವೆಂಬರ್‌ 23) ಪ್ರಕಟವಾಗಲಿದೆ. ಎರಡೂ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎನ್ನುವ ಕುತೂಹಲಕ್ಕೆ ಶನಿವಾರ ಮಧ್ಯಾಹ್ನದ ವೇಳೆಗೆ ಉತ್ತರ ಸಿಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+