Maharashtra Assembly Election 2024: ಬಿಜೆಪಿ ಏಕಾಂಗಿಯಾಗಿ ಚುನಾವಣೆ ಗೆಲ್ಲಲಾಗದು!
ಮುಂಬೈ, ಅಕ್ಟೋಬರ್ 29: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ-2024 ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಿಗೆ ಮಹತ್ವದ್ದು. ಆದರೆ ಎರಡೂ ರಾಜಕೀಯ ಪಕ್ಷಗಳು ರಾಜ್ಯದಲ್ಲಿ ಏಕಾಂಗಿಯಾಗಿ ಚುನಾವಣೆಯನ್ನು ಎದುರಿಸುತ್ತಿಲ್ಲ. ರಾಜ್ಯದ 288 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.
ಸದ್ಯ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿ 'ಮಹಾಯುತಿ' ಮೈತ್ರಿಕೂಟ ಅಧಿಕಾರದಲ್ಲಿದೆ. 2024ರ ಚುನಾವಣೆಯನ್ನು ಸಹ ಇದೇ ಮೈತ್ರಿಕೂಟದ ಮೂಲಕ ಎದುರಿಸಲಾಗುತ್ತದೆ. ಮೈತ್ರಿಕೂಟದಲ್ಲಿ ಬಿಜೆಪಿಗೆ ಹೆಚ್ಚಿನ ಸೀಟುಗಳು ಸಿಕ್ಕಿವೆ. 146 ಕ್ಷೇತ್ರಗಳಿಗೆ ಪಕ್ಷ ಈಗಾಗಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

'ಮಹಾಯುತಿ' ಮೈತ್ರಿಕೂಟದ ಸರ್ಕಾರದಲ್ಲಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಉಪ ಮುಖ್ಯಮಂತ್ರಿಗಳು. 2024ರ ಚುನಾವಣೆಗೆ ಅವರು ನಾಗ್ಪುರ ನೈಋತ್ಯ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದು, ನಾಮಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ಅಲ್ಲದೇ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸುವ ಕುರಿತು ಮಾತನಾಡಿದ್ದಾರೆ.
ಚುನಾವಣಾ ಫಲಿತಾಂಶದ ಕುರಿತು ಮಾತನಾಡಿದ ದೇವೇಂದ್ರ ಫಡ್ನವೀಸ್, "ಬಿಜೆಪಿ ಏಕಾಂಗಿಯಾಗಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಆದರೆ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ" ಎಂದರು.
"ತಳಮಟ್ಟದ ಪರಿಸ್ಥಿತಿಯ ಕುರಿತು ಪ್ರಮಾಣಿಕರಾಗಿರಬೇಕು. ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿರುವ ಮಹಾಯುತಿ ಮೈತ್ರಿಕೂಟ ಒಟ್ಟಾಗಿ ಚುನಾವಣೆ ಎದುರಿಸಿ ಗೆಲುವು ಸಾಧಿಸಲಿವೆ" ಎಂದು ಹೇಳಿದರು.
"ಬಿಜೆಪಿ ಏಕಾಂಗಿಯಾಗಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಆದರೆ ಇದು ಸಹ ಸತ್ಯ ಬಿಜೆಪಿಯೇ ಅತಿ ಹೆಚ್ಚು ಸೀಟುಗಳಲ್ಲಿ ಗೆಲುವು ಸಾಧಿಸಲಿದೆ, ಹೆಚ್ಚು ಮತಗಳನ್ನು ಗಳಿಸಲಿದೆ. ಚುನಾವಣೆ ಬಳಿಕ ಬಿಜೆಪಿಯೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಮೂರು ಪಕ್ಷಗಳು ಸೇರಿ ಸರ್ಕಾರವನ್ನು ರಚನೆ ಮಾಡಲಿವೆ" ಎಂದು ದೇವೇಂದ್ರ ಫಡ್ನವೀಸ್ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಪಕ್ಷದ ಹಲವು ಆಕಾಂಕ್ಷಿಗಳಿಗೆ ಟಿಕೆಟ್ ಸಿಕ್ಕಿಲ್ಲ ಎಂಬ ಟೀಕೆಗಳ ಕುರಿತು ಮಾತನಾಡಿದ ಫಡ್ನವೀಸ್, "ಪಕ್ಷ ಎಲ್ಲರಿಗೂ ಟಿಕೆಟ್ ನೀಡಲಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಮೈತ್ರಿಕೂಟ ಮಾಡಿಕೊಂಡಾಗ ಇತರ ಪಕ್ಷಗಳಿಗೆ ಸಹ ಆದ್ಯತೆ ನೀಡಬೇಕಾಗುತ್ತದೆ. ಮುಖ್ಯವಾಗಿ ಪಕ್ಷ ಅಧಿಕಾರಕ್ಕೆ ಬರಬೇಕು" ಎಂದರು.
2024ರ ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿದ ದೇವೇಂದ್ರ ಫಡ್ನವೀಸ್, "ಲೋಕಸಭೆ ಚುನಾವಣೆಯಲ್ಲಿ ವೋಟ್ ಜಿಹಾದ್ ನಡೆದಿದೆ. 48 ಕ್ಷೇತ್ರಗಳ ಪೈಕಿ ಮಹಾಯತಿ ಮೈತ್ರಿಕೂಟ 17 ಸೀಟುಗಳಲ್ಲಿ ಮಾತ್ರ ಜಯಗಳಿಸಿದೆ. ಆದರೆ ಲೋಕಸಭೆ ಚುನಾವಣೆ ಫಲಿತಾಂಶ ವಿಧಾನಸಭೆ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ" ಎಂದು ಹೇಳಿದರು.
2019ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 105 ಸೀಟುಗಳಲ್ಲಿ ಜಯಗಳಿಸಿತ್ತು. ಶಿವಸೇನೆ 56, ಎನ್‌ಸಿಪಿ 54 ಸೀಟು ಮತ್ತು ಕಾಂಗ್ರೆಸ್ 44 ಸೀಟುಗಳಲ್ಲಿ ಜಯಗಳಿಸಿದ್ದವು.
-
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್












Click it and Unblock the Notifications