Maharashtra CM: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆ
ಮುಂಬೈ, ಡಿಸೆಂಬರ್ 4: ಮಹಾರಾಷ್ಟ್ರ ರಾಜ್ಯದಲ್ಲಿ 'ಮಹಾಯತಿ' ಮೈತ್ರಿಕೂಟದ ಹೊಸ ಸರ್ಕಾರ ರಚನೆಯ ಪ್ರಕ್ರಿಯೆ ಆರಂಭವಾಗಿದೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ. ಗುರುವಾರ ಮುಂಬೈನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಏಕನಾಥ್ ಶಿಂಧೆ, ಅಜಿತ್ ಪವಾರ್ ಸಹ ಪ್ರಮಾಣ ವಚನವನ್ನು ಸ್ವೀಕಾರ ಮಾಡಲಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ 145. 'ಮಹಾಯತಿ' ಮೈತ್ರಿಕೂಟ 230 ಶಾಸಕರ ಬಲ ಹೊಂದಿದೆ.
ಬುಧವಾರ ನಡೆದ ಬಿಜೆಪಿಯ ಸಭೆಯಲ್ಲಿ 54 ವರ್ಷದ ದೇವೇಂದ್ರ ಫಡ್ನವೀಸ್ ರಾಜ್ಯದ ನೂತನ ಮುಖ್ಯಮಂತ್ರಿ ಎಂದು ತೀರ್ಮಾನಿಸಲಾಗಿದೆ. ಈ ಮೂಲಕ ನವೆಂಬರ್ 23ರ ಬಳಿಕ ರಾಜ್ಯದ ಮುಖ್ಯಮಂತ್ರಿ ಯಾರು? ಎಂದು ಎದ್ದಿದ್ದ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಏಕನಾಥ್ ಶಿಂಧೆ, ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಲಿದ್ದಾರೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20ರಂದು ಮತದಾನ ನಡೆದಿತ್ತು. ಚುನಾವಣೆಯಲ್ಲಿ 'ಮಹಾಯತಿ' ಮೈತ್ರಿಕೂಟ 230 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಸ್ಪಷ್ಟ ಬಹುಮತವನ್ನು ಪಡೆದಿದ್ದು, ಹೊಸ ಸರ್ಕಾರವನ್ನು ರಚನೆ ಮಾಡಲಿದೆ. ಚುನಾವಣೆಯಲ್ಲಿ 132 ಸೀಟುಗಳನ್ನು ಗೆದ್ದಿರುವ ಬಿಜೆಪಿಗೆ ಮುಖ್ಯಮಂತ್ರಿ ಪಟ್ಟ ಸಿಕ್ಕಿದೆ. ಮೈತ್ರಿಕೂಟದಲ್ಲಿರುವ ಶಿವಸೇನೆ (ಏಕನಾಥ್ ಶಿಂಧೆ ಬಣ) 57, ಎನ್‌ಸಿಪಿ (ಅಜಿತ್ ಪವಾರ್ ಬಣ) 41 ಸೀಟುಗಳನ್ನು ಹೊಂದಿವೆ.
ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ: ಬುಧವಾರ ನಡೆದ ಮಹಾರಾಷ್ಟ್ರ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ಹೆಸರು ಅಂತಿಮಗೊಳಿಸಲಾಗಿದೆ. ಕೇಂದ್ರದಿಂದ ವೀಕ್ಷಕರಾಗಿ ಬಂದಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ನೇತೃತ್ವದಲ್ಲಿ ಈ ಸಭೆ ನಡೆಯಿತು.
ಶಾಸಕಾಂಗ ಪಕ್ಷದ ಸಭೆಯಲ್ಲಿ ಕೋರ್ ಕಮಿಟಿ ಸಭೆಯ ತೀರ್ಮಾನವನ್ನು ಅಧಿಕೃತವಾಗಿ ಘೋಷಣೆ ಮಾಡಿ ಬಳಿಕ ಮಹಾಯತಿ ಮೈತ್ರಿಕೂಟದ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ಹೊಸ ಸರ್ಕಾರ ರಚನೆ ಮಾಡುವ ಹಕ್ಕು ಮಂಡಿಸಲಿದ್ದಾರೆ.
ಮುಂಬೈ ನಗರದ ಆಜಾದ್ ಮೈದಾನದಲ್ಲಿ ಗುರುವಾರ ಸಂಜೆ 5 ಗಂಟೆಗೆ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಏಕನಾಥ್ ಶಿಂಧೆ, ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗುವ ನಿರೀಕ್ಷೆ ಇದ್ದು, ಈ ಕುರಿತು ಅಧಿಕೃತ ಘೋಷಣೆ ಬಾಕಿ ಇದೆ.
ದೇವೇಂದ್ರ ಫಡ್ನವೀಸ್ 2024ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ನಾಗ್ಪುರ ನೈಋತ್ಯ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ 4ನೇ ಬಾರಿಗೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಫಡ್ನವೀಸ್ ಕ್ಷೇತ್ರದಲ್ಲಿ 1,29,401 ಮತಗಳನ್ನು ಪಡೆದು 39,710 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಎದುರಾಳಿ, ಕಾಂಗ್ರೆಸ್ ಅಭ್ಯರ್ಥಿ ಪ್ರಫುಲ್ಲ ಗುಡಧೆ 89,691 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.
ದೇವೇಂದ್ರ ಫಡ್ನವೀಸ್ 2014-2019ರ ತನಕ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. 2022ರಲ್ಲಿ ಮಹಾಯತಿ ಮೈತ್ರಿಕೂಟದ ಸರ್ಕಾರ ರಚನೆಗೊಂಡಾಗ ಅವರು ಉಪ ಮುಖ್ಯಮಂತ್ರಿಯಾಗಿದ್ದರು. ಆಗ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಲು ಫಡ್ನವೀಸ್ ಅವಕಾಶ ನೀಡಬಾರದಿತ್ತು ಎಂಬ ಮಾತುಗಳು ಈಗಲೂ ಸಹ ನಡೆಯುತ್ತಿವೆ.
ದೇವೇಂದ್ರ ಫಡ್ನವೀಸ್ ಆರ್‌ಎಸ್‌ಎಸ್ ಮತ್ತು ಕೇಂದ್ರ ಬಿಜೆಪಿ ನಾಯಕರ ಆಪ್ತರು. 1990ರ ದಶಕದ ಮಧ್ಯದಲ್ಲಿ ರಾಜಕೀಯ ಜೀವನ ಆರಂಭಿಸಿದ ಫಡ್ನವೀಸ್ 27 ವರ್ಷವಿದ್ದಾಗ 1997ರಲ್ಲಿ ನಾಗ್ಪುರದ ಅತ್ಯಂತ ಕಿರಿಯ ಮೇಯರ್ ಆಗಿದ್ದರು.
ಎರಡು ವರ್ಷಗಳ ಬಳಿಕ ಅವರು ನಾಗ್ಪುರ ಪಶ್ಚಿಮ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. 2004ರಲ್ಲಿ ಮತ್ತೆ ಆಯ್ಕೆಯಾಗಿ ಕ್ಷೇತ್ರ ಉಳಿಸಿಕೊಂಡರು. ಕ್ಷೇತ್ರ ಪುನರ್ ವಿಂಗಡನೆ ಬಳಿಕ ನಾಗ್ಪುರ ನೈಋತ್ಯ ಕ್ಷೇತ್ರ ರಚನೆಗೊಂಡಿತು. ಆಗ ದೇವೇಂದ್ರ ಫಡ್ನವೀಸ್ ಕ್ಷೇತ್ರ ಬದಲಾವಣೆ ಮಾಡಿದರು.
2009ರ ಚುನಾವಣೆಯಲ್ಲಿ ಅವರು 27, 775 ಮತ, 2014ರಲ್ಲಿ 58,942 ಮತಗಳ ಅಂತರದಿಂದ ನಾಗ್ಪುರ ನೈಋತ್ಯದಲ್ಲಿ ಗೆಲುವು ಸಾಧಿಸಿದರು. 2019ರ ಚುನಾವಣೆಯಲ್ಲಿ ದೇವೇಂದ್ರ ಫಡ್ನವೀಸ್ ಗೆಲುವಿನ ಅಂತರ 49,344 ಮತಗಳು.
-
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: 1 ಲಕ್ಷ ಬಾಂಡ್ಗೆ ಆಗ್ರಹಿಸಿದ ಪೊಲೀಸರ ವಿರುದ್ಧ ಯತ್ನಾಳ್ ಗರಂ -
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
ಕೆಲವೇ ಗಂಟೆಗಳಲ್ಲಿ ಇರಾನ್ ಬಂದರುಗಳಿಗೆ ಅಮೆರಿಕದಿಂದ ಕಡಲ ದಿಗ್ಬಂಧನ? ಯುದ್ಧದ ಭೀತಿಯಲ್ಲಿ ಕೊಲ್ಲಿ ರಾಷ್ಟ್ರಗಳು -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ











Click it and Unblock the Notifications