Maharashtra Assembly Election 2024: ಸೀಟು ಹಂಚಿಕೆ ಕಗ್ಗಂಟು ಬಿಡಿಸಿದ 83ರ ಹರೆಯದ ಶರದ್ ಪವಾರ್ 85 ಸೂತ್ರ!

ಮುಂಬೈ, ಅಕ್ಟೋಬರ್ 24: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ-2024ಕ್ಕೆ ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟಕ್ಕೆ ಸೀಟು ಹಂಚಿಕೆ ಕಗ್ಗಂಟಾಗಿತ್ತು. ರಾಜ್ಯದ 288 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್‌ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ. ಕಾಂಗ್ರೆಸ್ ನೇತೃತ್ವದ ಎಂವಿಎ ಮೈತ್ರಿಕೂಟ ಈಗ ಸೀಟು ಹಂಚಿಕೆ ಘೋಷಣೆ ಮಾಡಿದೆ. ಮಿತ್ರಪಕ್ಷಗಳು ಇದಕ್ಕೆ ಒಪ್ಪಿವೆ.

ಸೀಟು ಹಂಚಿಕೆ ಕುರಿತು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಜೊತೆ ಮಾತುಕತೆ ನಡೆಸುವುದಿಲ್ಲ ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣ) ಪಟ್ಟು ಹಿಡಿದಿತ್ತು. ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೂ ಮಾಹಿತಿಯನ್ನು ನೀಡಿತ್ತು. ಇದು ಸೀಟು ಹಂಚಿಕೆ ಕಗ್ಗಂಟಾಗುವಂತೆ ಮಾಡಿತ್ತು.

Maharashtra Assembly Election 2024 MVA Seat Sharing 85 Formula Of Sharad Pawar

ಬುಧವಾರ ನಾನಾ ಪಟೋಲೆ, ಶಿವಸೇನೆ ನಾಯಕ ಸಂಜಯ್ ರಾವತ್ ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸಿ ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ಸೀಟು ಹಂಚಿಕೆಯನ್ನು ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ 85, ಶಿವಸೇನೆ (ಉದ್ಧವ್ ಠಾಕ್ರೆ ಬಣ) 85 ಮತ್ತು ಎನ್‌ಸಿಪಿ (ಶರದ್ ಪವಾರ್) 85 ಕ್ಷೇತ್ರಗಳಲ್ಲಿ ಚುನಾವಣಾ ಕಣಕ್ಕಿಳಿಯಲಿವೆ.

ಶರದ್ ಪವಾರ್ 85ರ ಸೂತ್ರ: 100 ಸೀಟುಗಳು ಬೇಕು ಎಂದು ಬೇಡಿಕೆ ಇಟ್ಟಿದ್ದ ಶಿವಸೇನೆ (ಉದ್ಧವ್ ಠಾಕ್ರೆ ಬಣ)ಯಿಂದ ಎಂವಿಎ ಮೈತ್ರಿಕೂಟದ ಸೀಟು ಹಂಚಿಕೆ ಸಮಸ್ಯೆಯಾಗಿತ್ತು. ಆಗ 83 ವರ್ಷದ ಎನ್‌ಸಿಪಿ ನಾಯಕ ಶರದ್ ಪವಾರ್ ಮುಂದಿಟ್ಟ 85+85+85 ಸೀಟು ಹಂಚಿಕೆ ಸೂತ್ರ ಎಂವಿಎ ಮೈತ್ರಿಕೂಟಕ್ಕೆ ಒಪ್ಪಿಗೆಯಾಗಿದೆ. 288 ಸೀಟುಗಳ ಪೈಕಿ 270 ಸೀಟುಗಳ ಹಂಚಿಕೆ ಅಂತಿಮವಾಗಿದೆ.

ಮೈತ್ರಿಕೂಟದ ಸೀಟು ಹಂಚಿಕೆ ಕಗ್ಗಂಟಾದ ಬಳಿಕ ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ರಮೇಶ್ ಚೆನ್ನಿತ್ತಲ ಮುಂಬೈಗೆ ಭೇಟಿ ನೀಡಿದ್ದರು. ಉದ್ಧವ್ ಠಾಕ್ರೆ, ಶರದ್ ಪವಾರ್ ಜೊತೆ ಮಾತುಕತೆ ನಡೆಸಿದ್ದರು. ಶಿವಸೇನೆ ಜೊತೆ ಮಾತುಕತೆ ನಡೆಸಿ ಸೀಟು ಹಂಚಿಕೆ ಅಂತಿಮಗೊಳಿಸುವಂತೆ ಮನವಿ ಮಾಡಿದ್ದರು.

85+85+85 ಸೀಟು ಹಂಚಿಕೆಯಂತೆ ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್‌ಸಿಪಿ (ಶರದ್ ಪವಾರ್) ಮೂರು ಪಕ್ಷಗಳು ಸಮಾನ ಸೀಟುಗಳಲ್ಲಿ ಸ್ಪರ್ಧೆ ಮಾಡಲಿವೆ. ಗುರುವಾರ ಇನ್ನೊಂದು ಸುತ್ತಿನ ಸಭೆ ನಡೆಯಲಿದ್ದು, ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳಾದ ಸಿಪಿಐ(ಎಂ), ಸಿಪಿಐ, ಎಎಪಿ, ಸಮಾಜವಾದಿ ಪಕ್ಷ ಸೇರಿದಂತೆ ಇತರ ಪಕ್ಷಗಳಿಗೆ ಸೀಟುಗಳನ್ನು ನೀಡಲಾಗುತ್ತದೆ.

ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ಬಳಿಕ ಶಿವಸೇನೆ (ಉದ್ಧವ್ ಠಾಕ್ರೆ ಬಣ) ಸೀಟು ಹಂಚಿಕೆಯಲ್ಲಿ ಹೊಸ ಸೂತ್ರ ಮುಂದಿಟ್ಟಿತ್ತು. ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್‌ಗಿಂತ ನ್ಯಾಷನಲ್ ಕಾನ್ಪರೆನ್ಸ್‌ಗೆ ಹೆಚ್ಚಿನ ಸೀಟು ಸಿಕ್ಕ ಪರಿಣಾಮ ಮಹಾರಾಷ್ಟ್ರದಲ್ಲಿ ಶಿವಸೇನೆಗೆ ಹೆಚ್ಚು ಸೀಟು ಬೇಕು ಎಂದು ಬೇಡಿಕೆ ಇಟ್ಟಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+