Maharasht Election Republic Tv Exit Poll : ಎಕ್ಸಿಟ್ ಪೋಲ್ ಫಲಿತಾಂಶ ಪ್ರಕಟ, ಯಾರಿಗೆ ಗೆಲುವು?

ಮುಂಬೈ, ನವೆಂಬರ್ 20: ಮಹಾರಾಷ್ಟ್ರ ರಾಜ್ಯದ ವಿಧಾನಸಭೆ ಚುನಾವಣೆ 2024ರ ಮತದಾನ ಮುಕ್ತಾಯಗೊಂಡಿದೆ. 288 ಸದಸ್ಯ ಬಲದ ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆಗೆ ಮತದಾನ ಮುಕ್ತಾಯವಾಗುತ್ತಿದ್ದಂತೆ ವಿವಿಧ ವಾಹಿನಿಗಳು ಮತಗಟ್ಟೆ ಸಮೀಕ್ಷೆಯನ್ನ ಪ್ರಕಟಿಸಿವೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತದಾನದ ಬಳಿಕ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗುತ್ತಿವೆ. ರಾಜ್ಯದ ಚುನಾವಣಾ ಫಲಿತಾಂಶ ನವೆಂಬರ್ 23ರ ಶನಿವಾರ ಪ್ರಕಟವಾಗಲಿದ್ದು, ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಲು 145 ಸ್ಥಾನವನ್ನ ಗೆಲ್ಲಬೇಕಾಗಿದೆ.

Maharashtra Assembly Election 2024 Republic Tv Exit Polls Predictions

Republic Tv ಸಂಸ್ಥೆ ಪ್ರಕಾರ ಮಹಾರಾಷ್ಟ್ರ ರಾಜ್ಯದ ವಿಧಾನಸಭೆ ಚುನಾವಣೆ 2024ರ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದ್ದು,ಇದರ ಪ್ರಕಾರ, ಮಹಾರಾಷ್ಟ್ರದಲ್ಲಿ ಮತ್ತೆ ಮಹಾಯುತಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದೆ. ಮಹಾಯುತಿ ಮೈತ್ರಿ ಕೂಟವು ಬಿಜೆಪಿ ನೇತೃತ್ವದಲ್ಲಿ ಇದೆ. ಇದರಲ್ಲಿ ಬಿಜೆಪಿ, ಶಿವಸೇನಾ (ಏಕನಾಥ್ ಶಿಂಧೆ) ಹಾಗೂ ನ್ಯಾಶನಲಿಸ್ಟ್‌ ಕಾಂಗ್ರೆಸ್‌ ಪಾರ್ಟಿಯ (ಅಜಿತ್‌ ಪವಾರ್ ಬಣ) ಇದೆ.ಈ ಬಾರಿಯ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಮಹಾಯುತಿ ಅಧಿಕಾರಕ್ಕೆ ಬರಲಿದ್ದು, 137 ಸ್ಥಾನಗಳಿಂದ 157ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ.

ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವೂ 126 ಸ್ಥಾನಗಳಿಂದ 146 ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಲಾಗಿದೆ. ಸ್ವತಂತ್ರ ಅಭ್ಯರ್ಥಿಗಳು ಸೇರಿದಂತೆ ಇತರರು 2 ರಿಂದ 8 ಸ್ಥಾನಗಳನ್ನು ಗಳಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಕಣದಲ್ಲಿ 4,136 ಅಭ್ಯರ್ಥಿಗಳಿದ್ದಾರೆ. ಇವರಲ್ಲಿ 3771 ಪುರುಷ ಅಭ್ಯರ್ಥಿಗಳು, ಮಹಿಳಾ ಅಭ್ಯರ್ಥಿಗಳು 363, ಇಬ್ಬರು ಇತರ ಅಭ್ಯರ್ಥಿಗಳಿದ್ದಾರೆ. ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯುತಿ' ಮೈತ್ರಿಕೂಟ ಮತ್ತು ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್‌ಸಿಪಿ (ಶರದ್ ಪವಾರ್) ನೇತೃತ್ವದ ಪಕ್ಷಗಳ ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ನಡುವೆ ಪೈಪೋಟಿ ಹೆಚ್ಚಾಗಿದ್ದು, ನವೆಂಬರ್‌ 23 ರಂದು ಫಲಿತಾಂಶ ಪ್ರಕಟವಾಗಲಿದೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಬಿಜೆಪಿ ಹೈಕಮಾಂಡ್‌ ಗೆ ಪ್ರತಿಷ್ಠೆಯಾಗಿದ್ದು, ಮಹಾರಾಷ್ಟ್ರದಲ್ಲಿ ಹಲವು ಪಕ್ಷಗಳ ಪೈಕಿ ಮಹಾಯತಿ ಮೈತ್ರಿಕೂಟದಲ್ಲಿ ಬಿಜೆಪಿ 149, ಶಿವಸೇನೆ (ಏಕನಾಥ್ ಶಿಂಧೆ ಬಣ) 81, ಎನ್‌ಸಿಪಿ (ಅಜಿತ್ ಪವಾರ್ ಬಣ) 59 ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಇನ್ನೂ ಎಂವಿಎ ಮೈತ್ರಿಕೂಟದಲ್ಲಿ ಕಾಂಗ್ರೆಸ್ 101, ಶಿವಸೇನೆ (ಉದ್ಧವ್ ಠಾಕ್ರೆ ಬಣ) 95, ಎನ್‌ಸಿಪಿ (ಶರದ್ ಪವಾರ್) 86 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಉಳಿದಂತೆ ಬಿಎಸ್‌ಪಿಯ 237, ಎಐಎಂಐಎಂ 17, ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+