Maharashtra Election 2024 Result: ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮುನ್ನಡೆ

ಮುಂಬೈ, ನವೆಂಬರ್ 23: ಮಹಾರಾಷ್ಟ್ರ ರಾಜ್ಯದ 288 ಸದಸ್ಯ ಬಲದ ವಿಧಾನಸಭೆ ಚುನಾವಣೆಯ ಮತ ಎಣಿಕೆ ಶನಿವಾರ ನಡೆಯುತ್ತಿದೆ. ನವೆಂಬರ್ 20 ಬುಧವಾರ ಒಂದೇ ಹಂತದಲ್ಲಿ ರಾಜ್ಯದಲ್ಲಿ ಮತದಾನ ನಡೆದಿತ್ತು. ಮತ್ತೊಂದು ಕಡೆ ಜಾರ್ಖಂಡ್ ರಾಜ್ಯದಲ್ಲಿ 81 ಕ್ಷೇತ್ರಗಳ ಮತ ಎಣಿಕೆಯೂ ನಡೆಯುತ್ತಿದೆ. ಕರ್ನಾಟಕದ 3 ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶವೂ ಇಂದು ಪ್ರಕಟವಾಗಲಿದೆ.

ಬೆಳಗ್ಗೆ 8 ಗಂಟೆಗೆ ಮಹಾರಾಷ್ಟ್ರ ರಾಜ್ಯದ ಮತ ಎಣಿಕೆ ಆರಂಭವಾಗಿದೆ. ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿ 'ಮಹಾಯುತಿ' ಮೈತ್ರಿಕೂಟ ಮತ್ತು ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್‌ಸಿಪಿ (ಶರದ್ ಪವಾರ್) ನೇತೃತ್ವದ ಪಕ್ಷಗಳ ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ಎದುರಾಳಿಗಳು.

Maharashtra Assembly Election 2024 Result Early Trends Baramati Seat Ajit Pawar Leading

ಬಾರಾಮತಿ ಕ್ಷೇತ್ರದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ, ಮಹಾಯತಿ ಮೈತ್ರಿಕೂಟದ ಅಭ್ಯರ್ಥಿ ಅಜಿತ್ ಪವಾರ್ ಮುನ್ನಡೆಯನ್ನು ಪಡೆದುಕೊಂಡಿದ್ದಾರೆ. ಕ್ಷೇತ್ರದಲ್ಲಿ ಎಂವಿಎ ಮೈತ್ರಿಕೂಟದಿಂದ 33 ವರ್ಷದ ಯುಗೇಂದ್ರ ಎದುರಾಳಿ. ಅಜಿತ್ ಪವಾರ್ ಕಿರಿಯ ಸಹೋದರ ಶ್ರೀನಿವಾಸ್ ಅಕಾ ಬಾಪು ಅವರ ಮಗ ಯುಗೇಂದ್ರ. ಈ ಕ್ಷೇತ್ರದಲ್ಲಿ ಕುಟುಂಬದ ಪ್ರತಿಷ್ಠೆಗೆ ಕಾರಣವಾಗಿದೆ.

ಸದ್ಯದ ಟ್ರೆಂಡ್: 8.45ರ ಟ್ರೆಂಡ್ ಪ್ರಕಾರ ಮಹಾರಾಷ್ಟ್ರದಲ್ಲಿ ಎಂವಿಎ ಮೈತ್ರಿಕೂಟ 13 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇದರಲ್ಲಿ ಕಾಂಗ್ರೆಸ್ 7, ಶಿವಸೇನೆ (ಉದ್ಧವ್ ಠಾಕ್ರೆ ಬಣ) 3, ಎನ್‌ಸಿಪಿ (ಶರದ್ ಪವಾರ್ ಬಣ) 3 ಸೀಟುಗಳಲ್ಲಿ ಮುನ್ನಡೆ ಪಡೆದುಕೊಂಡಿದೆ.

ಮಹಾಯತಿ ಮೈತ್ರಿಕೂಟ 14 ಸೀಟುಗಳಲ್ಲಿ ಮುನ್ನಡೆ ಪಡೆದುಕೊಂಡಿದೆ. ಬಿಜೆಪಿ 8, ಶಿವಸೇನೆ (ಏಕನಾಥ್ ಶಿಂಧೆ ಬಣ) 5, ಎನ್‌ಸಿಪಿ (ಅಜಿತ್ ಪವಾರ್ ಬಣ) 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತರರು 2 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ.

ಮಹಾಯತಿ ಮೈತ್ರಿಕೂಟ 14 ಸೀಟುಗಳಲ್ಲಿ ಮುನ್ನಡೆ ಪಡೆದುಕೊಂಡಿದೆ. ಬಿಜೆಪಿ 8, ಶಿವಸೇನೆ (ಏಕನಾಥ್ ಶಿಂಧೆ ಬಣ) 5, ಎನ್‌ಸಿಪಿ (ಅಜಿತ್ ಪವಾರ್ ಬಣ) 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತರರು 2 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ.

ಪುಣೆ ಜಿಲ್ಲೆಯಲ್ಲಿರುವ ಬಾರಾಮತಿ ಕ್ಷೇತ್ರದಲ್ಲಿ ಅಜಿತ್ ಪವಾರ್ ಬಹಳ ಪ್ರಭಾವ ಹೊಂದಿದ್ದಾರೆ. 2019ರಲ್ಲಿ ಎನ್‌ಸಿಪಿಯ ಅಜಿತ್ ಪವಾರ್ 1,95,641 ಮತಗಳನ್ನು ಪಡೆಯುವ ಮೂಲಕ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಬಿಜೆಪಿಯ ಗೋಪಿಚಂದ್ ಪಾದಲ್ಕರ್ 30,376 ಮತಗಳನ್ನು ಪಡೆದರೆ, ವಿಬಿಎಯ ಗೋಫೆನ್ ಅವಿನಾಶ್ ಶಾಜಿ 3,111 ಮತಗಳನ್ನು ಪಡೆದಿದ್ದರು.

2014ರ ಚುನಾವಣೆಯಲ್ಲಿ ಅಜಿತ್ ಪವಾರ್ 1,50,500 ಮತಗಳೊಂದಿಗೆ ಗೆಲುವು ಸಾಧಿಸಿದ್ದರು. ಬಿಜೆಪಿ ಸ್ಪರ್ಧಿ ಪ್ರಭಾಕರ್ ದಾದರರಾಮ್ ಗವಡೆ 60,797 ಮತಗಳನ್ನು ಪಡೆದಿದ್ದರು. ಈ ಬಾರಿಯ ಚುನಾವಣೆಯಲ್ಲಿ ಶರದ್ ಪವಾರ್ ಬಣದಿಂದ ಅಜಿತ್ ಪವಾರ್ ಹೊರಗೆ ಬಂದಿರುವ ಕಾರಣ ಚುನಾವಣಾ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ.

ಜಾರ್ಖಂಡ್‌ ಕ್ಷೇತ್ರದ 8.45ರ ಅಪ್‌ಡೇಟ್ ಪ್ರಕಾರ ಇಂಡಿಯಾ ಮೈತ್ರಿಕೂಟ 41, ಎನ್‌ಡಿಎ ಮೈತ್ರಿಕೂಟ 32 ಮತ್ತು ಇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಕರ್ನಾಟಕದಲ್ಲಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನ ಸಿ. ಪಿ. ಯೋಗೇಶ್ವರ್ 31, ಸಂಡೂರಿನಲ್ಲಿ ಕಾಂಗ್ರೆಸ್‌ನ ಇ. ಅನ್ನಪೂರ್ಣ ಮತ್ತು ಶಿಗ್ಗಾವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿ ಮುನ್ನಡೆಯನ್ನು ಪಡೆದುಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+