Maharashtra Assembly Election 2024: ಹರಿಯಾಣ ಬೆನ್ನಲ್ಲೇ ಮಹಾರಾಷ್ಟ್ರ ಸೀಟು ಹಂಚಿಕೆಗೆ ಕಾಂಗ್ರೆಸ್ ಕಸರತ್ತು
ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದೆ. ಇದೀಗ ಎಲ್ಲ ರಾಜಕೀಯ ಪಕ್ಷಗಳ ಕಣ್ಣು ಮಹಾರಾಷ್ಟ್ರ ಚುನಾವಣೆಯ ಮೇಲೆ ನೆಟ್ಟಿವೆ. ಮಹಾರಾಷ್ಟ್ರದಲ್ಲಿಇನ್ನು ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಮಹಾಯುತಿ ಹಾಗೂ ಮಹಾವಿಕಾಸ್ ಅಘಾಡಿ (ಬಿಜೆಪಿ - ಕಾಂಗ್ರೆಸ್ ಮಿತ್ರ ಪಕ್ಷಗಳು) ಭರ್ಜರಿ ಸೀಟು ಹಂಚಿಕೆ ಮಾಡಿಕೊಳ್ಳುತ್ತಿವೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪ್ರಮುಖ ಪಕ್ಷಗಳು ಮಹಾರಾಷ್ಟ್ರದ ಪ್ರಮುಖ ಹಾಗೂ ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿವೆ. ಬಿಜೆಪಿಯು ಶಿವಸೇನಾ (ಏಕನಾಥ್ ಶಿಂಧೆ ಬಣ) ಹಾಗೂ ಎನ್‌ಸಿಪಿ (ಅಜಿತ್ ಪವಾರ್ ಬಣ)ದೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಈ ಮೈತ್ರಿ ಪಕ್ಷಗಳ ಒಕ್ಕೂಟಕ್ಕೆ ಮಹಾಯುತಿ ಎಂದು ಕರೆಯಲಾಗುತ್ತದೆ. ಇನ್ನು ಕಾಂಗ್ರೆಸ್ ನೇತೃತ್ವದ ಮಿತ್ರ ಪಕ್ಷಗಳಲ್ಲಿ ಶಿವಸೇನಾ ( ಉದ್ಧವ ಠಾಕ್ರೆ ಬಣ) ಹಾಗೂ ಎನ್‌ಸಿಪಿ (ಶರದ್ ಪವಾರ್ ಬಣ)ದೊಂದಿಗೆ ಗುರುತಿಸಿಕೊಂಡಿದೆ. ಕಾಂಗ್ರೆಸ್ ಮಿತ್ರ ಪಕ್ಷದ ಒಕ್ಕೂಟವನ್ನು ಮಹಾವಿಕಾಸ ಅಘಾಡಿ ಎನ್ನಲಾಗುತ್ತದೆ.

ಮಹಾರಾಷ್ಟ್ರ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಹಾಗೂ ಬಿಜೆಪಿ ಮಿತ್ರ ಪಕ್ಷಗಳ ನಡುವೆ ಸೀಟು ಹಂಚಿಕೆ ವಿಷಯ ಪ್ರಧಾನವಾಗುತ್ತಿದೆ. ಇನ್ನು ಈಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಕಾಂಗ್ರೆಸ್‌ನ ಮಿತ್ರ ಪಕ್ಷಗಳು ಉತ್ತಮ ಸಾಧನೆ ಮಾಡಿದ್ದವು. ಇದೀಗ ಆ ಸಾಧನೆಯ ಆಧಾರದ ಮೇಲೆ ಮತ್ತೆ ಸೀಟು ಹಂಚಿಕೆಯಾಗಬೇಕು ಎನ್ನುವ ಆಗ್ರಹ ಕಾಂಗ್ರೆಸ್‌ನಿಂದ ಕೇಳಿ ಬಂದಿದೆ ಎನ್ನಲಾಗಿದೆ.
2024ನೇ ಸಾಲಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳ ನಡುವೆ ಸೀಟು ಹಂಚಿಕೆಯಾಗಿತ್ತು. ಅದರಲ್ಲಿ ಕಾಂಗ್ರೆಸ್ ಪಕ್ಷವು ಉತ್ತಮ ಸಾಧನೆ ಮಾಡಿತ್ತು. ಇದೀಗ ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಸೀಟು ಹಂಚಿಕೆ ಪ್ರಕ್ರಿಯೆ ಬದಲಾಗಿದೆ ಎಂದು ಹೇಳಲಾಗಿದೆ. ಕಾಂಗ್ರೆಸ್‌ನ ಪ್ರಮುಖ ನಾಯಕರು ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆಯ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳಲಾಗಿದೆ. ಅದರ ಪ್ರಕಾರ, ಮಹಾರಾಷ್ಟ್ರದಲ್ಲಿ ಈಗ ಸೀಟು ಹಂಚಿಕೆ ವಿಧಾನ ಬದಲಾಗಿದೆ ಎನ್ನಲಾಗುತ್ತಿದೆ.

ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ ಸಂಪೂರ್ಣ ಬದಲಾಗಿದೆ. ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆಯ ವಿಚಾರ ಸಂಪೂರ್ಣ ಬದಲಾಗಿದೆ. ಲೋಕಸಭೆ ಚುನಾವಣೆಯ ಸಂದರ್ಭದಲ್ಲೂ ಮೂರು ಪಕ್ಷಗಳ ನಡುವೆ ಸೀಟು ಹಂಚಿಕೆಯಾಗಿತ್ತು. ಕಾಂಗ್ರೆಸ್ 17 ಕ್ಷೇತ್ರಗಳಲ್ಲಿ ಸ್ಪರ್ಧಿಸಿ, 13 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಇನ್ನು ಎನ್‌ಸಿಪಿಯು 10 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 8 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ, 21 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದ ಶಿವಸೇನಾ (ಉದ್ಧವ ಠಾಕ್ರೆ ಬಣ) 9 ಲೋಕಸಭಾ ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು.
ಶಿವಸೇನಾ & ಕಾಂಗ್ರೆಸ್ ನಡುವೆ ಪೈಪೋಟಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ದಿನಾಂಕ ಸಮೀಪಿಸುತ್ತಿದೆ. ಇದೀಗ ಕಾಂಗ್ರೆಸ್ ಹಾಗೂ ಶಿವಸೇನಾದ ನಡುವೆ ಸೀಟು ಹಂಚಿಕೆ ಚರ್ಚೆ ಜೋರಾಗಿದೆ ಎಂದು ಹೇಳಲಾಗಿದೆ. ಈಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಶಿವಸೇನಾ ಪಕ್ಷಕ್ಕಿಂತ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ಹೀಗಾಗಿ, ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ ಸಿಗಬೇಕು ಎನ್ನುವ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ನಡುವೆ ಎನ್‌ಸಿಪಿಯಿಂದಲೂ ಸೀಟು ಚೌಕಾಸಿ ಜೋರಾಗಿದೆ ಎಂದು ವಿಶ್ಲೇಷಿಸಲಾಗಿದೆ.












Click it and Unblock the Notifications