Maharashtra Election 2024: ಮಹಾರಾಷ್ಟ್ರದಲ್ಲಿ 30 ವರ್ಷದಲ್ಲೇ ದಾಖಲೆಯ ಮತದಾನ
ಮುಂಬೈ, ನವೆಂಬರ್ 21: ಮಹಾರಾಷ್ಟ್ರ ರಾಜ್ಯದ 288 ಸದಸ್ಯ ಬಲದ ವಿಧಾನಸಭೆಗೆ ಒಂದೇ ಹಂತದಲ್ಲಿ ಬುಧವಾರ ಮತದಾನ ನಡೆದಿದೆ. ರಾಜ್ಯದ ಚುನಾವಣೆ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ. ಎಕ್ಸಿಟ್ ಪೋಲ್ ಸಮೀಕ್ಷೆಗಳು ಪ್ರಕಟವಾಗಿದ್ದು, ನವೆಂಬರ್ 23ರ ಶನಿವಾರ ಮತ ಎಣಿಕೆ ನಡೆಯಲಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 145.
ಮಹಾರಾಷ್ಟ್ರ ರಾಜ್ಯದಲ್ಲಿ ಬುಧವಾರ ರಾತ್ರಿ 11.45ರ ಮಾಹಿತಿಯಂತೆ ಮತದಾನ ಪ್ರಮಾಣ ಶೇ 65.1 ಆಗಿದೆ. 30 ವರ್ಷಗಳಲ್ಲೇ ದಾಖಲೆಯ ಮತದಾನವಾಗಿದ್ದು, ಯಾವ ಪಕ್ಷಕ್ಕೆ ಸಹಾಯಕವಾಗಲಿದೆ? ಎಂಬ ಲೆಕ್ಕಾಚಾರ ಆರಂಭವಾಗಿದೆ.

1995ರಲ್ಲಿ ರಾಜ್ಯದಲ್ಲಿ ಶೇ 71.69ರಷ್ಟು ಮತದಾನವಾಗಿತ್ತು. 2024ರ ಲೋಕಸಭೆ ಚುನಾವಣೆಯ ಸಮಯದಲ್ಲಿ ರಾಜ್ಯದಲ್ಲಿ ಶೇ 61.39ಕ್ಕೂ ಅಧಿಕ ಮತದಾನ ದಾಖಲಾಗಿತ್ತು. 2019ರ ವಿಧಾನಸಭೆ ಚುನಾವಣೆಯಲ್ಲಿ 61.4ರಷ್ಟು ಮತದಾನವಾಗಿತ್ತು.
ಆಡಳಿತ ಪಕ್ಷಕ್ಕೆ ಅನುಕೂಲ?: ಮಹಾರಾಷ್ಟ್ರದ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿ 'ಮಹಾಯುತಿ' ಮೈತ್ರಿಕೂಟ ಮತ್ತು ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್‌ಸಿಪಿ (ಶರದ್ ಪವಾರ್) ನೇತೃತ್ವದ ಪಕ್ಷಗಳ ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ಎದುರಾಳಿಗಳು.
ಮತದಾನ ಹೆಚ್ಚಳವಾಗಿರುವ ಪರಿಣಾಮ ಮಹಾಯತಿ, ಎಂವಿಎ ನಡುವೆ ಪ್ರಬಲ ಪೈಪೋಟಿಗೆ ಕಾರಣವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಮಹಾಯತಿ ಮೈತ್ರಿಕೂಟ ಶೇ 42.71ರಷ್ಟು ಮತಗಳನ್ನು ಪಡೆದಿತ್ತು. ಎಂವಿಎ ಮೈತ್ರಿಕೂಟ ಶೇ 43.91ರಷ್ಟು ಮತಗಳನ್ನು ಪಡೆದಿತ್ತು.
ಈಗ ವಿಧಾನಸಭೆ ಚುನಾವಣೆಯಲ್ಲಿ ಶೇ 3.5ರಷ್ಟು ಮತದಾನ ಪ್ರಮಾಣ ಹೆಚ್ಚಳವಾಗಿದೆ. ಇದು ಚುನಾವಣೆಯಲ್ಲಿ ಸೋಲು, ಗೆಲುವು ತೀರ್ಮಾನಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ರಾಜ್ಯದಲ್ಲಿ 2019ರಲ್ಲಿ 8.85 ಕೋಟಿ ಮತದಾರರು ಇದ್ದರು. ಈ ಸಂಖ್ಯೆ ಶೇ 9.5ರಷ್ಟು ಹೆಚ್ಚಾಗಿದ್ದು, 9.69 ಕೋಟಿ ಮತದಾರರು ಈ ಬಾರಿ ಇದ್ದರು.
ಮುಂಬೈ, ಥಾಣೆ ನಂತಹ ನಗರ ಪ್ರದೇಶದಲ್ಲಿಯೇ ಮತದಾನ ಪ್ರಮಾಣ ಕಡಿಮೆಯಾಗಿದೆ. ಮುಂಬೈ ನಗರದಲ್ಲಿ ಶೇ 52.07, ಪುಣೆಯಲ್ಲಿ ಶೇ 60.70 ಮತ್ತು ಥಾಣೆಯಲ್ಲಿ ಶೇ 56.05ರಷ್ಟು ಮತದಾನವಾಗಿದೆ. ಮುಂಬೈ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಶೇ 55.77ರಷ್ಟು ಮತದಾನ ದಾಖಲಾಗಿದೆ.
ಕೇಂದ್ರ ಚುನಾವಣಾ ಆಯೋಗದ ಮಾಹಿತಿ ಪ್ರಕಾರ ನಗರಕ್ಕೆ ಹೋಲಿಕೆ ಮಾಡಿದರೆ ಗ್ರಾಮೀಣ ಪ್ರದೇಶದಲ್ಲಿ ಮತದಾನ ಪ್ರಮಾಣ ಏರಿಕೆಯಾಗಿದೆ. ಪಶ್ಚಿಮ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ ಹೆಚ್ಚಿನ ಅಂದರೆ 76.25ರಷ್ಟು ಮತದಾನವಾಗಿದೆ. ಮುಂಬೈ ನಗರದಲ್ಲಿ ಅತಿ ಕಡಿಮೆ ಎಂದರೆ ಶೇ 52.07ರಷ್ಟು ಮತದಾನವಾಗಿದೆ.
ರಾಜ್ಯದಲ್ಲಿ ಬಾರಾಮತಿ ಕ್ಷೇತ್ರ ಹೈಪ್ರೊಫೈಲ್ ಕ್ಷೇತ್ರವಾಗಿದೆ. ಉಪ ಮುಖ್ಯಂತ್ರಿ ಅಜಿತ್ ಪವಾರ್ ಮತ್ತು ಶರದ್ ಪವಾರ್ ಬಣದ ಯುಗೇಂದ್ರ ಯಾದವ್ ಇಲ್ಲಿ ಎದುರಾಳಿಗಳು. ಈ ಕ್ಷೇತ್ರದಲ್ಲಿ ಈ ಬಾರಿ 71.03ರಷ್ಟು ಮತದಾನವಾಗಿದೆ. 2019ರಲ್ಲಿ 68.82ರಷ್ಟು ಮತದಾನವಾಗಿತ್ತು.
ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೊಪ್ರಿ-ಪಂಚಖಾಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ. ಕ್ಷೇತ್ರದಲ್ಲಿ ಶೇ 59.85 ರಷ್ಟು ಮತದಾನವಾಗಿದೆ. ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸ್ಪರ್ಧಿಸಿರುವ ನಾಗ್ಪುರ ನೈಋತ್ಯ ಕ್ಷೇತ್ರದಲ್ಲಿ ಶೇ 54.49ರಷ್ಟು ಮತದಾನ ದಾಖಲಾಗಿದೆ.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications