Maharashtra Assembly Election 2024: ಮಹಾರಾಷ್ಟ್ರದಲ್ಲಿ ಅತಂತ್ರ ಫಲಿತಾಂಶ
ಮುಂಬೈ, ಅಕ್ಟೋಬರ್ 19: ಮಹಾರಾಷ್ಟ್ರ ರಾಜ್ಯದ ವಿಧಾನಸಭೆ ಚುನಾವಣೆ 2024ರ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ. 288 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 22ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ. ರಾಜ್ಯದ ಚುನಾವಣೆ ಕುರಿತು ಚುನಾವಣಾ ಪೂರ್ವ ಸಮೀಕ್ಷೆಗಳು ಪ್ರಕಟವಾಗುತ್ತಿವೆ. ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷಗಳಿಗೆ ಈ ಚುನಾವಣೆ ಭಾರೀ ಮಹತ್ವದ್ದು.
ಸದ್ಯ ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯುತಿ' ಮೈತ್ರಿಕೂಟ ಅಧಿಕಾರದಲ್ಲಿದೆ. ಈ ಬಾರಿಯ ಚುನಾವಣೆಯನ್ನು ಸಹ ಮೈತ್ರಿಕೂಟ ಒಟ್ಟಾಗಿ ಎದುರಿಸಲಿದೆ. ಸೀಟು ಹಂಚಿಕೆ ಮಾತುಕತೆ ನಡೆಯುತ್ತಿದೆ. ರಾಜ್ಯದಲ್ಲಿ ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್ ನಂಬರ್ 146.

ರಾಜ್ಯದ ವಿರೋಧ ಪಕ್ಷಗಳು ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ರಚನೆ ಮಾಡಿಕೊಂಡಿವೆ. ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್‌ಸಿಪಿ (ಶರದ್ ಪವಾರ್) ನೇತೃತ್ವದ ಪಕ್ಷಗಳ ಮೈತ್ರಿಕೂಟ ಇದಾಗಿದೆ. ಈ ಮೈತ್ರಿಕೂಟದ ಸೀಟು ಹಂಚಿಕೆ ಸಹ ಇನ್ನೂ ಅಂತಿಮಗೊಂಡಿಲ್ಲ.
ಅತಂತ್ರ ಫಲಿತಾಂಶ: ಮಹಾರಾಷ್ಟ್ರ ರಾಜ್ಯದ ಸದ್ಯದ ಮಾಹಿತಿ ಪ್ರಕಾರ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯುತಿ' ಮೈತ್ರಿಕೂಟದ ಸರ್ಕಾರ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ಆದ್ದರಿಂದ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ.
ಮಹಾರಾಷ್ಟ್ರ ರಾಜ್ಯದ ವಿಧಾನಸಭೆ ಚುನಾವಣೆ 2024ರ ಕುರಿತು Janmatpolls ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದೆ. ಸಮೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಅಚ್ಚರಿಗೆ ಕಾರಣವಾಗಿದೆ. ಸಮೀಕ್ಷೆಯ ವರದಿಯಂತೆ ಅತಂತ್ರ ಫಲಿತಾಂಶ ಬರಲಿದೆ.
ಮಹಾರಾಷ್ಟ್ರದ ಒಟ್ಟು ವಿಧಾನಸಭಾ ಕ್ಷೇತ್ರಗಳು 288. ಶನಿವಾರದ ಗ್ರೌಂಡ್ ರಿಪೋರ್ಟ್ ಪ್ರಕಾರ
ಬಿಜೆಪಿ 82-84, ಕಾಂಗ್ರೆಸ್ 52-54 ಕ್ಷೇತ್ರಗಳಲ್ಲಿ ಜಯಗಳಿಸಲಿದೆ.
Maharashtra assembly election-2024
— Janmat polls (@Janmatpolls) October 19, 2024
Total-288 seats
Ground report today
BJP-82-84
Congress-52-54
NDA-129-133
INDIA-138-142
Other-16-18#MaharashtraAssemblyElection
ಮೈತ್ರಿಕೂಟದಂತೆ ನೋಡುವುದಾದರೆ ಎನ್‌ಡಿಎ ಮೈತ್ರಿಕೂಟ 129-133, ಇಂಡಿಯಾ ಮೈತ್ರಿಕೂಟ 138-142 ಮತ್ತು ಇತರರು 16-18 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 146. ಚುನಾವಣಾ ಪೂರ್ವ ಸಮೀಕ್ಷೆಯಿಂತೆ ಯಾವುದೇ ಪಕ್ಷಕ್ಕೆ ಬಹುಮತ ಬರುವುದಿಲ್ಲ.
ಹರಿಯಾಣ ರಾಜ್ಯದಂತೆ ಮಹಾರಾಷ್ಟ್ರದಲ್ಲಿಯೂ ಬಿಜೆಪಿಗೆ ಆಡಳಿತ ವಿರೋಧಿ ಅಲೆ ಸಂಕಷ್ಟ ತರುವ ನಿರೀಕ್ಷೆ ಇದೆ ಎಂದು ಸಮೀಕ್ಷೆಗಳು ಹೇಳಿವೆ. ಆದರೆ ಹರಿಯಾಣದಲ್ಲಿ ಬಿಜೆಪಿ ಸ್ಪಷ್ಟ ಬಹುಮತವನ್ನು ಪಡೆದು 3ನೇ ಬಾರಿಗೆ ಸರ್ಕಾರ ರಚನೆ ಮಾಡುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಮಹಾರಾಷ್ಟ್ರ ಬಿಜೆಪಿಗೆ ಪ್ರಮುಖವಾದ ರಾಜ್ಯವಾಗಿದ್ದು, ಹೆಚ್ಚು ಸ್ಥಾನಗಳಲ್ಲಿ ಗೆದ್ದು ಅಧಿಕಾರ ಹಿಡಿಯಬೇಕು ಎಂದು ಪಕ್ಷ ಗುರಿಯನ್ನು ಹೊಂದಿದೆ.
ಇದುವರೆಗೂ ಮಹಾರಾಷ್ಟ್ರ ರಾಜ್ಯದ ವಿಧಾನಸಭೆ ಚುನಾವಣೆ 2024ರ ಕುರಿತು ಪ್ರಕಟವಾದ ಎಲ್ಲಾ ಸಮೀಕ್ಷೆಗಳು ಸಹ ಬಿಜೆಪಿ ನೇತೃತ್ವದ ಮಹಾಯತಿ ಮೈತ್ರಿಕೂಟ ಅಧಿಕಾರ ಕಳೆದುಕೊಳ್ಳಲಿದೆ ಎಂದೇ ಹೇಳಿವೆ. ಆದ್ದರಿಂದ ಎಂವಿಎ ಮೈತ್ರಿಕೂಟದ ನಾಯಕರ ಉತ್ಸಾಹವೂ ಹೆಚ್ಚಿದೆ.
ಮಹಾಯತಿ ಮತ್ತು ಎಂವಿಎ ಮೈತ್ರಿಕೂಟದ ಸೀಟು ಹಂಚಿಕೆ ಇನ್ನೂ ಅಂತಿವಾಗಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳು ಎಷ್ಟು ಸೀಟುಗಳಲ್ಲಿ ಕಣಕ್ಕಿಳಿಯಲಿವೆ?. ಪ್ರಾದೇಶಿಕ ಪಕ್ಷವಾದ ಶಿವಸೇನೆಗೆ ಎಷ್ಟು ಸೀಟು ಸಿಗಲಿದೆ? ಎಂಬುದು ಲೆಕ್ಕಾಚಾರವಾಗಿದೆ. ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡದೇ ಎರಡು ಮೈತ್ರಿಕೂಟಗಳು ಚುನಾವಣೆ ಎದುರಿಸಲಿವೆ.












Click it and Unblock the Notifications