Maharashtra Assembly Election 2024: ಉದ್ಧವ್ ಠಾಕ್ರೆ ಬಣಕ್ಕೆ ಶಾಕ್ ಕೊಟ್ಟ ಪಕ್ಷದ ನಾಯಕ!
ಮುಂಬೈ, ಅಕ್ಟೋಬರ್ 29: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ-2024ಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಶಿವಸೇನೆ (ಉದ್ಧವ್ ಠಾಕ್ರೆ ಬಣ)ದ ನಾಯಕರೊಬ್ಬರು ಪಕ್ಷಕ್ಕೆ ಶಾಕ್ ನೀಡಿದ್ದಾರೆ. ರಾಜ್ಯದ 288 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 146.
ರಾಜ್ಯದ ವಿರೋಧ ಪಕ್ಷಗಳು ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ರಚನೆ ಮಾಡಿಕೊಂಡು ವಿಧಾನಸಭೆ ಚುನಾವಣೆ ಎದುರಿಸುತ್ತಿವೆ. ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದಲ್ಲಿ ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್‌ಸಿಪಿ (ಶರದ್ ಪವಾರ್) ನೇತೃತ್ವದ ಪಕ್ಷಗಳಿವೆ. ತಲಾ 85 ಸೀಟುಗಳನ್ನು ಹಂಚಿಕೆ ಮಾಡಿಕೊಂಡು ಪಕ್ಷಗಳು ಚುನಾವಣೆಗೆ ಹೋಗುತ್ತಿವೆ.

ಶಿವಸೇನೆ (ಉದ್ಧವ್ ಠಾಕ್ರೆ ಬಣ)ದ ನಾಯಕ ಕಿಶನ್ ಚಂದ್ ತನ್ವಾನಿ ಚುನಾವಣೆಗೂ ಮೊದಲು ಪಕ್ಷದ ನಾಯಕರಿಗೆ ಶಾಕ್ ನೀಡಿದ್ದಾರೆ. ಶಿವಸೇನೆ ಮೊದಲ ಪಟ್ಟಿಯಲ್ಲಿಯೇ ಔರಂಗಾಬಾದ್ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಕಿಶನ್ ಚಂದ್ ತನ್ವಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು. ಆದರೆ ಸೋಮವಾರ ಕಿಶನ್ ಚಂದ್ ತನ್ವಾನಿ ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಕಣದಿಂದ ಹಿಂದೆ ಸರಿದ ಅಭ್ಯರ್ಥಿ: ಕಿಶನ್ ಚಂದ್ ತನ್ವಾನಿ, "ತಾವು 2024ರ ವಿಧಾನಸಭೆ ಚುನಾವಣೆಗೆ ಶಿವಸೇನೆ (ಉದ್ಧವ್ ಠಾಕ್ರೆ ಬಣ)ಯಿಂದ ಕಣಕ್ಕಿಳಿಯುವುದಿಲ್ಲ. 2014ರ ಚುನಾವಣೆಯಂತೆ ಈ ಬಾರಿಯೂ ನನಗೆ ಪ್ರತಿಕೂಲ ಪರಿಸ್ಥಿತಿ ಇದೆ" ಎಂದು ಹೇಳಿದ್ದಾರೆ.
"ನಾನು ಕಳೆದ ಒಂದು ವಾರದಿಂದ ಕ್ಷೇತ್ರದಲ್ಲಿ ಪರಿಶೀಲನೆ ನಡೆಸುತ್ತಿದ್ದೇನೆ. ಇಲ್ಲಿನ ಪರಿಸ್ಥಿತಿಯು 2014ರ ರೂಪದಲ್ಲಿಯೇ 2024ರಲ್ಲಿ ಇದೆ. ಈ ಬಾರಿ ನಾನು ಈ ಕ್ಷೇತ್ರದಿಂದ ಸ್ಪರ್ಧಿಸದಿರಲು ಬಯಸಿದ್ದೇನೆ" ಎಂದರು.
ಕಿಶನ್ ಚಂದ್ ತನ್ವಾನಿ ಹೇಳಿಕೆಯಿಂದ ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನವೆಂಬರ್ 20ರಂದು ನಡೆಯುವ ಚುನಾವಣೆಗೆ ನಾಮಪತ್ರವನ್ನು ಸಲ್ಲಿಕೆ ಮಾಡಲು ಅಕ್ಟೋಬರ್ 29 ಕೊನೆಯ ದಿನವಾಗಿದೆ. ನವೆಂಬರ್ 4 ನಾಮಪತ್ರವನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ.
2014ರ ವಿಧಾನಸಭೆ ಚುನಾವಣೆಯಲ್ಲಿ ಔರಂಗಾಬಾದ್ ಸೆಂಟ್ರಲ್ ಕ್ಷೇತ್ರದಲ್ಲಿ ಕಿಶನ್ ಚಂದ್ ತನ್ವಾನಿ ಬಿಜೆಪಿ ಅಭ್ಯರ್ಥಿಯಾಗಿದ್ದರು. ಚುನಾವಣೆಯಲ್ಲಿ ಅವರು 40,770 ಮತಗಳನ್ನು ಪಡೆದು ಮೂರನೇ ಸ್ಥಾನವನ್ನು ಪಡೆದಿದ್ದರು. ಎಐಎಂಐಎಂ ಅಭ್ಯರ್ಥಿಯಾದ ಸೈಯದ್ ಇಮ್ತಿಯಾಜ್ ಜಲೀಲ್ 61,843 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಎನ್‌ಸಿಪಿಯ ಪಾಟೀಲ್ ವಿನೋದ್ ನಾರಾಯಣ್ 11,842 ಮತಗಳನ್ನು ಪಡೆದಿದ್ದರು. ಬಿಎಸ್‌ಪಿಯ ಜಗ್‌ಪತ್ ಸಂಜಯ್ 11,048 ಮತಗಳನ್ನು ಪಡೆದಿದ್ದರು.
ಔರಂಗಾಬಾದ್ ಸೆಂಟ್ರಲ್ ಕ್ಷೇತ್ರದಲ್ಲಿ ಪೂರಕವಾದ ವಾತಾವರಣವಿಲ್ಲ. ನಾನು ಚುನಾವಣಾ ಕಣದಿಂದ ಹಿಂದೆ ಸರಿಯುವ ಬಗ್ಗೆ ಉದ್ಧವ್ ಠಾಕ್ರೆ ಜೊತೆ ಮಾತುಕತೆ ನಡೆಸಿಲ್ಲ. ನಾನು ಅವರ ಜೊತೆ ಮಾತನಾಡಿ ಅವರ ಸೂಚನೆಯಂತೆ ಮುಂದಿನ ಕ್ರಮವನ್ನು ಕೈಗೊಳ್ಳುತ್ತೇನೆ. ನನ್ನ ಅಧಿಕೃತ ನಾಮಪತ್ರ ಶಿವಸೇನೆ ನಾಯಕ ಅಂಬಾದಾಸ್ ದಾನ್ವೆ ಬಳಿ ಇದೆ ಎಂದು ಕಿಶನ್ ಚಂದ್ ತನ್ವಾನಿ ಹೇಳಿದ್ದಾರೆ.
ಸದ್ಯ ಮಹಾರಾಷ್ಟ್ರ ರಾಜ್ಯದ ಆಡಳಿತ ಪಕ್ಷ ಮಹಾಯತಿ ಮೈತ್ರಿಕೂಟ. ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿಕೊಂಡಿರುವ 'ಮಹಾಯುತಿ' ಮೈತ್ರಿಕೂಟದ ಸೀಟು ಹಂಚಿಕೆ ಪೂರ್ಣಗೊಂಡಿದ್ದು, ಬಿಜೆಪಿಗೆ ಅತಿ ಹೆಚ್ಚಿನ ಸೀಟುಗಳು ಸಿಕ್ಕಿವೆ.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications