Maharashtra Election: ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಪ್ಲಾನ್: ಸಂಜಯ್ ರಾವುತ್
ಮುಂಬೈ, ಅಕ್ಟೋಬರ್ 20: ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಹರಿಯಾಣ ಗೆದ್ದಿರುವ ಬಿಜೆಪಿಯು ಇದೀಗ ಮಹಾರಾಷ್ಟ್ರದಲ್ಲಿ ಕಮಾಲ್ ಮಾಡಲು ಮುಂದಾಗಿದೆ. ಇಲ್ಲಿ ಸಹ ವಿವಿಧ ಪಕ್ಷಗಳ ಜೊತೆಗೆ ಬಿಜೆಪಿ, ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿವೆ. ಹೀಗಾಗಿ ಇಲ್ಲೂ ಸಹ ತೀವ್ರ ಪೈಪೋಟಿ ನಡೆಯಲಿದೆ. ಈ ಮಧ್ಯೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಕೇಂದ್ರ ಬಿಜೆಪಿ ಪ್ಲಾನ್ ಮಾಡಿಕೊಂಡಿದೆ ಎಂದು ಗಂಭೀರ ಆರೋಪ ಕೇಳಿ ಬಂದಿದೆ.
ಹೌದು, ಕೇಂದ್ರ ಬಿಜೆಪಿ ವಿರುದ್ಧ ಭಾನುವಾರ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಮುಖ್ಯ ವಕ್ತಾರ ಸಂಜಯ್ ರಾವುತ್ ವಾಗ್ದಾಳಿ ನಡೆಸಿದರು. ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಜೊತೆಗೆ ವಿರೋಧ ಪಕ್ಷದ ಮಹಾವಿಕಾಸ್ ಅಗಾಡಿ (ಎಂವಿಎ) ಅಧಿಕಾರದಿಂದ ದೂರ ಇಡಲು ಸಂಚು ಮಾಡಲಾಗಿದೆ ಎಂದು ಆಪಾದಿಸಿದ್ದಾರೆ.

ಈ ಸಂಚಿನ ಮೂಲ ರೂವಾರಿಗಳು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಚಾಣಕ್ಯ ಅಮಿತ್ ಶಾ ಇವರು ಎಂದು ಶಿವಸೇನೆ ನೇರ ವಾಗ್ದಾಳಿ ಮಾಡಿದೆ. ರಾವುತ್ ಪ್ರಕಾರ ಬಿಜೆಪಿ ಜತೆಗಿನ ಪಕ್ಷಗಳು ಸೋಲು ಕಾಣಲಿವೆ ಎಂದು ಭವಿಷ್ಯ ನುಡಿದಿದ್ದಾರೆ.
ಮಹಾ ವಿಕಾಸ್ ಅಘಾಡಿ (I.N.D.I.A.) ಮೈತ್ರಿಕೂಟವು ಬಿಜೆಪಿ ಜೊತೆಗೆ ಭಾರತೀಯ ಚುನಾವಣಾ ಆಯೋಗವನ್ನು ಟೀಕಿಸಿದರು. ಬಿಜೆಪಿ ಚುನಾವಣಾ ಆಯೋಗದ ಜೊತೆಗೆ ಚುನಾವಣೆ ಎದುರಿಸಲಿದೆ ಎಂದು ಕಿಡಿ ಕಾರಿದೆ.
ಮಹಾರಾಷ್ಟ್ರದಲ್ಲಿ 14ನೇ ವಿಧಾನಸಭೆ ಅವಧಿಯು ಮುಂದಿನ ತಿಂಗಳ ನವೆಂಬರ್ 26 ದಿನಗಳು ಕೊನೆಗೊಳ್ಳಲಿದೆ. ರಾಜ್ಯದ 15ನೇ ವಿಧಾನಸಭಾ ಚುನಾವಣೆಗೆ ಬಿಜೆಪಿಯು 99 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮತದಾನವು ನವೆಂಬರ್ 20 ರಂದು ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಅದಾಗಿ ಎರಡು ದಿನದಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ ಎಂದು ಸಂಜಯ್ ರಾವುತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ವಿರುದ್ಧ ಸರ್ಕಾರ ರಚನೆಯ ಬಗ್ಗೆ ಚರ್ಚಿಸಲು ಮಹಾ ವಿಕಾಸ್ ಅಘಾಡಿಗೆ ಸಿದ್ಧವಾಗಿದೆ. ಪ್ರತಿ ತಂತ್ರ ಹೆಣೆದು ಮಹಾರಾಷ್ಟ್ರದಲ್ಲಿ ಅತ್ಯಧಿಕ ಸೀಟು ಗೆಲ್ಲಲು ಪ್ಲಾನ್ ಮಾಡಿಕೊಳ್ಳುತ್ತಿದೆ. ಮಹಾ ವಿಕಾಸ್ ಅಘಾಡಿ ಎರಡು ದಿನಗಳಲ್ಲಿ ವಿಶ್ವಾಸ ಸಾಧಿಸಲು ಆಗದಿದ್ದರೆ, ರಾಜ್ಯಪಾಲರು ಆರು ತಿಂಗಳ ಕಾಲ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಬಹುದು ಎಂದು ರಾಹುತ್ ತಿಳಿಸಿದ್ದಾರೆ.
ಇನ್ನೂ ಬಿಜೆಪಿಯು ಹರಿಯಾಣದಲ್ಲಿ ತಳಮಟ್ಟದಲ್ಲಿ ಸಭೆ ನಡೆಸಿ ಎಲ್ಲ ಸಮುದಾಯದ ಜನರನ್ನು ಸಂಪರ್ಕಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಅಂತಹದ್ದೆ ಗೆಲುವಿನ ಯೋಚನೆ ಮಹಾರಾಷ್ಟ್ರದಲ್ಲೂ ಮಾಡಿದೆ ಎನ್ನಲಾಗಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮಹತ್ವದ ಪಾತ್ರ ವಹಿಸುವ ಸಾಧ್ಯತೆ ಇದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications