Get Updates
Get notified of breaking news, exclusive insights, and must-see stories!

Maharashtra Assembly Elections 2024: ಕಾಂಗ್ರೆಸ್‌ನ ಎಂವಿಎ ಮೈತ್ರಿಕೂಟಕ್ಕೆ ಹೊಸ ಸವಾಲು

ಮುಂಬೈ, ಅಕ್ಟೋಬರ್ 11: ಹರಿಯಾಣ ಮತ್ತು ಜಮ್ಮು & ಕಾಶ್ಮೀರ ವಿಧಾನಸಭೆ ಚುನಾವಣೆ ಫಲಿತಾಂಶ ಮುಂಬರುವ ಜಾರ್ಖಂಡ್ ಮತ್ತು ಮಹಾರಾಷ್ಟ್ರ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ? ಎಂಬ ಚರ್ಚೆ ಆರಂಭವಾಗಿದೆ. ಹರಿಯಾಣದಲ್ಲಿ ಕಾಂಗ್ರೆಸ್‌ಗೆ ಭಾರೀ ಮುಖಭಂಗವಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್‌ ಜೊತೆ ಮೈತ್ರಿ ಮಾಡಿಕೊಂಡರೂ ಸಹ ಪಕ್ಷ ನಿರೀಕ್ಷೆ ಮಾಡಿದಷ್ಟು ಸ್ಥಾನ ಗೆಲ್ಲಲು ವಿಫಲವಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ 'ಮಹಾಯುತಿ' ಮತ್ತು ಕಾಂಗ್ರೆಸ್ ನೇತೃತ್ವದ 'ಮಹಾವಿಕಾಸ್ ಅಘಾಡಿ' ಮೈತ್ರಿಕೂಟಗಳು ತಮ್ಮದೇ ಆದ ಸವಾಲುಗಳನ್ನು ಎದುರಿಸಲಿವೆ.

ಕೇಂದ್ರ ಚುನಾವಣಾ ಆಯೋಗ ಯಾವುದೇ ಕ್ಷಣದಲ್ಲಿ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ಸದ್ಯದ ಮಾಹಿತಿ ಪ್ರಕಾರ ನವೆಂಬರ್ 2ನೇ ವಾರದ ಮಹಾರಾಷ್ಟ್ರದ 288 ಸದಸ್ಯ ಬಲದ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಈ ಚುನಾವಣೆ ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷಗಳಿಗೆ ಮಹತ್ವದ್ದಾಗಿದೆ.

Maharashtra Assembly Elections 2024 MVA To Analyse What Happened In Haryana

ಹರಿಯಾಣದ 90 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 48 ಸೀಟುಗಳಲ್ಲಿ ಗೆಲ್ಲುವ ಮೂಲಕ 3ನೇ ಬಾರಿಗೆ ಅಧಿಕಾರವನ್ನು ಪಡೆದು, ಐತಿಹಾಸಿಕ ಸಾಧನೆ ಮಾಡಿದೆ. ಕಾಂಗ್ರೆಸ್ 37, ಐಎನ್‌ಎಲ್‌ಡಿ 2, ಪಕ್ಷೇತರರು 3 ಸ್ಥಾನದಲ್ಲಿ ಜಯಗಳಿಸಿದ್ದಾರೆ. 90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ 42, ಕಾಂಗ್ರೆಸ್ 6 ಸ್ಥಾನಗಳಲ್ಲಿ ಜಯಗಳಿಸಿವೆ. ಬಿಜೆಪಿ ರಾಜ್ಯದಲ್ಲಿ 29 ಸ್ಥಾನ ಗೆದ್ದಿದೆ. ಈ ಚುನಾವಣೆ ಫಲಿತಾಂಶ ಮಹಾರಾಷ್ಟ್ರದ ಮೇಲೆ ಬೀರುವ ಪರಿಣಾಮ ಏನು?.

ಮಹಾವಿಕಾಸ್ ಅಘಾಡಿಗೆ ಚಿಂತೆ: ಸದ್ಯ ಮಹಾರಾಷ್ಟ್ರ ರಾಜ್ಯದಲ್ಲಿ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯುತಿ' ಮೈತ್ರಿಕೂಟ ಅಧಿಕಾರದಲ್ಲಿದೆ. ರಾಜ್ಯದ ವಿರೋಧ ಪಕ್ಷಗಳು ಕಾಂಗ್ರೆಸ್ ನೇತೃತ್ವದಲ್ಲಿ 'ಮಹಾವಿಕಾಸ್ ಅಘಾಡಿ' ಮೈತ್ರಿಕೂಟ ರಚನೆ ಮಾಡಿಕೊಂಡಿವೆ. ಇದರಲ್ಲಿ ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್‌ಸಿಪಿ (ಶರದ್ ಪವಾರ್) ಪಕ್ಷಗಳಿವೆ.

2024ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮಹಾವಿಕಾಸ್ ಅಘಾಡಿ ಮೈತ್ರಿಕೂಟ ಉತ್ತಮ ಸಾಧನೆ ಮಾಡಿದೆ. ಆದರೆ ಈಗ, ಹರಿಯಾಣ, ಜಮ್ಮು & ಕಾಶ್ಮೀರ ಫಲಿತಾಂಶ ಮೈತ್ರಿಕೂಟಕ್ಕೆ ಚಿಂತೆ ತಂದಿದೆ. ಹರಿಯಾಣದ ಫಲಿತಾಂಶ 'ಮಹಾಯತಿ'ಯ ಉತ್ಸಾಹ ಹೆಚ್ಚಿಸಿದೆ. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇದ್ದರೂ ಸಹ ಕಾಂಗ್ರೆಸ್ ಅಧಿಕಾರವನ್ನು ಪಡೆಯಲು ವಿಫಲವಾಗಿದೆ.

ಮಹಾವಿಕಾಸ್ ಅಘಾಡಿ ಮೈತ್ರಿಕೂಟದ ಸೀಟು ಹಂಚಿಕೆ ಕುರಿತು ಇನ್ನೂ ಅಂತಿಮ ಚಿತ್ರಣ ಲಭ್ಯವಾಗಿಲ್ಲ. ಜಮ್ಮು ಮತ್ತು ಕಾಶ್ಮೀರದಂತೆ ಕಾಂಗ್ರೆಸ್‌ಗೆ ಕಡಿಮೆ ಸೀಟು ಬಂದರೆ ಸರ್ಕಾರ ರಚನೆ ಮಾಡುವುದು ಹೇಗೆ? ಎಂಬುದು ಶಿವಸೇನೆ (ಉದ್ಧವ್ ಠಾಕ್ರೆ ಬಣ)ಯ ಚಿಂತೆಯಾಗಿದೆ. ಕಾಂಗ್ರೆಸ್‌ಗಿಂತ ಹೆಚ್ಚು ಸ್ಥಾನಗಳಲ್ಲಿ ಕಣಕ್ಕಿಳಿಯಬೇಕು ಎಂದು ಪಕ್ಷ ಚಿಂತಿಸುತ್ತಿದೆ.

ದಸರಾ ಸಂದರ್ಭದಲ್ಲಿಯೇ ಸೀಟು ಹಂಚಿಕೆ ಘೋಷಣೆ ಮಾಡಿ, ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಮಹಾವಿಕಾಸ್ ಅಘಾಡಿ ಮೈತ್ರಿಕೂಟ ತೀರ್ಮಾನಿಸಿತ್ತು. ಆದರೆ ಇನ್ನೂ ಸಹ ಸೀಟು ಹಂಚಿಕೆ ಅಂತಿಮವಾಗಿಲ್ಲ.

ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಮಾತನಾಡಿ, "ಹರಿಯಾಣದಲ್ಲಿ ಬಿಜೆಪಿ ಜಯಗಳಿಸಿದ್ದರೂ ಸಹ ಅದೇ ಮಾದರಿ ಮಹಾರಾಷ್ಟ್ರದಲ್ಲಿ ಕೆಲಸ ಮಾಡುವುದಿಲ್ಲ. ಎರಡೂ ರಾಜ್ಯಗಳ ಚಿತ್ರಣ ಬೇರೆ-ಬೇರೆ. ರಾಜ್ಯದ ಜನರು ಶಿವಸೇನೆ-ಬಿಜೆಪಿ-ಎನ್‌ಸಿಪಿ ಸರ್ಕಾರದ ಭಷ್ಟ್ರಾಚಾರವನ್ನು ನೋಡಿ ಆಕ್ರೋಶಗೊಂಡಿದ್ದಾರೆ" ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಗೆಲ್ಲಬೇಕು ಎಂದು ಎರಡೂ ಮೈತ್ರಿಕೂಟಗಳು ತಂತ್ರ ರೂಪಿಸುತ್ತಿವೆ. ಚುನಾವಣೆ ನವೆಂಬರ್‌ನಲ್ಲಿ ನಡೆಯಲಿದ್ದು, ಈ ವಿಧಾನಸಭೆ ಚುನಾವಣೆ ಫಲಿತಾಂಶ ದೇಶದ ಕುತೂಹಲಕ್ಕೆ ಕಾರಣವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+