ಭೀಕರ ಅಪಘಾತದಲ್ಲಿ ಮಹಾರಾಷ್ಟ್ರ ಬಿಜೆಪಿ ಮುಖಂಡ ನಿಧನ
ಭಿವಿಂಡಿ, ಆಗಸ್ಟ್ 28: ಮಹಾರಾಷ್ಟ್ರದ ಭಿವಿಂಡಿಯ ಸರಾವಳಿ ಎಂಬಲ್ಲಿ ನಡೆದ ಭೀಕರ ಅಪಘಾತದಲ್ಲಿ ಥಾಣೆ ಜಿಲ್ಲೆಯ ಬಿಜೆಪಿ ಉಪಾಧ್ಯಕ್ಷ ಗುರುನಾಥ್ ವಾಮನ್ ಲಾಸ್ನೆ ದುರಂತ ಅಂತ್ಯ ಕಂಡಿದ್ದಾರೆ.
ವೇಗವಾಗಿ ಬರುತ್ತಿದ್ದ ಖಾಸಗೀ ಬಸ್ ವೊಂದಕ್ಕೆ ಲಾಸ್ನೆ ಅವರು ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ ಹೊಡದ ಪರಿಣಾಮ ಈ ದುರಂತ ಸಂಭವಿಸಿದೆ. 55 ವರ್ಷದ ನಾಸ್ನೆ ಅವರು ಥಾಣೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸುತ್ತಿದ್ದರು.
ಬಸ್ಸಿನ ಚಾಲಕ ನಾಪಲತ್ತೆಯಾಗಿದ್ದು, ಆತನ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 304(A), 184 ಮತ್ತು 279ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸೋಮವಾರ ಸಂಜೆ 6 ಗಂಟೆಯ ಸುಮಾರಿಗೆ ತಮ್ಮ ಮಾರುತಿ ಸುಜುಕಿ ವಾಗನ್ ಆರ್ ಕಾರಿನಲ್ಲಿ ಲಾಸ್ನೆ ಅವರು ಪ್ರಯಾಣಿಸುತ್ತಿದ್ದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಇವರ ನಿಧನಕ್ಕೆ ಮಹಾರಾಷ್ಟ್ರದ ಬಿಜೆಪಿ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.












Click it and Unblock the Notifications