BMC Elections 2026: ಮಹಾರಾಷ್ಟ್ರ ಪಾಲಿಕೆ ಚುನಾವಣೆಯಲ್ಲಿ ಚುರುಕಿನ ಮತದಾನ, ಮುಂಬೈ ಗದ್ದುಗೆ ಯಾರಿಗೆ?
ಮುಂಬೈ: ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ 2026 ಇಂದು ಜನವರಿ 15ರಂದು ಬೆಳಗ್ಗೆಯಿಂದ ಆರಂಭವಾಗಿದೆ. ಪ್ರಮುಖ ರಾಜಕೀಯ ಪಕ್ಷಗಳು ಮುಖಾಮುಖಿ ಆಗಿವೆ. ಮಹಾರಾಷ್ಟ್ರದಾದ್ಯಂತ 29 ಮಹಾನಗರ ಪಾಲಿಕೆಗಳಲ್ಲಿ ಮತದಾನ ನಡೆಯುತ್ತಿದೆ. ಮಧ್ಯಾಹ್ನ 1.30ಕ್ಕೆ ಮುಂಬೈ 30%, ಪುಣೆ 27% ಮತ್ತು ನಾಗಪುರ 26.5% ರಷ್ಟು ಮತದಾನ ಆಗಿದೆ.
ಮಹಾರಾಷ್ಟ್ರ ಬೃಹನ್ ಮುಂಬೈ ಮಹಾನಗರ ಪಾಲಿಕೆ (ಹಿಎಂಸಿ) ಸೇರಿದಂತೆ ಒಟ್ಟು 29 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಒಟ್ಟು 3.48 ಕೋಟಿ ಮತದಾರರು ಇಂದು ಮತದಾನ ಮಾಡುತ್ತಿದ್ದಾರೆ. ಅವರೆಲ್ಲರು 15,931 ಅಭ್ಯರ್ಥಿಗಳ ಭವಿಷ್ಯವನ್ನು ಇಂದು ನಿರ್ಧರಿಸಲಿದ್ದಾರೆ. ದೇಶದ ದೊಡ್ಡ ಪಾಲಿಕೆ ಸಂಸ್ಥೆಗಳಲ್ಲಿ ಬಿಎಂಸಿ ಒಂದು. ನಾಲ್ಕು ವರ್ಷಗಳ ಬಳಿಕ ನಡೆಯುತ್ತಿರುವ ಚುನಾವಣೆ ಇದಾಗಿದೆ. ಇದರ ಮೇಲೆ ಭಾರತೀಯರ ಗಮನ ಸಳೆಯುತ್ತಿದೆ. ಬಿಎಂಸಿಯು ಇದು ವಾರ್ಷಿಕ 74,400 ಕೋಟಿ ರೂ.ಗೂ ಅಧಿಕ ಬಜೆಟ್ ಗಾತ್ರ ಹೊಂದಿದೆ. ಒಟ್ಟು 227 ಸ್ಥಾನಗಳಿಗೆ 1,700 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

20 ವರ್ಷಗಳ ನಂತರ ಮುಂಬೈ ಸ್ಥಳೀಯ ಚುನಾವಣೆಯಲ್ಲಿ ತಮ್ಮ ಪರಂಪರೆಯನ್ನು ಮರಳಿ ಪಡೆಯಲು ಉದ್ಧವ್ ಠಾಕ್ರೆ ಸಹೋದರರು ಮತ್ತು ಬಿಜೆಪಿ-ಶಿವಸೇನಾ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ನಡೆದಿದೆ. ಪ್ರಮುಖ ರಾಷ್ಟ್ರೀಯ ಹಾಗೂ ಸ್ಥಳೀಯ ಪಕ್ಷಗಳಿಗೆ ಈ ಚುಣಾವಣೆಯ ಗೆಲುವು ಪ್ರಮುಖವಾಗಿದೆ.
ಜನವರಿ 16ರಂದು ಮತ ಎಣಿಕೆ
ಇಂದು ಬೆಳಗ್ಗೆ ಚುನಾವಣೆ 7.30ಕ್ಕೆ ಆರಂಭವಾಯಿತು. ಸಂಜೆ 5.30ರವರೆಗೆ ಮತದಾರರಿಗೆ ಮತದಾನ ಮಾಡಲು ಅವಕಾಶ ಇದೆ. ಮತ ಎಣಿಕೆಯು ಜನವರಿ 16ರಂದು ಶುಕ್ರವಾರ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ.
ಪ್ರಮುಖ ಪಕ್ಷಗಳ ಪ್ರಮುಖ ನಾಯಕರು, ಬಾಲಿವುಡ್ ಸೆಲೆಬ್ರೆಟಿಗಳಾದ ಅಮಿರ್ ಖಾನ್, ಶ್ರದ್ಧಾ ಕಪೂರ್, ಚಿತ್ರಕಥೆಗಾರ ಸಲೀಂ ಖಾನ್, ಸೇರಿದಂತೆ ಗಣ್ಯರು ಮತದಾನ ಮಾಡಿದರು. ಎಲ್ಲರು ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಿದರು. ಮಹಾರಾಷ್ಟ್ರ ನಾಗರಿಕ ಸಂಸ್ಥೆಗಳ ಚುನಾವಣೆಯಲ್ಲಿ ಮತದಾನ ಬೆಳಗ್ಗೆ 11:30 ರವರೆಗೆ ಶೇಕಡಾ 20 ಕ್ಕಿಂತ ಕಡಿಮೆ ಮತದಾರರು ಮತ ಚಲಾಯಿಸಿದ್ದಾರೆ. ಇದು ನಿರೀಕ್ಷೆಗಿಂತ ಕಡಿಮೆ ಎಂದು ಹೇಳಲಾಗಿದೆ.
2022ರ ಶಿವಸೇನೆ ವಿಭಜನೆಯಾದ ನಂತರ ನಡೆಯುತ್ತಿರುವ ಮೊದಲ ಬಿಎಂಸಿ ಚುನಾವಣೆ ಇದಾಗಿದೆ. ಒಟ್ಟು ಸುಮಾರು ನಾಲ್ಕು ವರ್ಷಗಳ ಬಳಿಕ ನಡೆಯುತ್ತಿದೆ. ಈ ಚುನಾವಣೆಗೂ ಮುನ್ನ ಮಹಾರಾಷ್ಟ್ರದಲ್ಲಿ ಸಾಕಷ್ಟು ರಾಜಕೀಯ ಬದಲಾವಣೆ ಆಗಿವೆ. ಈ ಹಿನ್ನೆಲೆ ಬಿಎಂಸಿ ಚುನಾವಣೆ ಫಲಿತಾಂಶ ಮಹತ್ವ ಪಡೆದುಕೊಳ್ಳಲಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications