ಮಹಾರಾಷ್ಟ್ರ: ನಾಸಿಕ್‌ನಲ್ಲಿ ಕಂಟೇನರ್‌ಗೆ ಬಸ್ ಡಿಕ್ಕಿ: 10 ಮಂದಿ ಸಾವು, ಹಲವರಿಗೆ ಗಾಯ

ನಾಸಿಕ್ ಅಕ್ಟೋಬರ್ 8: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಶುಕ್ರವಾರ ತಡರಾತ್ರಿ ಬಸ್‌ಗೆ ಬೆಂಕಿ ಹೊತ್ತಿಕೊಂಡು ಭಾರಿ ಅವಘಡ ಸಂಭವಿಸಿದೆ. ನಾಸಿಕ್‌ನಲ್ಲಿ ಸಂಭವಿಸಿದ ಅಪಘಾತದಿಂದ ಬೆಂಕಿ ಹೊತ್ತಿಕೊಂಡ ಬಸ್‌ನಲ್ಲಿ 10 ಜನರು ಸಜೀವ ದಹನವಾಗಿದ್ದಾರೆ. 32 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತದೇಹಗಳು ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎನ್ನಲಾಗುತ್ತಿದೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿದೆ.

ಶನಿವಾರ ಬೆಳಗ್ಗೆ ನಾಸಿಕ್ ಪೊಲೀಸರು, "ಕಳೆದ ರಾತ್ರಿ (ಶುಕ್ರವಾರ ಅಕ್ಟೋಬರ್ 7) ನಾಸಿಕ್‌ನಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡಾಗ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ, ವೈದ್ಯರ ದೃಢೀಕರಣದೊಂದಿಗೆ ನಾವು ಇನ್ನೂ ನಿಖರವಾದ ಸಾವಿನ ಸಂಖ್ಯೆಯನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ'' ಎಂದಿದ್ದಾರೆ.

Maharashtra

ನಾಸಿಕ್‌ನ ಔರಂಗಾಬಾದ್ ರಸ್ತೆಯಲ್ಲಿ ಕಂಟೈನರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಗ್ನಿಶಾಮಕ ದಳದ ಅಧಿಕಾರಿಗಳು ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿರುವಾಗ ಬಸ್‌ಗೆ ಬೆಂಕಿ ವೇಗವಾಗಿ ಆವರಿಸಿದೆ. ಸದ್ಯ ವೈರಲ್ ವಿಡಿಯೋದಲ್ಲಿ ಬೆಂಕಿಯ ತೀವ್ರತೆ ಕಾಣಿಸಿಕೊಂಡಿದೆ. ಸಾವಿನ ನಿಖರ ಸಂಖ್ಯೆಯನ್ನು ಕಂಡುಹಿಡಿಯಲು ಇನ್ನೂ ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+