Maharashtra CM: ಮಹಾರಾಷ್ಟ್ರ ಸಿಎಂ ಬಗ್ಗೆ ಅಜಿತ್ ಪವಾರ್ ಮಹತ್ವದ ಹೇಳಿಕೆ

ಮಹಾರಾಷ್ಟ್ರ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಕುತೂಹಲಕ್ಕೆ ಇನ್ನು ಕೆಲವೇ ಗಂಟೆಗಳಲ್ಲಿ ತೆರೆ ಬೀಳುವ ಸಾಧ್ಯತೆ ಇದೆ. ಬಿಜೆಪಿ ಮತ್ತು ಶಿವಸೇನೆ ನಡುವೆ ಸಿಎಂ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದ್ದು, ಏಕನಾಥ್ ಶಿಂಧೆ ಸಿಎಂ ಸ್ಥಾನ ಬೇಕೆಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಮಹಾಯುತಿ ಮೈತ್ರಿಕೂಟದ ನ್ಯಾಶನಲಿಸ್ಟ್ ಕಾಂಗ್ರೆಸ್ ಮುಖ್ಯಸ್ಥ ಶರದ್ ಪವಾರ್ ಈ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.

ಮಹಾರಾಷ್ಟ್ರ ಮುಂದಿನ ಸಿಎಂ ಬಿಜೆಪಿ ಪಕ್ಷದವರೇ ಆಗಿರಲಿದ್ದಾರೆ ಎಂದು ಹೇಳಿದ್ದು ಎಲ್ಲಾ ಕುತೂಹಲಗಳಿಗೆ ತೆರೆ ಬಿದ್ದಿದೆ. ಮೈತ್ರಿಕೂಟದ ಇಬ್ಬರು ನಾಯಕರಿಗೆ ಉಪ ಮುಖ್ಯಮಂತ್ರಿ ಸ್ಥಾನ ದೊರೆಯಲಿದೆ ಎಂದು ಹೇಳಿದ್ದು, ಅಧಿಕಾರ ಹಂಚಿಕೆ ಬಹುತೇಕ ಅಂತಿಮವಾಗಿದೆ ಎನ್ನುವ ಸೂಚನೆ ನೀಡಿದ್ದಾರೆ.

maharashtra chief minister will be from bjp

ಅಜಿತ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಬಿಜೆಪಿ ಮಹಾಯುತಿ ಮೈತ್ರಿಕೂಟದ ಪಕ್ಷಗಳಾಗಿವೆ. ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ 132 ಸ್ಥಾನಗಳನ್ನು ಗೆದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆದ್ದರೆ, ಶರದ್ ಪವಾರ್ ಅವರ ಎನ್‌ಸಿ 41 ಸ್ಥಾನ ಮತ್ತು ಏಕನಾಥ್ ಶಿಂಧೆ ಅವರ ಶಿವಸೇನೆ 57 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಒಟ್ಟಾರೆ 288 ಸ್ಥಾನಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಈ ಮೂರು ಪಕ್ಷಗಳು ಒಟ್ಟಾಗಿ 230 ಸ್ಥಾನ ಗೆದ್ದಿದ್ದು ಸರ್ಕಾರ ರಚನೆ ಕಸರಿತ್ತನಲ್ಲಿ ತೊಡಗಿವೆ.

ಅಜಿತ್ ಪವಾರ್ ಹೇಳಿದ್ದೇನು?

ದೆಹಲಿಯಲ್ಲಿ ನಡೆದ ಮಹಾಯುತಿ ನಾಯಕರ ಸಭೆಯಲ್ಲಿ, ಬಿಜೆಪಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿದ್ದು, ಉಳಿದ ಎರಡು ಪಕ್ಷಗಳಿಗೆ ಉಪಮುಖ್ಯಮಂತ್ರಿ ಸ್ಥಾನಗಳನ್ನು ಬಿಟ್ಟುಕೊಡಲಾಗುತ್ತದೆ ಎಂದು ನಿರ್ಧರಿಸಲಾಗಿದೆ ಎಂದು ಪವಾರ್ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26ರಂದು ಕೊನೆಯಾಗಿದ್ದು ಸರ್ಕಾರ ರಚಿಸಲು ವಿಳಂಬವಾಗುತ್ತಿರುವ ಬಗ್ಗೆ ಮಾಧ್ಯಮಗಳು ಪ್ರಶ್ನೆ ಮಾಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಪವಾರ್, ಈ ರೀತಿ ಸರ್ಕಾರ ರಚನೆ ತಡವಾಗುತ್ತಿರುವುದು ಇದೇ ಮೊದಲೇನಲ್ಲ, 1999ರಲ್ಲಿ ಸರ್ಕಾರ ರಚಿಸಲು ಒಂದು ತಿಂಗಳು ಸಮಯ ತೆಗೆದುಕೊಳ್ಳಲಾಗಿತ್ತು ಎಂದು ಸಮರ್ಥನೆ ಮಾಡಿಕೊಂಡರು.

ಡಿಸೆಂಬರ್ 5ರಂದು ಪ್ರಮಾಣವಚನ

ಮಹಾರಾಷ್ಟ್ರದಲ್ಲಿ ಬಿಜೆಪಿ ಇನ್ನೂ ತನ್ನ ಚುನಾಯಿತ ಶಾಸಕರ ಸಭೆಯನ್ನು ಕರೆದಿಲ್ಲ ಅಥವಾ ಪಕ್ಷದ ಶಾಸಕಾಂಗ ಪಕ್ಷದ ನಾಯಕನ್ನು ಆಯ್ಕೆ ಮಾಡಿಲ್ಲ. ಸರ್ಕಾರ ರಚನೆ ಕಸರತ್ತು ಬಹುತೇಕ ಅಂತಿಮಹಂತಕ್ಕೆ ಬಂದಿದೆ. ಇನ್ನೆರಡು ದಿನಗಳಲ್ಲಿ ಸಿಎಂ ಹೆಸರು ಘೋಷಣೆ ಮಾಡುವ ಸಾಧ್ಯತೆ ಇದೆ. ಆದರೆ ಈಗಾಗಲೇ ಡಿಸೆಂಬರ್ 5ರಂದು ಸಂಜೆ 5 ಗಂಟೆಗೆ ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಂಬೈನ ಆಜಾದ್ ಮೈದಾನದಲ್ಲಿ ನಡೆಯಲಿದೆ ಎಂದು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ ಬವಾಂಕುಲೆ ಮಾಹಿತಿ ನೀಡಿದ್ದಾರೆ.

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಅನೇಕ ಬಿಜೆಪಿ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಮೂಲಗಳ ಪ್ರಕಾರ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರಿಗೆ ಸಿಎಂ ಪಟ್ಟ ಒಲಿಯುವ ಸಾಧ್ಯತೆ ಇದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+