Get Updates
Get notified of breaking news, exclusive insights, and must-see stories!

ಮಹಾರಾಷ್ಟ್ರ: ರಾಮ ಮಂದಿರ ಮುಂದೆ ಎರಡು ಗುಂಪುಗಳ ನಡುವೆ ಘರ್ಷಣೆ, ಕಲ್ಲು ತೂರಾಟ

ಮುಂಬೈ ಮಾರ್ಚ್ 30: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಕಿರಾದ್‌ಪುರ ಪ್ರದೇಶದಲ್ಲಿ ಬುಧವಾರ ರಾತ್ರಿ ರಾಮ ಮಂದಿರದ ಹೊರಗೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಎರಡು ಗುಂಪುಗಳ ಜನರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ವಿಷಯ ಉಲ್ಬಣಗೊಂಡಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು ಗುಂಪು ದೇವಾಲಯದ ಹೊರಗೆ ನಿಲ್ಲಿಸಲಾಗಿದ್ದ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಗುಂಪನ್ನು ಚದುರಿಸಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಲಾಯಿತು. ಅಗ್ನಿಶಾಮಕ ದಳದ ಮೂರು ವಾಹನಗಳು ಸ್ಥಳಕ್ಕೆ ಧಾವಿಸಿ ಸುಟ್ಟು ಕರಕಲಾದ ವಾಹನಗಳನ್ನು ನಂದಿಸಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಅಹಿತಕರ ಘಟನೆಗಳು ನಡೆಯದಂತೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

Maharashtra: Clash between two groups, stone pelting in front of Ram Mandir

''ಛತ್ರಪತಿ ಸಂಭಾಜಿನಗರದ ಕಿರಾಡಪುರ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಕಲ್ಲು ತೂರಾಟ, ಕೆಲವು ಖಾಸಗಿ ಹಾಗೂ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಜನರನ್ನು ಚದುರಿಸಲು ಪೊಲೀಸರು ಬಲಪ್ರಯೋಗ ಮಾಡಿದ್ದು, ಈಗ ಪರಿಸ್ಥಿತಿ ಶಾಂತವಾಗಿದೆ. ಕಿಡಿಗೇಡಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ" ಎಂದು ಛತ್ರಪತಿ ಸಂಭಾಜಿನಗರ ಸಿಪಿ, ನಿಖಿಲ್ ಗುಪ್ತಾ ಸುದ್ದಿ ಸಂಸ್ಥೆಗೆ ತಿಳಿಸಿದರು.

ವರದಿಯ ಪ್ರಕಾರ, ಕಿರಾದ್‌ಪುರ ಪ್ರದೇಶದಲ್ಲಿರುವ ರಾಮ ಮಂದಿರದ ಹೊರಗೆ ಬುಧವಾರ ರಾತ್ರಿ 12:30ಕ್ಕೆ ಇಬ್ಬರು ಯುವಕರ ನಡುವೆ ವಾಗ್ವಾದ ನಡೆದಿದೆ. ನಂತರ ವಿಷಯ ಎಲ್ಲಿಯವರೆಗೆ ಸಾಗಿತ್ತೆಂದರೆ ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದರು. ಇದಾದ ನಂತರ ಜನರು ಪರಸ್ಪರ ಕಲ್ಲು ತೂರಾಟ ಆರಂಭಿಸಿದರು. ದುಷ್ಕರ್ಮಿಗಳು ಹಲವು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

Maharashtra: Clash between two groups, stone pelting in front of Ram Mandir

ಘರ್ಷಣೆಗೆ ಕಾರಣವೇನು?

ಕೆಲ ಕಿಡಿಗೇಡಿಗಳು ದೇವಾಲಯದ ಮೇಲೆ ದಾಳಿ ಮಾಡಿದ್ದು ಈ ಘರ್ಷಣೆಗೆ ಕಾರಣ ಎನ್ನಲಾಗುತ್ತಿದೆ. ಔರಂಗಾಬಾದ್ ಸಂಸದ ಇಮ್ತಿಯಾಜ್ ಜಲೀಲ್ ರಾಮ ಮಂದಿರಕ್ಕೆ ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ನಂತರ ಕೆಲವು ದುಷ್ಕರ್ಮಿಗಳು ದೇವಾಲಯದ ಮೇಲೆ ದಾಳಿ ಮಾಡಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿದೆ. ಇದೇ ಘಟನೆ ಎರಡು ಗುಂಪುಗಳ ನಡುವೆ ಘರ್ಷಣೆಗೆ ಕಾರಣವಾಗಿದೆ.

ಆರಂಭದಲ್ಲಿ ಕೆಲ ಜನರ ನಡುವೆ ಮಾತ್ರ ಇದ್ದ ಜಗಳ ವಿಕೋಪಕ್ಕೆ ತಿರುಗಿ ಹಲವಾರು ಜನರು ಸ್ಥಳಕ್ಕೆ ಆಗಮಿಸಿದ್ದಾರೆ. ಹೀಗೆ ಸ್ಥಳದಲ್ಲಿ ಎರಡು ಗುಂಪುಗಳಾಗಿದ್ದು ಪರಸ್ಪರ ಕಲ್ಲು ತೂರಾಟ ನಡೆದಿದೆ. ಇದರಿಂದ ಪೊಲೀಸರು ಮದ್ಯೆಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸಿದ್ದಾರೆ. ಆದರೆ ಆರಮಭದಲ್ಲಿ ಅದು ಸಾಧ್ಯವಾಗಿಲ್ಲ. ಉದ್ರಿಕ್ತರು ಪರಸ್ಪರ ಕಲ್ಲು ತೂರಾಟ ಮಾಡಲು ಆರಂಭಿಸುತ್ತಿದ್ದಂತೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಮುಂದಾದಾದಾಗ ಬಲಪ್ರಯೋಗ ನಡೆದಿದೆ. ಈ ವೇಳೆ ಪೊಲೀಸ್ ವಾಹನಗಳು ಹಾಗೂ ಖಾಸಗೀ ವಾಹನಗಳಿಗೂ ಬೆಂಕಿ ಹಚ್ಚಿದ್ದಾರೆ.

Maharashtra: Clash between two groups, stone pelting in front of Ram Mandir

ಘಟನೆಯ ವಿಡಿಯೊ ವೈರಲ್

ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಆಗಮಿಸುತ್ತಿದ್ದಂತೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಎಐಎಂಐಎಂನ ರಾಷ್ಟ್ರೀಯ ಕಾರ್ಪೊರೇಟರ್ ಮೊಹಮ್ಮದ್ ನಾಸಿರುದ್ದೀನ್ ಅವರು ಟ್ವಿಟ್ಟರ್‌ನಲ್ಲಿ ಘಟನೆಯ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

"ನಾವು ಪೊಲೀಸ್ ಬಲವನ್ನು ಬಳಸಿಕೊಂಡು ಎಲ್ಲಾ ದುಷ್ಕರ್ಮಿಗಳನ್ನು ಹತ್ತಿಕ್ಕಿದ್ದೇವೆ ಮತ್ತು ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಜನರು ಶಾಂತವಾಗಿರಲು ನಾನು ಮನವಿ ಮಾಡುತ್ತೇನೆ. ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ನಿಖಿಲ್ ಗುಪ್ತಾ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+