Eknath Shinde: ಖಾತೆ ಹಂಚಿಕೆ ಮಾಡಿದ ದೇವೇಂದ್ರ ಫಡ್ನವೀಸ್, ಶಿಂಧೆಗೆ ಯಾವ ಖಾತೆ
ಮುಂಬೈ, ಡಿಸೆಂಬರ್ 22: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಡಿಸೆಂಬರ್ 15ರ ಭಾನುವಾರ ಸಚಿವ ಸಂಪುಟ ವಿಸ್ತರಣೆ ಮಾಡಿದ್ದರು. ಫಡ್ನವೀಸ್ ಸಂಪುಟದಲ್ಲಿ ಬಿಜೆಪಿಯ 19 ಮತ್ತು ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ)ದ ತಲಾ 10 ಶಾಸಕರು ಸಚಿವರಾಗಿದ್ದಾರೆ. ಖಾತೆ ಹಂಚಿಕೆ ಅಂತಿಮಗೊಳಿಸಿ ಆದೇಶವನ್ನು ಹೊರಡಿಸಿದ್ದು, ಗೃಹ ಖಾತೆಯನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ ಇಟ್ಟುಕೊಂಟಿದ್ದಾರೆ. ಡಿಸೆಂಬರ್ 5ರಂದು 'ಮಹಾಯತಿ' ಮೈತ್ರಿಕೂಟದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿತ್ತು. ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿ, ಏಕನಾಥ್ ಶಿಂಧೆ ಹಾಗೂ ಅಜಿತ್ ಪವಾರ್ ಉಪ ಮುಖ್ಯಮಂತ್ರಿಗಳು.
ಶನಿವಾರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ವಿಚಾರದಲ್ಲಿ ಶಿವಸೇನೆ ನಾಯಕ ಏಕನಾಥ್ ಶಿಂಧೆ ಹಲವು ಬೇಡಿಕೆಗಳನ್ನು ಇಟ್ಟಿದ್ದರು. ಉಪ ಮುಖ್ಯಮಂತ್ರಿಯಾದ ತಮಗೆ ಗೃಹ ಖಾತೆ ಬೇಕು ಎಂದು ಒತ್ತಾಯಿಸಿದ್ದರು. ಅಂತಿಮವಾಗಿ ದೇವೇಂದ್ರ ಫಡ್ನವೀಸ್ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ 2024ರಲ್ಲಿ ಬಿಜೆಪಿ ಏಕಾಂಗಿಯಾಗಿ 132 ಸೀಟುಗಳಲ್ಲಿ ಜಯಗಳಿಸಿತ್ತು. ಆದರೆ 288 ಸದಸ್ಯ ಬಲದ ವಿಧಾನಸಭೆಯಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 145. ಆದ್ದರಿಂದ ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯತಿ' ಮೈತ್ರಿಕೂಟ ಸರ್ಕಾರ ರಚನೆಗೊಂಡಿದೆ.
'ಮಹಾಯತಿ' ಮೈತ್ರಿಕೂಟದ ನೂತನ ಸರ್ಕಾರದಲ್ಲಿ ಶಿವಸೇನೆ (ಏಕನಾಥ್ ಶಿಂಧೆ ಬಣ) 57, ಎನ್‌ಸಿಪಿ (ಅಜಿತ್ ಪವಾರ್ ಬಣ) 41 ಸೀಟುಗಳನ್ನು ಹೊಂದಿವೆ. ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿದ್ದು, ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರನ್ನು ಉಪ ಮುಖ್ಯಮಂತ್ರಿಯಾಗಿ ಮಾಡಲಾಗಿದೆ.
ಯಾರಿಗೆ ಯಾವ ಖಾತೆ?; ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಮ್ಮ ಬಳಿ ಗೃಹ, ಇಂಧನ, ಕಾನೂನು & ನ್ಯಾಯಾಂಗ, ಸಾಮಾನ್ಯ ಆಡಳಿತ ಇಲಾಖೆ, ಮಾಹಿತಿ ಮತ್ತು ಪ್ರಚಾರ ಖಾತೆಗಳನ್ನು ಇಟ್ಟುಕೊಂಡಿದ್ದಾರೆ.
ಶಿವಸೇನೆ ನಾಯಕ, ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ನಗರಾಭಿವೃದ್ಧಿ, ವಸತಿ, ಲೋಕೋಪಯೋಗಿ ಖಾತೆಯನ್ನು ಹಂಚಿಕೆ ಮಾಡಿದ್ದಾರೆ. ಗೃಹ ಖಾತೆಗಾಗಿ ಶಿಂಧೆ ಬೇಡಿಕೆ ಇಟ್ಟಿದ್ದರು. ಆದರೆ ಚುನಾವಣೆಯಲ್ಲಿ 132 ಸೀಟು ಗೆದ್ದಿರುವ ಬಿಜೆಪಿ ಬಳಿಯೇ ಗೃಹ ಖಾತೆ ಉಳಿದಿದೆ.
ಮತ್ತೊಬ್ಬ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಬಿಜೆಪಿ ನೀಡಿದ್ದ ಭರವಸೆಯಂತೆ ಹಣಕಾಸು & ಯೋಜನೆ, ರಾಜ್ಯ ಅಬಕಾರಿ ಖಾತೆಗಳನ್ನು ನೀಡಲಾಗಿದೆ. ಅಜಿತ್ ಪವಾರ್ ಖಾತೆಗಳ ಬಗ್ಗೆ ಹೆಚ್ಚಿನ ಬೇಡಿಕೆ ಇಟ್ಟಿರಲಿಲ್ಲ. ಅವರಿಗೆ ಹಣಕಾಸು ಖಾತೆ ನೀಡುವುದಾಗಿ ಬಿಜೆಪಿ ಮಹಾಯತಿ ಸರ್ಕಾರ ರಚನೆ ಸಮಯದಲ್ಲಿಯೇ ಭರವಸೆಯನ್ನು ನೀಡಿತ್ತು.
2022ರಲ್ಲಿ ರಾಜ್ಯದಲ್ಲಿ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯತಿ' ಮೈತ್ರಿಕೂಟ ಸರ್ಕಾರ ರಚನೆಗೊಂಡಿತ್ತು. ಆಗ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿದ್ದರು. ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವೀಸ್ ಉಪ ಮುಖ್ಯಮಂತ್ರಿಯಾಗಿದ್ದರು. 2024ರ ಚುನಾವಣೆಯನ್ನು ಬಿಜೆಪಿ ಮಹಾಯತಿ ಮೈತ್ರಿಕೂಟದ ಮೂಲಕವೇ ಎದುರಿಸಿತ್ತು.
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 132, ಶಿವಸೇನೆ (ಏಕನಾಥ್ ಶಿಂಧೆ ಬಣ) 57, ಎನ್‌ಸಿಪಿ (ಅಜಿತ್ ಪವಾರ್ ಬಣ) 41, ಶಿವಸೇನೆ (ಉದ್ಭವ್ ಠಾಕ್ರೆ ಬಣ) 20, ಕಾಂಗ್ರೆಸ್ 16, ಎನ್‌ಸಿಪಿ (ಶರದ್ ಪವಾರ್ ಬಣ) 10, ಎಸ್‌ಪಿ 2 ಮತ್ತು ಇತರರು 10 ಸೀಟುಗಳಲ್ಲಿ ಜಯಗಳಿಸಿದ್ದಾರೆ.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು











Click it and Unblock the Notifications