ಮೋದಿ ಟೀಕಿಸಿದ್ದಕ್ಕೆ ಮಹಾರಾಷ್ಟ್ರದ ಪೊಲೀಸ್ ಪೇದೆ ಅಮಾನತು
ಮಹಾರಾಷ್ಟ್ರ, ಅಕ್ಟೋಬರ್ 16: ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದ್ದಕ್ಕೆ ಪೊಲೀಸ್ ಪೇದೆಯೊಬ್ಬರನ್ನು ಅಮಾನತು ಮಾಡಿರುವ ವಿಲಕ್ಷಣ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ವಾಟ್ಸಾಪ್ ಪೋಸ್ಟ್ ಒಂದರಲ್ಲಿ ಪೇದೆ ರಮೇಶ್ ಶಿಂದೆ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಮೇಶ್ ಶಿಂದೆ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಬಾಳಾಸಾಹೇಬ್ ಥೋರಟ್ ಅವರ ಅಂಗರಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಶಿಂದೆ ವಾಟ್ಸಾಪ್ ಪೋಸ್ಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದರು ಎನ್ನಲಾಗಿದೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶ ನೀಡಲಾಗಿತ್ತು. ಜಿಲ್ಲಾ ಪೊಲೀಸ್ ಸೈಬರ್ ವಿಭಾಗದಿಂದ ವಿವರವಾದ ತನಿಖೆ ನಡೆಸಿದ ನಂತರ ಭಾನುವಾರ ಪೇದೆ ವಿರುದ್ಧ ಕ್ರಮ ಜರುಗಿಸಲಾಗಿದೆ ಎಂದು ಅಹ್ಮದ್ ನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜನ್ ಕುಮಾರ್ ಶರ್ಮಾ ಹೇಳಿದ್ದಾರೆ.












Click it and Unblock the Notifications