Ajit Pawar Death: ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಅಪಘಾತ; ಡಿಸಿಎಂ ಅಜಿತ್ ಪವಾರ್ ನಿಧನ
Ajit Pawar Plane Crash: ಅಜಿತ್ ಪವಾರ್ ಪ್ರಯಾಣ ಮಾಡುತ್ತಿದ್ದ ವಿಮಾನ ಅಪಘಾತವಾಗಿದ್ದು, ವಿಮಾನದಲ್ಲಿ ಇರುವ ಎಲ್ಲಾ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಆರಂಭಿಕ ಮಾಹಿತಿಯು ಸಿಕ್ಕಿದೆ. ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಚುನಾವಣೆ ಪ್ರಚಾರಕ್ಕೆ ಎಂದು ತೆರಳುವಾಗ ವಿಮಾನ ಅಪಘಾತವಾಗಿದೆ ಎನ್ನಲಾಗಿದೆ. ಮಹಾರಾಷ್ಟ್ರದ ಬಾರಾಮತಿಯಲ್ಲಿ ಅಜಿತ್ ಪವಾರ್ ಅವರು ಪ್ರಯಾಣ ಮಾಡುತ್ತಿದ್ದ ವಿಮಾನ ಲ್ಯಾಂಡಿಂಗ್ ಸಮಯದಲ್ಲಿ ಪತನವಾಗಿದೆ. ಇದು ಖಾಸಗಿ ವಿಮಾನವಾಗಿದ್ದು, ತಾಂತ್ರಿಕ ದೋಷದಿಂದ ಘಟನೆ ಸಂಭವಿಸಿದೆಯಾ? ಅಥವಾ ಬೇರೆ ಕಾರಣ ಇದೆಯಾ? ಎಂಬ ಕುರಿತು ಚರ್ಚೆ ಶುರುವಾಗಿದೆ.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣ ಮಾಡುತ್ತಿದ್ದ ವಿಮಾನದ ಅಪಘಾತದ ತೀವ್ರತೆ ಎಷ್ಟಿತ್ತು ಎಂದರೆ, ಏರ್ಪೋರ್ಟ್ ಬಳಿ ವಿಮಾನದ ಅವಶೇಷಗಳು ಚಲ್ಲಾಪಿಲ್ಲಿಯಾಗಿ ಬಿದ್ದು ಎದೆ ನಡುಗಿಸುವಂತೆ ಇತ್ತು ದೃಶ್ಯ. ಹಾಗೇ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗಿಸಿದ್ದು, ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಪರದಾಡಿದ್ದಾರೆ. ಅಲ್ಲದೆ ವಿಮಾನ ಅಪಘಾತದ ವೇಳೆ ದೊಡ್ಡ ಮಟ್ಟದಲ್ಲಿ ಸದ್ದು ಕೂಡ ಕೇಳಿಬಂದಿದೆ ಎನ್ನಲಾಗಿದ್ದು, ಪವಾರ್ ಖಾಸಗಿ ಚಾರ್ಟರ್ಡ್ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದರು.
ವಿಮಾನ ಅಪಘಾತದಲ್ಲಿ ಮೃತಪಟ್ಟವರ ವಿವರ
ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ಅವರ ಭದ್ರತಾ ಅಧಿಕಾರಿ ವಿಧೀತ್ ಜಾಧವ್, ಪೈಲಟ್‌ಗಳಾದ ಸುಮಿತ್ ಕಪೂರ್ ಮತ್ತು ಶಾಂಭವೀ ಪಾಠಕ್ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಮತ್ತೋರ್ವ ಮೃತರನ್ನು ಪಿಂಕಿ ಜಾಧವ್ ಎಂದು ಗುರುತಿಸಲಾಗಿದೆ. ಅವರ ಹುದ್ದೆಯ ವಿವರ ತಿಳಿದು ಬಂದಿಲ್ಲ.

66 ವರ್ಷದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಜೊತೆಗೆ ಅಂಗರಕ್ಷಕರು ಕೂಡ ಇದ್ದರು ಎನ್ನಲಾಗಿದ್ದು, ಪೈಲಟ್ ಸೇರಿದಂತೆ ಒಟ್ಟಾರೆ 5 ಜನರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ದುರಂತ ಸಂಭವಿಸಿದ ವಿಮಾನ ನಿಲ್ದಾಣದಲ್ಲಿ ಇದೀಗ ವಿಮಾನಗಳ ಹಾರಾಟ ಬಂದ್ ಮಾಡಿ, ಬೆಂಕಿ ನಂದಿಸುವ ಕೆಲಸ ನಡೆಸಲಾಗಿದೆ. ವಿಮಾನದ ಅವಶೇಷ ತೆರವು ಕಾರ್ಯ ಕೂಡ ಆರಂಭವಾಗಿದ್ದು ಸ್ಥಳದಲ್ಲಿ ತನಿಖಾಧಿಕಾರಿಗಳು ಹಾಜರಾಗಿದ್ದಾರೆ. ದುರಂತದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಇದೀಗ ಕಟ್ಟೆಚ್ಚರ ವಹಿಸಲಾಗಿದೆ.
ಸಚಿವ ಸಂಪುಟ ಸಭೆಯಲ್ಲಿ ಭಾಗಿಯಾಗಿದ್ದರು
ಮಹಾರಾಷ್ಟ್ರ ರಾಜ್ಯದಲ್ಲಿ ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದ್ದು, ಚುನಾವಣೆಗಾಗಿ ಪ್ರಚಾರ ಮಾಡಲು ಎನ್‌ಸಿಪಿ ನಾಯಕ & ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. ಅಜಿತ್ ಪವಾರ್ ಮಂಗಳವಾರ ಮುಂಬೈನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದರು. ನಂತರ ಇಂದು ಮುಂಬೈ ನಗರದಿಂದ ಪುಣೆ ಕಡೆಗೆ ಅವರು ಪ್ರಯಾಣ ಬೆಳೆಸಿದ್ದರು.
VIDEO | Maharashtra Deputy Chief Minister Ajit Pawar and five other persons were killed after an aircraft carrying them crashed in Pune district. Visuals from spot.
— Press Trust of India (@PTI_News) January 28, 2026
(Source: Third Party) pic.twitter.com/6UnMLKwqtp
ಚುನಾವಣೆ ಸಭೆ ನಡೆಸಲು ತೆರಳಿದ್ದರು
ಪುಣೆಯಲ್ಲಿ ನಡೆಯಲಿರುವ ಚುನಾವಣೆ ಕುರಿತು ಸಭೆಗಳನ್ನ ನಡೆಸಲು ಖಾಸಗಿ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. ಎಲ್ಲವೂ ಸರಿಯಾಗಿದ್ದಾಗ, ಲ್ಯಾಂಡಿಂಗ್ ಸಮಯದಲ್ಲಿ ದಿಢೀರ್ ಏನೋ ವ್ಯಾತ್ಯಾಸ ಕಂಡುಬಂದಿದ್ದು, ವಿಮಾನ ಸ್ಫೋಟವಾಗಿದೆ ಎಂಬ ಮಾಹಿತಿ ಪ್ರಾಥಮಿಕ ಹಂತದಲ್ಲಿ ತಿಳಿದು ಬಂದಿದೆ. ಆದರೆ ಈ ಬಗ್ಗೆ ಸಂಪೂರ್ಣ ಮಾಹಿತಿಗೆ ತನಿಖೆ ನಡೆಯಬೇಕಿದ್ದು, ತನಿಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಹಾರಾಷ್ಟ್ರ ಉಪಮುಖ್ಯಂತ್ರಿ ಅವರ ಸಾವಿನ ಸುದ್ದಿ ಇದೀಗ ದೇಶಾದ್ಯಂತ ಸಂಚಲನ ಸೃಷ್ಟಿ ಮಾಡುತ್ತಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications