Maharashtra Election 2024: ಸಿ.ಎಂ ಆಯ್ಕೆ: ಏಕನಾಥ್ ಶಿಂಧೆ ಸ್ಫೋಟಕ ಹೇಳಿಕೆ, ಬಿಜೆಪಿ ಗುಡುಗಿಗೆ ಯೂಟರ್ನ್!
ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಆಯ್ಕೆ ಹಾಗೂ ಸರ್ಕಾರ ರಚನೆ ನಿರ್ಣಾಯಕ ಹಂತವನ್ನು ತಲುಪಿದೆ. ಇದೀಗ ಮಹಾರಾಷ್ಟ್ರದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಬಗ್ಗೆ ಜೋರು ಚರ್ಚೆ ನಡೆಯುತ್ತಿದ್ದು. ಬಹುತೇಕ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೇ ಆಯ್ಕೆಯಾಗುವುದು ಕನ್ಫರ್ಮ್ ಆಗಿದೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಇದೇ 20ಕ್ಕೆ ನಡೆದಿದ್ದು, 23ಕ್ಕೆ ಫಲಿತಾಂಶ ಪ್ರಕಟವಾಗಿದೆ. ಕಳೆದ ನಾಲ್ಕು ದಿನಗಳಿಂದಲೂ ಮುಖ್ಯಮಂತ್ರಿ ಆಯ್ಕೆ ಹಾಗೂ ಸರ್ಕಾರ ರಚನೆಯ ಕಸರತ್ತು ನಡೆಯುತ್ತಿದೆ. ಇದೀಗ ಕೇಂದ್ರ ಬಿಜೆಪಿ ಮಹಾರಾಷ್ಟ್ರ ಮುಖ್ಯಮಂತ್ರಿ ಆಯ್ಕೆ ಹಾಗೂ ಸರ್ಕಾರ ರಚನೆಯಲ್ಲಿ ಮಧ್ಯ ಪ್ರವೇಶಿಸಿದೆ.

ದೇಶದ ಪ್ರಮುಖ ಹಾಗೂ ದೊಡ್ಡ ರಾಜ್ಯಗಳಲ್ಲಿ ಒಂದಾಗಿರುವ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಪ್ರಕ್ರಿಯೆಗಳು ನಿರ್ಣಾಯಕ ಹಂತವನ್ನು ತಲುಪಿವೆ. ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟ (ಬಿಜೆಪಿ, ಶಿವಸೇನಾ - ಏಕನಾಥ್ ಶಿಂಧೆ ಬಣ ಹಾಗೂ ನ್ಯಾಶನಲಿಸ್ಟ್ ಕಾಂಗ್ರಸ್ ಪಾರ್ಟಿ - ಅಜಿತ್ ಪವಾರ್ ಬಣ) ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದವು. ಅಲ್ಲದೇ ಕಳೆದ ಎರಡೂ ವರ್ಷಗಳಿಗಿಂತಲೂ ಹೆಚ್ಚು ಮಹಾರಾಷ್ಟ್ರದಲ್ಲಿ ಮಹಾಯುತಿ ಸರ್ಕಾರ ಅಧಿಕಾರದಲ್ಲಿ ಇದ್ದು, ಏಕನಾಥ್ ಶಿಂಧೆ ಅವರು ಮುಖ್ಯಮಂತ್ರಿಯಾಗಿದ್ದಾರೆ.
ಇದೀಗ ಮಹಾರಾಷ್ಟ್ರದಲ್ಲಿ ನೂತನ ಸರ್ಕಾರ ರಚನೆಯಾಗಿದ್ದು, ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಬಗ್ಗೆ ಹಗ್ಗಾಜಿಗ್ಗಾಟ ಶುರುವಾಗಿತ್ತು. ಕಳೆದ ಬಾರಿ ಅಂದರೆ 2019ನೇ ಸಾಲಿನಲ್ಲಿ ನಡೆದ ಮಹಾರಾಷ್ಟ್ರದ ವಿಧಾನಸಭೆ ಚುನಾಚವಣೆಯ ನಂತರ ಬಾರಿ ರಾಜಕೀಯ ಹೈಡ್ರಾಮಾಗಳು ನಡೆದಿದ್ದವು.

105 ಸ್ಥಾನಗಳಲ್ಲಿ ಹಾಗೂ ಉಳಿದ ಯಾವುದೇ ಪಕ್ಷಗಳೂ ಗೆಲ್ಲದಷ್ಟು ಸ್ಥಾನಗಳಲ್ಲಿ ಬಿಜೆಪಿ ಗೆದ್ದಿತ್ತು. ಇಷ್ಟಾದರೂ ಬಿಜೆಪಿಯಿಂದ ಯಾರೂ ಮುಖ್ಯಮಂತ್ರಿ ಆಗಲು ಸಾಧ್ಯವಾಗಿರಲಿಲ್ಲ. ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು.
ಈ ಬಾರಿ ಬಿಜೆಪಿ 132 ಸ್ಥಾನಗಳಲ್ಲಿ ಗೆದ್ದಿದೆ. ಮಹಾರಾಷ್ಟ್ರದಲ್ಲಿ ಈ ಬಾರಿ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡುವುದಕ್ಕೆ ಬಿಜೆಪಿ ಸಿದ್ಧವಿಲ್ಲ. ಬಿಜೆಪಿ ಪಟ್ಟು ಹಿಡಿದ ಬೆನ್ನಲ್ಲೇ ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಕಣದಿಂದ ಹಿಂದೆ ಸರಿದಿದ್ದಾರೆ.
ಮಹಾರಾಷ್ಟ್ರದಲ್ಲಿ ಮಹಾಯುತಿಯಿಂದ ನಾವೆಲ್ಲ ಒಂದಾಗಿದ್ದೇವೆ. ಬಿಜೆಪಿಯಿಂದ ಯಾರೇ ಮುಖ್ಯಮಂತ್ರಿಯಾದರೂ ಅಥವಾ ಮುಂದಿನ ಮುಖ್ಯಮಂತ್ರಿ ಆಯ್ಕೆಗೆ ನಾವು ಬಿಜೆಪಿಯನ್ನು ಬೆಂಬಲಿಸಲಿದ್ದೇವೆ ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ.
ಮುಖ್ಯಮಂತ್ರಿಯ ಆಯ್ಕೆಯ ವಿಚಾರದಲ್ಲಿ ನಾವು ಸಂಪೂರ್ಣವಾಗಿ ಬಿಜೆಪಿಯನ್ನು ಬೆಂಬಲಿಸಲಿದ್ದೇವೆ. ಸಿ.ಎಂ ಆಯ್ಕೆ ವಿಷಯದಲ್ಲಿ ನಾವು ಮಧ್ಯ ಪ್ರವೇಶ ಮಾಡುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಈ ವಿಷಯದಲ್ಲಿ ಯಾವುದೇ ನಿರ್ಧಾರ ತೆಗೆದುಕೊಂಡರೂ ನಾವು ಅದಕ್ಕೆ ಬದ್ಧರಾಗಿರಲಿದ್ದೇವೆ ಎಂದು ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ.
ಮಹಾರಾಷ್ಟ್ರದಲ್ಲಿ ಸಿ.ಎಂ ಆಯ್ಕೆ ವಿಚಾರ ಕಗ್ಗಂಟಾಗುವ ಮುನ್ಸೂಚನೆ ಸಿಗುತ್ತಿದ್ದಂತೆ ಬಿಜೆಪಿ ಹೈಕಮಾಂಡ್ ಮಧ್ಯಪ್ರವೇಶಿಸಿತ್ತು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಜೊತೆಗೆ ಏಕನಾಥ್ ಶಿಂಧೆ ಮಾತುಕತೆ ಸಹ ಆಗಿತ್ತು. ಮಹಾರಾಷ್ಟ್ರ ಚುನಾವಣೆಯಲ್ಲಿ ಮಹಾಯುತಿಯು ಬರೋಬ್ಬರಿ 230 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದೆ. 288 ವಿಧಾನಸಭಾ ಕ್ಷೇತ್ರಗಳ ಪೈಕಿ 145 ಮ್ಯಾಜಿಕ್ ಸಂಖ್ಯೆಯಾಗಿದೆ.












Click it and Unblock the Notifications