ಮಹಾರಾಷ್ಟ್ರ: ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ಘೋಷಿಸಿದ ಚುನಾವಣಾ ಆಯೋಗ!

ಮುಂಬೈ ಫೆಬ್ರವರಿ 17: ಮಹಾರಾಷ್ಟ್ರ ರಾಜಕೀಯದಲ್ಲಿ ಗೊಂದಲಕ್ಕೆ ಇಂದು ತೆರೆ ಬಿದ್ದಂತಾಗಿದೆ. ಶಿವಸೇನೆ ವರ್ಸಸ್ ಶಿವಸೇನೆ ನಡುವಿನ ಕಾನೂನು ಹೋರಾಟದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ಗೆಲುವು ಸಿಕ್ಕಿದ್ದು, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ತೀವ್ರ ಮುಖಭಂಗವಾಗಿದೆ.

ಕೇಂದ್ರ ಚುನಾವಣಾ ಆಯೋಗ ಶಿವಸೇನೆಯ ಮೂಲ ಚಿಹ್ನೆಯಾದ ಬಿಲ್ಲು ಬಾಣವನ್ನು ಶಿಂಧೆ ಬಣಕ್ಕೆ ನೀಡುವ ಮೂಲಕ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ಘೋಷಿಸಿದೆ. ತಮ್ಮ ಬಣವನ್ನೇ ನಿಜವಾದ ಶಿವಸೇನಾ ಎಂದು ಪರಿಗಣಿಸಿ ಪಕ್ಷದ ಚುನಾವಣಾ ಚಿಹ್ನೆಯನ್ನು ನೀಡುವಂತೆ ಏಕನಾಥ್ ಶಿಂಧೆ ಬಣ ಹಾಗೂ ಉದ್ಧವ್ ಠಾಕ್ರೆ ಬಣ ಚುನಾವನಾ ಆಯೋಗದ ಮೊರೆ ಹೋಗಿದ್ದವು. ಆಯೋಗ ಅಂತಮವಾಗಿ ಬಿಲ್ಲು ಬಾಣ ಚಿಹ್ನೆಯನ್ನು ಶಿಂಧೆ ಬಣಕ್ಕೆ ನೀಡಿದೆ.

Maharashtra: Election commission declared that the Shinde faction is the real Shiv Sena!

ಶಿವಸೇನೆ ರೂಪಿಸಿರುವ ನಿಬಂಧನೆಗಳು ಮತ್ತು ಪಕ್ಷವು ಜಾರಿಗೆ ತಂದಿರುವ ಆಂತರಿಕ ಸಂವಿಧಾನವು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ. ಶಿವಸೇನೆಯು ಪಕ್ಷದೊಳಗೆ ಯಾವುದೇ ಚುನಾವಣೆಗಳನ್ನು ಆಯೋಜಿಸಿಲ್ಲ ಎಂದು ಅವರು ಹೇಳಿದ್ದಾರೆ. ಹೀಗಿರುವಾಗ ಪಕ್ಷದ ಉನ್ನತ ನಾಯಕತ್ವ ರೂಪಿಸಿರುವ ನಿಯಮಾವಳಿ ಹಾಗೂ ಮಾರ್ಗಸೂಚಿಗಳನ್ನು ಪರಿಗಣನೆಗೆ ತೆಗೆದುಕೊಳ್ಳುವಂತಿಲ್ಲ ಎಂದರು.

Maharashtra: Election commission declared that the Shinde faction is the real Shiv Sena!

ಇದಕ್ಕೆ ಉದ್ಧವ್ ಠಾಕ್ರೆ ಬಣದ ಶಿವಸೇನೆ ನಾಯಕರು ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗದ ಮೇಲೆ ನಮಗೆ ನಂಬಿಕೆ ಇಲ್ಲ ಎಂದು ಉದ್ಧವ್ ಠಾಕ್ರೆ ಅವರ ಶಿವಸೇನೆ ವಕ್ತಾರ ಆನಂದ್ ದುಬೆ ಹೇಳಿದ್ದಾರೆ. ಚುನಾವಣಾ ಚಿಹ್ನೆಗಳ ಹಂಚಿಕೆ ವಿಷಯವು ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ. ಹೀಗಿರುವಾಗ ಚುನಾವಣಾ ಆಯೋಗದ ಅಧಿಕಾರಿಗಳು ಹೇಗೆ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಅವರು ಕೇಳಿದರು. ಚಿಹ್ನೆ ಹಂಚಿಕೆ ಕುರಿತು ಸುಪ್ರೀಂ ಕೋರ್ಟ್ ಇದುವರೆಗೆ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ನೆನಪಿಸಿದರು. ಚುನಾವಣಾ ಆಯೋಗದ ಅಧಿಕಾರಿಗಳು ಬಿಜೆಪಿ ಕಾರ್ಯಕರ್ತರಂತೆ ಕೆಲಸ ಮಾಡುತ್ತಿದ್ದಾರೆ ಎಂಬುದನ್ನು ಈ ಘಟನೆ ಮತ್ತೊಮ್ಮೆ ಸ್ಪಷ್ಟಪಡಿಸಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+