ಮಹಾರಾಷ್ಟ್ರ ಚುನಾವಣೆ: ಕಾಂಗ್ರೆಸ್‌ಗೆ ಮಿತ್ರಪಕ್ಷಗಳಿಂದಲೇ ಸಂಕಷ್ಟ; ಕೂಸು ಹುಟ್ಟುವ ಮುನ್ನವೇ...
ಮಹಾರಾಷ್ಟ್ರ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಕಾಂಗ್ರೆಸ್‌ಗೆ ಮಿತ್ರಪಕ್ಷಗಳಿಂದಲೇ ಹೊಸ ತಲೆನೋವು ಶುರುವಾಗಿದೆ. ಈಗಾಗಲೇ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಕಾಂಗ್ರೆಸ್‌ಗೆ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಹೇಗಾದರೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಸವಾಲು ಇದೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ಕಣದಿನದಿಂದ ದಿನಕ್ಕೆ ರಂಗೇರುತ್ತಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಮಿತ್ರ ಪಕ್ಷಗಳೊಂದಿಗೆ ಚುನಾವಣಾ ಕಣಕ್ಕೆ ಇಳಿಯುತ್ತಿರುವುದು ಗೊತ್ತಿರುವ ವಿಷಯ. ಆದರೆ, ಕೂಸು ಹುಟ್ಟುವ ಮುನ್ನವೇ ಕುಲಾವಿ ಎನ್ನುವಂತೆ ಕಾಂಗ್ರೆಸ್‌ನ ಮಿತ್ರ ಪಕ್ಷಗಳು ವರ್ತಿಸುತ್ತಿವೆ. ಇದು ಕಾಂಗ್ರೆಸ್‌ಗೆ ಬಿಸಿ ತುಪ್ಪವಾಗಿ ಬದಲಾಗಿದೆ. ಕಾಂಗ್ರೆಸ್‌ಗೆ ಮಹಾರಾಷ್ಟ್ರದ ಚುನಾವಣೆ ಅತ್ಯಂತ ಸವಾಲಿನದ್ದಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರ ಪಕ್ಷಗಳನ್ನು ತಕ್ಕಮಟ್ಟಿಗೆ ಕಟ್ಟಿ ಹಾಕುವಲ್ಲಿ ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಯಶಸ್ವಿಯಾಗಿದ್ದವು. ಆದರೆ, ಇದಾದ ಮೇಲೆ ದೇಶದ ವಿವಿಧ ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮುಗ್ಗರಿಸಿದೆ. ಗೆಲ್ಲಬಹುದಾದ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸ್ವಯಂಕೃತ ತಪ್ಪುಗಳಿಂದ ಅಧಿಕಾರ ವಂಚಿತವಾಗಿದೆ. ಅಲ್ಲದೇ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಗೆಲುವು ಸಾಧಿಸಲಾಗದೆ ತಿಣುಕಾಡಿ, ಮಿತ್ರ ಪಕ್ಷಗಳ ಸಹಾಯದೊಂದಿಗೆ ಸಮ್ಮಿಶ್ರ ಸರ್ಕಾರವನ್ನು ರಚಿಸಿರುವ ಬಿಜೆಪಿಗೆ ಜೀವದಾನ ನೀಡಿದಂತಾಗಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆಗಳು ಮುಕ್ತಾಯವಾದ ನಂತರ ಇದೀಗ ದೇಶದ ಪ್ರಮುಖ ರಾಜ್ಯವಾದ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ಇದರಲ್ಲಿ ಮಹಾರಾಷ್ಟ್ರದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ನ ನಡುವೆ ನೇರ ಹಣಾಹಣಿ ಇದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ಇದೆ.
ಚುನಾವಣೆಗೆ ದಿನಗಣನೆ ಪ್ರಾರಂಭವಾಗಿರುವಾಗ ಕಾಂಗ್ರೆಸ್‌ನ ಮಿತ್ರ ಪಕ್ಷ (ಮಹಾ ವಿಕಾಸ ಅಘಾಡಿ) ಶಿವಸೇನಾ (ಉದ್ಧವ್ ಠಾಕ್ರೆ - ಯುಬಿಟಿ) ಕ್ಯಾತೆ ತೆಗೆದಿದೆ ಯುಬಿಟಿಯ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮಹಾವಿಕಾಸ ಅಘಾಡಿಯ ಮುಖ್ಯಮಂತ್ರಿ ಅಭ್ಯರ್ಥಿಯಾರು ಎಂದು ಬಹಿರಂಗಪಡಿಸಬೇಕು ಎಂದು ಪಟ್ಟುಹಿಡಿದಿದ್ದಾರೆ. ಈ ಸಂಬಂಧ ಅವರು ಮಹಾ ವಿಕಾಸ ಅಘಾಡಿಯ ಮಿತ್ರ ಪಕ್ಷಗಳಾಗಿರುವ ಕಾಂಗ್ರೆಸ್ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಶರದ್ ಪವಾರ್ ಬಣ)ವನ್ನು ಒತ್ತಾಯಿಸಿದ್ದಾರೆ.
ಆದರೆ, ಮಹಾರಾಷ್ಟ್ರದ ಮುಖ್ಯಮಂತ್ರಿ ವಿಚಾರದಲ್ಲಿ ಆಡಳಿತರೂಢ ಪಕ್ಷಗಳು ಜಾಣ್ಮೆಯ ಹೆಜ್ಜೆ ಹಾಕಿದೆ. ಚುನಾವಣೆ ಮುಗಿದ ಮೇಲೆ ನಾವು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎನ್ನುವುದು ಮಹಾಯುತಿ ವಾದವಾಗಿದೆ. ಮಹಾಯುತಿಯಲ್ಲಿ ಬಿಜೆಪಿ, ಶಿವಸೇನಾ (ಏಕನಾಥ್ ಶಿಂಧೆ ಬಣ) ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಅಜಿತ್ ಪವಾರ್ ಬಣ)ಇದೆ. ಇವರು ಎಚ್ಚರಿಕೆಯಿಂದ ಹಾಗೂ ಜಾಣ್ಮೆಯಿಂದ ಚುನಾವಣಾ ತಂತ್ರ ರೂಪಿಸುತ್ತಿದ್ದರೆ. ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಈಗಲೇ ಯಡವಿ ಬೀಳುವಂತಹ ಪರಿಸ್ಥಿತಿಗೆ ಹೋಗುತ್ತಿದೆಯೇ ಎನ್ನುವ ಅನುಮಾನ ಮೂಡುವಂತಾಗಿದೆ.
ಬಣಗಳು ಎದುರಿಸುವ ಮೊದಲ ಚುನಾವಣೆ: ಮಹಾರಾಷ್ಟ್ರದಲ್ಲಿ 2019ರ ವಿಧಾನಸಭೆ ಚುನಾವಣೆಯ ನಂತರ ಎರಡು ಪ್ರಮುಖ ಪಕ್ಷಗಳು ವಿಭಜನೆಯಾಗಿವೆ. ಈ ರೀತಿ ವಿಭಜನೆಯಾಗಿ, ಬಣಗಳಾಗಿ ಗುರುತಿಸಿಕೊಂಡಿರುವ ಎರಡೂ ಪಕ್ಷಗಳು ಇದೇ ಮೊದಲ ಬಾರಿ ಚುನಾವಣೆ ಎದುರಿಸುತ್ತಿವೆ. ಮಹಾರಾಷ್ಟ್ರದಲ್ಲಿ ಶಿವಸೇನಾ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷಗಳು ವಿಭಜನೆಯಾಗಿವೆ. ಈ ಎರಡೂ ಪಕ್ಷಗಳು ವಿಭಜನೆಯಾದ ಮೇಲೆ ಒಂದು ಬಣ ಮಹಾ ವಿಕಾಸ ಅಘಾಡಿಯಲ್ಲೂ ಇನ್ನೊಂದು ಬಣವು ಮಹಾಯುತಿಯೊಂದಿಗೆ ಮೈತ್ರಿ ಮಾಡಿಕೊಂಡಿವೆ.
ಮಹಾರಾಷ್ಟ್ರ ಚುನಾವಣೆ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯು ನವೆಂಬರ್ 20ಕ್ಕೆ ಒಂದೇ ಹಂತದಲ್ಲಿ ನಡೆಯಲಿದೆ. ನವೆಂಬರ್ 23ಕ್ಕೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಮಹಾರಾಷ್ಟ್ರದಲ್ಲಿ 288 ವಿಧಾನಸಭಾ ಕ್ಷೇತ್ರಗಳಿದ್ದು, ಮ್ಯಾಜಿಕ್ ಸಂಖ್ಯೆ 145 ಆಗಿದೆ.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications