ಮಹಾರಾಷ್ಟ್ರ ಚುನಾವಣೆ: ಕಾಂಗ್ರೆಸ್‌ಗೆ ಹೊಸ ಹೆಸರು ಕೊಟ್ಟ ಮೋದಿ!

ಮಹಾರಾಷ್ಟ್ರ ಚುನಾವಣೆಗೆ ಸರಿಯಾಗಿ ಇನ್ನು 12 ದಿನಗಳು ಮಾತ್ರ ಬಾಕಿ ಉಳಿದಿವೆ. ಈ ಸಂದರ್ಭದಲ್ಲಿ ಮಹಾರಾಷ್ಟ್ರದ ಕಾಂಗ್ರೆಸ್‌ ಹಾಗೂ ಮೈತ್ರಿ ಪಕ್ಷಗಳ ನಿದ್ದೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕೆಡಿಸಿದ್ದಾರೆ. ಹೌದು ಮಹಾರಾಷ್ಟ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದು, ಇದೀಗ ಕಾಂಗ್ರೆಸ್‌ ಹಾಗೂ ವಿರೋಧ ಪಕ್ಷಗಳಿಗೆ ಹೊಸ ಹೆಸರು ಕೊಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ನವೆಂಬರ್‌ 20ಕ್ಕೆ ವಿಧಾನಸಭೆ ಚುನಾವಣೆ ನಡೆಯಲಿದೆ. ಹೀಗಾಗಿ, ಚುನಾವಣೆ ಕಣ ರಂಗೇರಿದೆ.

ಮಹಾರಾಷ್ಟ್ರ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದಲ್ಲಿ ಸರಣಿ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದಾರೆ. ಈಗ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿ ಇದೆ. ಬಿಜೆಪಿ, ಶಿವಸೇನಾ (ಏಕನಾಥ್‌ ಶಿಂಧೆ ಬಣ) ಹಾಗೂ ನ್ಯಾಶನಲಿಸ್ಟ್‌ ಕಾಂಗ್ರೆಸ್‌ ಪಾರ್ಟಿ (ಅಜಿತ್‌ ಪವಾರ್‌ ಬಣ) ಅಧಿಕಾರದಲ್ಲಿ ಇವೆ. ಈಗಾಗಲೇ ಈ ಸಮ್ಮಿಶ್ರ ಸರ್ಕಾರವು ಮಹಾರಾಷ್ಟ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ಮುಂದೆ ಅಧಿಕಾರಕ್ಕೆ ಬಂದರೆ, ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

Maharashtra election Modi gave new name to Congress

ಮಹಾರಾಷ್ಟ್ರದಲ್ಲೂ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್‌ 370ರ ಮರು ಜಾರಿಯ ಬಗ್ಗೆ ಮಾತನಾಡಿರುವುದಕ್ಕೆ ಹಾಗೂ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಈ ವಿಷಯ ಚರ್ಚೆ ಮಾಡಿರುವುದಕ್ಕೆ ಕಿಡಿಕಾರಿದ್ದಾರೆ. ಕಾಂಗ್ರೆಸ್‌ ಹಾಗೂ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಈ ವಿಚಾರದಲ್ಲಿ ಸಂಚು ರೂಪಿಸುತ್ತಿವೆ ಎಂದು ಮೋದಿ ಅವರು ದೂರಿದ್ದಾರೆ.

ಕಾಂಗ್ರೆಸ್‌ ಜೂಟ್ ಕಿ ದುಖಾನ್!

ಕಾಂಗ್ರೆಸ್‌ ಪಕ್ಷ ಹಾಗೂ ಅದರ ಮಿತ್ರಪಕ್ಷಗಳು ಜೂಟ್ ಕಿ ದುಖಾನ್ (ಸುಳ್ಳಿನ ಅಂಗಡಿ) ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮುಂದುವರಿದು ಕಾಂಗ್ರೆಸ್‌ ಸರ್ಕಾರ ಪರಿಚಯಿಸುವ ಯೋಜನೆಗಳು ಅದರಲ್ಲಿ ಗರಿಷ್ಠ ಪ್ರಮಾಣದ ಭ್ರಷ್ಟಾಚಾರ ಮಾಡುವುದಕ್ಕೆ ಅವಕಾಶ ಕಲ್ಪಿಸುತ್ತವೆ. ಮೂಲ ಶಿವಸೇನಾ ಪಕ್ಷದ ಬಗ್ಗೆ ಹಾಡಿ ಹೊಗಳಿದ ಮೋದಿ ಅವರು, ಬಾಳಾಸಾಹೇಬ್ ಠಾಕ್ರೆ ಅವರ ಬಗ್ಗೆಯೂ ಪ್ರಸ್ತಾಪಿಸಿದರು. ಆದರೆ, ಇದೀಗ ಉದ್ಧವ್‌ ಠಾಕ್ರೆ ಅವರು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವುದಕ್ಕೆ ಹಾಗೂ ಸಿದ್ಧಾಂತ ಭಿನ್ನಾಭಿಪ್ರಾಯದ ಬಗ್ಗೆ ಟೀಕೆ ಮಾಡಿದರು.

ಜಿದ್ದಾಜಿದ್ದಿನ ಕಣ: ಮಹಾರಾಷ್ಟ್ರದಲ್ಲಿ ಈ ಬಾರಿ ಜಿದ್ದಾಜಿದ್ದಿನ ಕಣ ಇದೆ. ಇದೇ 20ಕ್ಕೆ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಒಂದೇ ಹಂತದಲ್ಲಿ ನಡೆಯುತ್ತಿದೆ. ಇಲ್ಲಿನ 288 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ರಾಜ್ಯದ ಮ್ಯಾಜಿಕ್‌ ಸಂಖ್ಯೆ ಅಂದರೆ ಬಹುಮತ 145 ಆಗಿದೆ. ಕಾಂಗ್ರೆಸ್‌ ಹಾಗೂ ಬಿಜೆಪಿ ಪ್ರತ್ಯೇಕವಾಗಿ ಮೈತ್ರಿ ಪಕ್ಷಗಳೊಂದಿಗೆ ಚುನಾವಣೆಗೆ ಇಳಿದಿವೆ. ಈ ಬಾರಿ ಹಲವು ಕಾರಣಕ್ಕೆ ಮಹಾರಾಷ್ಟ್ರ ಚುನಾವಣೆ ಮಹತ್ವದ್ದಾಗಿದೆ. ಎರಡು ಪ್ರಮುಖ ಪಕ್ಷಗಳು ವಿಭಜನೆಯ ನಂತರ ಮೊದಲ ಬಾರಿ ಚುನಾವಣೆ ಎದುರಿಸುತ್ತಿವೆ. ಹೀಗಾಗಿ, ಮತದಾರರು ಯಾರಿಗೆ ಬೆಂಬಲ ಕೊಡಲಿದ್ದಾರೆ ಎನ್ನುವ ಕುತೂಹಲ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+