Maharashtra election: ಮಹಾರಾಷ್ಟ್ರದ ಇತಿಹಾಸದಲ್ಲೇ ದಾಖಲೆಯ ಹಣ ವಶಕ್ಕೆ, ಎಷ್ಟು ಕೋಟಿ ನೋಡಿ!
ಜಾರ್ಖಂಡ್‌ನಲ್ಲಿ ಇಂದು ಮೊದಲ ಹಂತದ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇನ್ನೊಂದು ವಾರದಲ್ಲಿ ಅಂದರೆ ನವೆಂಬರ್ 20ಕ್ಕೆ ಮಹಾರಾಷ್ಟ್ರದ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ನಡುವೆ ಅಂದರೆ ಮಹಾರಾಷ್ಟ್ರದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಾದ ಮೇಲೆ ಬರೋಬ್ಬರಿ ಕೋಟಿ ಕೋಟಿ ರೂಪಾಯಿಯನ್ನು ವಶಪಡಿಸಿಕೊಳ್ಳಲಾಗಿದೆ. ಮಹಾರಾಷ್ಟ್ರ ದೇಶದ ಅತ್ಯಂತ ಶ್ರೀಮಂತ ರಾಜ್ಯಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಇದೆ. ಇಲ್ಲಿ ಅಧಿಕಾರದ ಗದ್ದುಗೆ ಹಿಡಿಯುವುದು ಎಲ್ಲಾ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ. ಚುನಾವಣೆಗೆ ಇನ್ನೊಂದು ವಾರ ಬಾಕಿ ಉಳಿದಿರುವಾಗಲೇ ಈ ರಾಜ್ಯದಿಂದ ಅಚ್ಚರಿಯ ಮಾಹಿತಿಯೊಂದು ಬಂದಿದೆ.
ಮಹಾರಾಷ್ಟ್ರದಲ್ಲಿ ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಡುವೆ ನೇರ ಹಣಾಹಣಿ ಇದೆಯಾದರೂ, ಇಲ್ಲಿ ಸಣ್ಣ ಹಾಗೂ ಪ್ರಾದೇಶಿಕ ಪಕ್ಷಗಳೇ ಈ ಬಾರಿ ಅತ್ಯಂತ ನಿರ್ಣಾಯಕ ಪಾತ್ರವನ್ನು ವಹಿಸಿವೆ. ಇನ್ನು ಮಹಾರಾಷ್ಟ್ರದಲ್ಲಿ ನೀತಿ ಸಂಹಿತೆ ಜಾರಿಯಾದ ಮೇಲೆ ಹಣದ ಹೊಳೆಯೇ ಹರಿದಿದೆ.

ಮಹಾರಾಷ್ಟ್ರ ಚುನಾವಣೆಯಲ್ಲಿ ಭಾರೀ ಹಾಗೂ ಅಕ್ರಮ ಹಣ ವಹಿವಾಟು ನಡೆಯಲಿದೆ ಎನ್ನುವ ಮುನ್ಸೂಚನೆಯ ಮೇಲೆಯೇ ಈ ರಾಜ್ಯದಲ್ಲಿ ಭಾರತೀಯ ಚುನಾವಣ ಆಯೋಗವು ಹದ್ದಿನ ಕಣ್ಣು ಇರಿಸಿತ್ತು.
ಮಹಾರಾಷ್ಟ್ರದಲ್ಲಿ ಮತದಾರರನ್ನು ಸೆಳೆಯುಲು ಭಾರೀ ಆಮಿಷವೊಡ್ಡಲಾಗುತ್ತಿದೆ. ಇದೇ ಕಾರಣಕ್ಕೆ ಬರೋಬ್ಬರಿ 6,000 ಸಾವಿರ ಸ್ಕ್ವಾಡ್‌ಗಳನ್ನು ವಾಹನಗಳ ತಪಾಸಣೆ ಹಾಗೂ ಅನುಮಾನಾಸ್ಪದ ವಸ್ತುಗಳನ್ನು ವಶಪಡಿಸಿಕೊಳ್ಳುವ ಉದ್ದೇಶದಿಂದ ನೇಮಿಸಲಾಗಿತ್ತು. ಇನ್ನು ಮಹಾರಾಷ್ಟ್ರದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಾದ ಮೇಲೆ ಇಲ್ಲಿಯ ವರೆಗೆ ಬರೋಬ್ಬರಿ 500 ಕೋಟಿ ರೂಪಾಯಿ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.
ಇದು ಮಹಾರಾಷ್ಟ್ರದ ಇತಿಹಾಸದಲ್ಲೇ ದಾಖಲೆಯ ಮೊತ್ತ ಎಂದು ಹೇಳಲಾಗಿದೆ. ಈ ಹಿಂದೆಯೂ ಮಹಾರಾಷ್ಟ್ರ ಚುನಾವಣೆಯಲ್ಲಿ ಹಣದ ಹೊಳೆ ಹರಿದಿರುವ ಉದಾಹರಣೆಗಳು ಇವೆ. ಆದರೆ, ಈ ಬಾರಿ ಇಷ್ಟೊಂದು ದೊಡ್ಡ ಮಟ್ಟದ ಅಕ್ರಮ ವಹಿವಾಟು (ಮತದಾರರಿಗೆ ಆಮಿಷ) ನಡೆದಿದೆ.
ಈ ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಾದ ಮೇಲೆ ಮತದಾರರ ಮೇಲೆ ಪ್ರಭಾವ ಬೀರುವ ಯಾವುದೇ ನಿರ್ಣಯಗಳನ್ನು ಮಾಡಬಾರದು ಹಾಗೂ ಯಾವುದೇ ಆಮಿಷವೊಡ್ಡ ಬಾರದು ಎನ್ನುವುದು ಸೇರಿದಂತೆ ಹಲವು ಷರತ್ತುಗಳನ್ನು ಈಗಾಗಲೇ ವಿಧಿಸಲಾಗಿದೆ. ಇದರ ಹೊರತಾಗಿಯೂ ಅಕ್ರಮ ಹಣಕ್ಕೆ ಕಡಿವಾಣ ಹಾಕುವುದಕ್ಕೆ ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.
ಇನ್ನು ಇಲ್ಲಿ ಪೊಲೀಸ್, ಕಂದಾಯ ಇಲಾಖೆ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಪಾಸಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹಣ, ಮದ್ಯ, ಬೆಲೆ ಬಾಳುವ ಚಿನ್ನ, ಬೆಳ್ಳಿ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಉಡುಗೊರೆಗಳು ಸಹ ಸೇರಿವೆ. ಸಿ -ವಿಜಿಲ್ ಅಪ್ಲಿಕೇಶನ್ ಅನ್ನು ಸಹ ಹೆಚ್ಚು ಪರಿಣಾಮಕಾರಿಯಾಗಿ ಇಲ್ಲಿ ಬಳಸಲಾಗುತ್ತಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದೇ 20ಕ್ಕೆ ಚುನಾವಣೆ: ಮಹಾರಾಷ್ಟ್ರದಲ್ಲಿ ಚುನಾವಣೆ ನಡೆಯುವುದಕ್ಕೆ ಇನ್ನು ಒಂದು ವಾರಗಳು ಮಾತ್ರ ಬಾಕಿ ಉಳಿದಿದೆ. ಮಹಾರಾಷ್ಟ್ರದಲ್ಲಿ ಇದೇ 20ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಇಲ್ಲಿನ 288 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಬಹುಮತ ಸಂಖ್ಯೆ 145 ಆಗಿದೆ.












Click it and Unblock the Notifications