ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣವಾದ 6 ಅಂಶಗಳೇನು, ನೋಡಿ!
ಮಹಾರಾಷ್ಟ್ರದಲ್ಲಿ ಮತದಾನೋತ್ತರ (ಎಕ್ಸಿಟ್ ಪೋಲ್‌ಗಳ) ಭವಿಷ್ಯವನ್ನೂ ಮೀರಿ ಮಹಾಯುತಿ (ಎನ್‌ಡಿಎ - ಬಿಜೆಪಿ ಮೈತ್ರಿಕೂಟ) ಅಮೋಘ ಗೆಲುವು ಸಾಧಿಸಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ಬಿಜೆಪಿ ನಾಯಕರು ಕಣ್ಣಿಟ್ಟಿದ್ದರು. ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ಮುಂಚೆಯೇ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಪೂರ್ಣ ತಂತ್ರಗಳನ್ನು ಅಳವಡಿಸಿಕೊಂಡಿತ್ತು. ಮಹಾರಾಷ್ಟ್ರದಲ್ಲಿ ಕಳೆದ ಬಾರಿ ಬಿಜೆಪಿ ಎಡವಿತ್ತು. ಆ ಸೋಲಿನ ನಂತರ ಎಚ್ಚೆತ್ತುಕೊಂಡ ಬಿಜೆಪಿಯು ಸಂಪೂರ್ಣವಾಗಿ ತನ್ನ ಕಾರ್ಯ ತಂತ್ರವನ್ನೇ ಬದಲಾಯಿಸಿತ್ತು. ಇದು ಸೇರಿದಂತೆ ಹಲವು ಕಾರಣಕ್ಕೆ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಗೆಲುವು ಕಂಡಿದೆ. ಅದೇನು ಎನ್ನುವ ವಿವರ ಇಲ್ಲಿದೆ.
ಮಹಾರಾಷ್ಟ್ರದಲ್ಲಿ ಈಗ ಮಹಾಯುತಿ ಅಂದರೆ ಬಿಜೆಪಿ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಅಜಿತ್ ಪವಾರ್) ಹಾಗೂ ಶಿವಸೇನಾ (ಏಕನಾಥ್ ಶಿಂಧೆ) ಅಧಿಕಾರದಲ್ಲಿ ಇದೆ. ಈ ಪಕ್ಷಗಳು ಮಹಾರಾಷ್ಟ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿವೆ. ಈ ಪಕ್ಷಗಳ ನಡುವೆ ಸಣ್ಣಪುಟ್ಟ ಗೊಂದಲಗಳು ಇದ್ದವು. ಆದರೆ, ಈ ಪಕ್ಷಗಳು ಭರ್ಜರಿ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿವೆ.

ಮಹಾರಾಷ್ಟ್ರದಲ್ಲಿ ಮಹಾಯುತಿ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದ್ದಕ್ಕೆ 6 ಪ್ರಮುಖ ಕಾರಣಗಳು ಇಲ್ಲಿವೆ.
ಒಬಿಸಿ ಮತ ಸೆಳೆದಿದ್ದ ಬಿಜೆಪಿ: ಬಿಜೆಪಿ ಮಹಾರಾಷ್ಟ್ರದಲ್ಲಿ ವಿವಿಧ ಗೊಂದಲಗಳು ಹಾಗೂ ಅಲ್ಪ ಪ್ರಮಾಣದ ಆಡಳಿತ ವಿರೋಧ ಅಲೆ ಇದ್ದರೂ, ಅವುಗಳನ್ನು ಸರಿಪಡಿಸುವಲ್ಲಿ ಯಶಸ್ವಿಯಾಗಿತ್ತು. ಒಬಿಸಿ ಮತಗಳನ್ನು ಮೈಕ್ರೋ ಹಂತದಿಂದ ಸೆಳೆಯುವಲ್ಲಿ ಬಿಜೆಪಿ ಪ್ಲಾನ್ ಮಾಡಿಕೊಂಡಿತ್ತು. ಸಣ್ಣ ಸಣ್ಣ ತಂಡಗಳನ್ನು ಮಾಡಿ ರಾಷ್ಟ್ರೀಯತೆ ಹಾಗೂ ಬಿಜೆಪಿ ಆಡಳಿತದ ಬಗ್ಗೆ ಪರೋಕ್ಷವಾಗಿ ಮತದಾರರ ಮನವೊಲಿಸುವಲ್ಲಿ ಬಿಜೆಪಿ (ಮಹಾಯುತಿ) ಯಶಸ್ವಿಯಾಗಿತ್ತು. ಹೀಗಾಗಿ, ಮತ ವಿಭಜನೆಯಾಗುವುದು ತಪ್ಪಿದೆ.
ಒಂದಾಗಿದ್ದರಷ್ಟೇ ರಕ್ಷಣೆ ಘೋಷಾವಾಕ್ಯ: ವಿರೋಧ ಪಕ್ಷಗಳು (ಮಹಾ ವಿಕಾಸ್ ಅಘಾಡಿ) ನಮ್ಮನ್ನು ಹಿಂದೂಗಳನ್ನು ಹಾಗೂ ಜಾತಿ ವಿಭಜನೆಯನ್ನು ಮಾಡುತ್ತಿವೆ. ಒಂದಾಗಿದ್ದರೆ ಮಾತ್ರ ನಾವು ರಕ್ಷಣೆ ಪಡೆಯಲು ಸಾಧ್ಯ ಎನ್ನುವ ಸಂದೇಶವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದರು. ಅಲ್ಲದೇ ಏಕ್ ಹೈ ತೋ ಸೇಫ್ ಹೈ ಎನ್ನುವ ಘೋಷಣೆಯನ್ನೇ ಬಿಜೆಪಿ ಮುಂದಿಟ್ಟುಕೊಂಡಿತ್ತು. ಮಹಾರಾಷ್ಟ್ರದಲ್ಲಿ ಗೆಲುವು ಸಾಧಿಸುವಲ್ಲಿ ಈ ಅಂಶ ಬಹಳಷ್ಟು ಪ್ರಭಾವ ಬೀರಿದೆ.

ಲಡ್ಕಿ ಬಹಿನ್ (Ladli Behna Scheme) ಯೋಜನೆ: ಇನ್ನು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಅತ್ಯಂತ ಹೆಚ್ಚು ಪ್ರಭಾವ ಬೀರಿರುವುದು ಲಡ್ಕಿ ಬಹಿನ್ ಯೋಜನೆ ಅಂತಲೇ ಹೇಳಲಾಗುತ್ತಿದೆ. ಮಹಾಯುತಿ ಸರ್ಕಾರವು ಮಹಾರಾಷ್ಟ್ರದಲ್ಲಿ ಮಹಿಳೆಯರ ಸಬಲೀಕರಣದ ಉದ್ದೇಶದಿಂದ ಈ ಯೋಜನೆಯನ್ನು ಪರಿಚಯಿಸಿತ್ತು. 21 ವರ್ಷದಿಂದ 65 ವರ್ಷ ವಯಸ್ಸಿನ ಮಹಿಳೆಯರನ್ನು ಗುರಿಯಾಗಿಸಿಕೊಂಡು ಈ ಯೋಜನೆಯನ್ನು ಪರಿಚಯಿಸಲಾಗಿತ್ತು. ಈ ಯೋಜನೆಯ ಮೂಲಕ ಪ್ರತಿ ತಿಂಗಳು 1,500 ರೂಪಾಯಿ ನೀಡಲಾಗುತ್ತಿದ್ದು, ಮುಂದೆ ಅಧಿಕಾರಕ್ಕೆ ಬಂದರೆ 2,100 ರೂಪಾಯಿ ಕೊಡುವುದಾಗಿ ಚುನಾವಣೆಯಲ್ಲಿ ಭರವಸೆ ನೀಡಲಾಗಿತ್ತು. ಈ ಯೋಜನೆಯನ್ನು ಅತ್ಯಂತ ಯಶಸ್ವಿಯಾಗಿ ಜಾರಿ ಮಾಡಲಾಗಿದೆ.
ಮೇಜರ್ ಸರ್ಜರಿ ಮಾಡದ ಬಿಜೆಪಿ: ಮಹಾರಾಷ್ಟ್ರದಲ್ಲಿ ಈ ಹಿಂದೆ ಕರ್ನಾಟಕದಲ್ಲಿ ಮಾಡಿದ್ದ ಪ್ರಯೋಗಗಳನ್ನು ಬಿಜೆಪಿ ಮಾಡಿರಲಿಲ್ಲ. ಮಹಾರಾಷ್ಟ್ರದಲ್ಲಿ ಹಳೆಯ ಶಾಸಕರಿಗೆ ಟಿಕೆಟ್ ನೀಡಲಾಗಿತ್ತು. ಅಲ್ಲದೇ ದೇವೇಂದ್ರ ಫಡ್ನವಿಸ್ ಅವರಿಗೆ ಮತ್ತೆ ಮುಂದಾಳತ್ವ ನೀಡಿತ್ತು. ಇತ್ತೀಚಿನ ದಿನಗಳಲ್ಲಿ ಅಂದರೆ ಲೋಕಸಭೆ ಚುನಾವಣೆಯಲ್ಲಿ ದೇವೇಂದ್ರ ಫಡ್ನವಿಸ್ ಅವರ ನೇತೃತ್ವದಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಬಂದಿಲ್ಲ ಎಂದು ಹೇಳಲಾಗಿತ್ತು. ಆದರೂ ಬಿಜೆಪಿ ಕೊನೆ ಕ್ಷಣದಲ್ಲಿ ಗೊಂದಲ ಸೃಷ್ಟಿ ಮಾಡದೆ ಎಚ್ಚರಿಕೆಯ ಹೆಜ್ಜೆ ಇರಿಸಿತ್ತು.
ಆರ್‌ಎಸ್‌ಎಸ್ ಭದ್ರಕೋಟೆ: ಮಹಾರಾಷ್ಟ್ರವು ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂ ಸೇವಕರ ಸಂಘ)ನ ಭದ್ರಕೋಟೆಯಾಗಿದ್ದು, ಈ ಚುನಾವಣೆಯಲ್ಲಿ ಆರ್‌ಎಸ್‌ಎಸ್ ಭಾರೀ ಪ್ರಭಾವ ಬೀರಿದೆ. ಆರ್‌ಎಸ್‌ಎಸ್‌ನ ಸಂಘಟಕರು ಹಾಗೂ ಸದಸ್ಯರು ಮಹಾರಾಷ್ಟ್ರದಲ್ಲಿ ಬಿಜೆಪಿ (ಮಹಾಯುತಿ) ಸರ್ಕಾರದ ಸಾಧನೆಗಳನ್ನು ಜನರಿಗೆ ಪರಿಚಯಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
ಒಗ್ಗಟ್ಟಾಗಿದ್ದ ಪಕ್ಷಗಳು: ಮಹಾರಾಷ್ಟ್ರದಲ್ಲಿ ಮಹಾಯುತಿ ಸಮ್ಮಿಶ್ರ ಸರ್ಕಾರವಿದ್ದು, ಈ ಪಕ್ಷಗಳ ನಾಯಕರ ನಡುವೆ ಚುನಾವಣೆಯಲ್ಲಿ ಸಣ್ಣಪುಟ್ಟ ಗೊಂದಲಗಳು ಸೃಷ್ಟಿಯಾಗಿದ್ದವು. ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಹಾಗೂ ಅಜಿತ್ ಪವಾರ್ ನಡುವೆ ವಾಕ್ಸಮರ ನಡೆದಿತ್ತು. ಆದರೆ, ಈ ಗೊಂದಲಗಳನ್ನು ಬಗೆಹರಿಸಿಕೊಳ್ಳುವಲ್ಲಿ ಮೂರು ಪಕ್ಷಗಳ ನಾಯಕರು ಮುಕ್ತವಾಗಿದ್ದರು. ಹೀಗಾಗಿ, ಮಹಾರಾಷ್ಟ್ರದಲ್ಲಿ ಮಹಾಯುತಿ ದೊಡ್ಡ ಮಟ್ಟದಲ್ಲಿ ಗೆಲ್ಲಲು ಸಹಕಾರಿಯಾಗಿದೆ.
ಮುಖ್ಯಮಂತ್ರಿ ಯಾರು: ಕಾಂಗ್ರೆಸ್‌ನ ಮಹಾ ವಿಕಾಸ್ ಅಘಾಡಿಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ವಿಷಯ ಭಾರೀ ಚರ್ಚೆಯಾಗುತ್ತಿತ್ತು. ಶಿವಸೇನೆಯ ಉದ್ಧವ್ ಠಾಕ್ರೆ ಅವರು ಈ ವಿಷಯವನ್ನು ಪದೇ ಪದೆ ಹೇಳುತ್ತಿದ್ದರು. ಇದು ಗೊಂದಲಕ್ಕೆ ಹಾಗೂ ಮಹಾವಿಕಾಸ್ ಅಘಾಡಿಯಲ್ಲಿ ಹೊಂದಾಣಿಕೆ ಇಲ್ಲ ಎನ್ನುವ ಸಂದೇಶವನ್ನು ಕೊಟ್ಟಿತ್ತು. ಆದರೆ, ಮಹಾಯುತಿಯಲ್ಲಿ ಈ ರೀತಿಯ ಯಾವುದೇ ಗೊಂದಲ ಇರಲಿಲ್ಲ. ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರನ್ನು ಮುಂದಿನ ಮುಖ್ಯಮಂತ್ರಿ ಯಾರು ಎಂದು ಪತ್ರಕರ್ತರು ಕೇಳಿದಾಗಲೂ, ದೇವೇಂದ್ರ ಫಡ್ನವಿಸ್ ಅವರು ಏಕನಾಥ್ ಶಿಂಧೆಯನ್ನೇ ತೋರಿಸುತ್ತಿದ್ದರು.
ಮಹಾರಾಷ್ಟ್ರದಲ್ಲಿ ಬಿಜೆಪಿ ಹೊಸ ದಾಖಲೆಯನ್ನೇ ಸೃಷ್ಟಿ ಮಾಡಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications