Maharashtra Assembly Elections 2024: ಮಹಾರಾಷ್ಟ್ರ ಚುನಾವಣೆ, ಅಮಿತ್ ಶಾ ಮಹತ್ವದ ಕರೆ!
ಮುಂಬೈ, ಸೆಪ್ಟೆಂಬರ್ 25: ಮಹಾರಾಷ್ಟ್ರ ರಾಜ್ಯದ ವಿಧಾನಸಭೆ ಚುನಾವಣೆ ದಿನಾಂಕದ ಕುರಿತು ಕುತೂಹಲ ಮೂಡಿದೆ. 288 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂಬುದು ಸದ್ಯದ ಸುದ್ದಿ. ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ಸೆಪ್ಟೆಂಬರ್ 27, 28ರಂದು ಮುಂಬೈಗೆ ಭೇಟಿ ನೀಡಲಿದ್ದು, ಚುನಾವಣಾ ತಯಾರಿ ಕುರಿತು ಸಭೆಗಳನ್ನು ನಡೆಸಲಿದ್ದಾರೆ. ಅಕ್ಟೋಬರ್‌ನಲ್ಲಿ ವೇಳಾಪಟ್ಟಿ ಘೋಷಣೆಯಾಗುವ ನಿರೀಕ್ಷೆ ಇದೆ.
ಕೇಂದ್ರ ಗೃಹ ಸಚಿವ, ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಮಹಾರಾಷ್ಟ್ರ ಚುನಾವಣೆ ಕುರಿತು ಪಕ್ಷದ ಕಾರ್ಯಕರ್ತರಿಗೆ ಮಹತ್ವದ ಕರೆಯೊಂದನ್ನು ನೀಡಿದ್ದಾರೆ. "ಮುಂಬರುವ ಚುನಾವಣೆಯಲ್ಲಿ ಪ್ರತಿ ಬೂತ್‌ನಲ್ಲಿ ಶೇ 10ರಷ್ಟು ಹೆಚ್ಚು ಮತದಾನವಾಗುವಂತೆ ಕಾರ್ಯಕರ್ತರು ನೋಡಿಕೊಳ್ಳಬೇಕು" ಎಂದು ಹೇಳಿದ್ದಾರೆ.

ನಾಗ್ಪುರದಲ್ಲಿ ಅಮಿತ್ ಶಾ ಮಹಾರಾಷ್ಟ್ರ ರಾಜ್ಯದ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯುತಿ' ಮೈತ್ರಿಕೂಟ ಪಕ್ಷಗಳ ಸಭೆಯನ್ನು ನಡೆಸಿದರು. ಮಹಾರಾಷ್ಟ್ರ ರಾಜ್ಯದ ಚುನಾವಣೆ ತಯಾರಿ ಕುರಿತು ಪರಿಶೀಲಿಸಲು ಅಮಿತ್ ಶಾ ಎರಡು ದಿನಗಳ ರಾಜ್ಯ ಪ್ರವಾಸದಲ್ಲಿದ್ದಾರೆ.
ಅಮಿತ್ ಶಾ ಮಹತ್ವದ ಸಭೆ: ಅಮಿತ್ ಶಾ ವಿದರ್ಭ ಪ್ರಾಂತ್ಯದ 62 ವಿಧಾನಸಭಾ ಕ್ಷೇತ್ರಗಳ ಪ್ರಮುಖ ನಾಯಕರ ಜೊತೆ ಮಹತ್ವದ ಸಭೆಯನ್ನು ನಡೆಸಿದರು. ಚುನಾವಣೆಯ ವೇಳೆ ರಾಮ ಮಂದಿರ ನಿರ್ಮಾಣ, ಸಂವಿಧಾನದ 370ನೇ ವಿಧಿ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಕಲ್ಪಿಸಿದ್ದ ವಿಶೇಷ ಸ್ಥಾನಮಾನ ರದ್ದು, ತ್ರಿಬಲ್ ತಲಾಖ್ ರದ್ದು ಕುರಿತು ಮತದಾರರಿಗೆ ಅರಿವು ಮೂಡಿಸಿ, ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಬೇಕು ಎಂದು ಹೇಳಿದರು.
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ವಿದರ್ಭ ಪ್ರಾಂತ್ಯದ ಪಾತ್ರ ಬಹಳ ಮುಖ್ಯವಾಗಿದೆ ಎಂದು ಅಮಿತ್ ಶಾ ಕರೆ ನೀಡಿದ್ದಾರೆ. ವಿದರ್ಭ ಪ್ರಾಂತ್ಯದ ಮೂಲಕವೇ ಪಕ್ಷದ ಗೆಲುವಿನ ಅಭಿಯಾನ ಆರಂಭವಾಗಬೇಕಿದೆ. ಇದಕ್ಕಾಗಿ ಹೇಗೆ ಕಾರ್ಯ ನಿರ್ವಹಣೆ ಮಾಡಬೇಕು? ಎಂದು ಅಮಿತ್ ಶಾ ನಾಯಕರಿಗೆ ಸೂಚನೆಗಳನ್ನು ನೀಡಿದ್ದಾರೆ.
ರಾಜ್ಯದ 288 ವಿಧಾನಸಭಾ ಕ್ಷೇತ್ರಗಳ ಪೈಕಿ ವಿದರ್ಭ ಪ್ರಾಂತ್ಯದಲ್ಲಿಯೇ 62 ಸೀಟುಗಳಿವೆ. ಈ ಕ್ಷೇತ್ರದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳನ್ನು ಮತದಾರರಿಗೆ ತಲುಪಿಸಬೇಕು. ಲೋಕಸಭೆ ಚುನಾವಣೆಯಲ್ಲಿ ಆದಂತೆ ರಾಜ್ಯದಲ್ಲಿ ಪಕ್ಷಕ್ಕೆ ಹಿನ್ನಡೆ ಆಗಬಾರದು ಎಂದು ಅಮಿತ್ ಶಾ ಹೇಳಿದ್ದಾರೆ.
ಮೈತ್ರಿಕೂಟದ ಪಕ್ಷಗಳಿಂದ ಯಾರೇ ಸಹ ಅಭ್ಯರ್ಥಿಯಾದರೂ ಎಲ್ಲಾ ಕಾರ್ಯಕರ್ತರು ಅದೇ ಉತ್ಸಾಹದಿಂದ ಕೆಲಸ ಮಾಡಬೇಕು. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂಬ ಸ್ಪಷ್ಟ ಸಂದೇಶವನ್ನು ವಿರೋಧಿಗಳಿಗೆ ತಲುಪಿಸಬೇಕು ಎಂದು ಕರೆ ನೀಡಲಾಗಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ವಿದರ್ಭ ಪ್ರಾಂತ್ಯದ 44 ಸೀಟುಗಳ ಪೈಕಿ ಬಿಜೆಪಿ 29 ಸೀಟುಗಳನ್ನು ಗೆದ್ದಿತ್ತು. ಆದರೆ 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಗೆದ್ದಿರುವುದು ಕೇವಲ 2 ಸೀಟು. ಆದ್ದರಿಂದ ಅಮಿತ್ ಶಾ ಪ್ರಾಂತ್ಯದ ಬಿಜೆಪಿ ನಾಯಕರ ಜೊತೆ ವಿಧಾನಸಭೆ ಚುನಾವಣೆ ಕುರಿತು ಸಭೆಯನ್ನು ನಡೆಸುತ್ತಿದ್ದಾರೆ. ಆದರೆ ಈ ಸಭೆಗೆ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಪ್ರಮುಖ ನಾಯಕರು ನಿಗದಿತ ಕಾರ್ಯಕ್ರಮಗಳ ಕಾರಣ ಗೈರಾಗಿದ್ದರು.
ಚುನಾವಣೆ ಹತ್ತಿರವಾಗುತ್ತಿದೆ. ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕು. 'ಮಹಾಯುತಿ' ಮೈತ್ರಿಕೂಟದ ಭಾಗವಾಗಿಯೇ ಬಿಜೆಪಿ ಚುನಾವಣೆ ಎದುರಿಸುತ್ತಿದೆ. ಪ್ರತಿ ಕಾರ್ಯಕರ್ತರು ಸಹ ಯಾವ ಪಕ್ಷದ ಅಭ್ಯರ್ಥಿ ನಿಂತರೂ ಅವರ ಪರವಾಗಿ ಕೆಲಸ ಮಾಡಬೇಕು ಎಂದು ಅಮಿತ್ ಶಾ ಸೂಚನೆ ನೀಡಿದರು.
-
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
ಕೆಲವೇ ಗಂಟೆಗಳಲ್ಲಿ ಇರಾನ್ ಬಂದರುಗಳಿಗೆ ಅಮೆರಿಕದಿಂದ ಕಡಲ ದಿಗ್ಬಂಧನ? ಯುದ್ಧದ ಭೀತಿಯಲ್ಲಿ ಕೊಲ್ಲಿ ರಾಷ್ಟ್ರಗಳು -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ












Click it and Unblock the Notifications