Maharashtra Election 2024 ಮಹಾರಾಷ್ಟ್ರ ಚುನಾವಣೆ: ಶಿವಾಜಿಯ ಈ ವಿಷಯದ ಬಗ್ಗೆಯೇ ಹೆಚ್ಚು ಚರ್ಚೆ
ಮಹಾರಾಷ್ಟ್ರ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದೆ. ಮಹಾರಾಷ್ಟ್ರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರಿಗೆ ವಿಶೇಷ ಸ್ಥಾನವಿದೆ. ರಾಜಕೀಯ, ಸಾಮಾಜಿಕ ವಿಷಯಗಳೊಂದಿಗೆ ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಚರ್ಚೆಯಾಗುವುದು ಇದೆ. ಈ ಬಾರಿಯೂ ಛತ್ರಪತಿ ಶಿವಾಜಿ ಮಹಾರಾಜ ವಿಷಯ ಪ್ರಧಾನವಾಗಿ ಚರ್ಚೆಯಾಗುತ್ತಿದೆ. ಆದರೆ, ಈ ಬಾರಿ ಚರ್ಚೆ ಆಗುತ್ತಿರುವುದು ಪ್ರತಿಮೆ ಕುಸಿತದ ಬಗ್ಗೆ ಮಹಾರಾಷ್ಟ್ರದಲ್ಲಿ 35 ಅಡಿ ಎತ್ತರದ ಬೃಹತ್ ಶಿವಾಜಿ ಮಹಾರಾಜರ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿತ್ತು. ಈ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿದ್ದರು. ಆದರೆ, ವರ್ಷದ ಒಳಗಾಗಿ ಈ ಪ್ರತಿಮೆ ನೆಲಕಚ್ಚಿತ್ತು.
ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿರುವ ರಾಜ್‌ಕೋಟ್‌ನಲ್ಲಿ 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿತ್ತು. ಅಲ್ಲದೇ ಈ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರೇ ಉದ್ಘಾಟನೆ ಮಾಡಿದ್ದರು. ಆದರೆ, ವರ್ಷದ ಒಳಗಾಗಿ ಪ್ರತಿಮೆ ಕುಸಿದಿತ್ತು. ಪ್ರತಿಮೆ ಕುಸಿತ ಕಂಡಿದ್ದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಅಲ್ಲದೇ ಇದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರೇ ಕ್ಷಮೆಯಾಚಿಸಿದ್ದರು. ಈ ಪ್ರತಿಮೆ ನಿರ್ಮಾಣ ಮಾಡಿದ ಗುತ್ತಿಗೆದಾರರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಈ ವಿಷಯವನ್ನು ಮಹಾರಾಷ್ಟ್ರದ ವಿರೋಧ ಪಕ್ಷಗಳು ಅಸ್ತ್ರವನ್ನಾಗಿಸಿಕೊಂಡಿದ್ದು. ಮಹಾರಾಷ್ಟ್ರದ ಚುನಾವಣೆಯ ಸಂದರ್ಭದಲ್ಲಿ ಈ ವಿಷಯ ಗಂಭೀರವಾಗಿ ಚರ್ಚೆಯಾಗುತ್ತಿದೆ.
ಶಿವಾಜಿ ಮಹಾರಾಜರಿಗೆ ಅವಮಾನ: ಜನ ಸಹಿಸಲ್ಲ
ಈ ವಿಷಯವನ್ನು ಮಹಾರಾಷ್ಟ್ರದ ವಿರೋಧ ಪಕ್ಷಗಳು ಗಂಭೀರ ಹಂತಕ್ಕೆ ತೆಗೆದುಕೊಂಡು ಹೋಗಿವೆ. ಮಹಾರಾಷ್ಟ್ರದ ಜನ ಛತ್ರಪತಿ ಶಿವಾಜಿ ಮಹಾರಾಜರಿಗೆ ಅವಮಾನ ಮಾಡಿದರೆ ಸಹಿಸುವುದಿಲ್ಲ. ಜನರು ಈ ಘಟನೆಯನ್ನು ಕ್ಷಮಿಸುವುದು ಸಹ ಇಲ್ಲ ಎಂದು ಶಿವಸೇನೆಯ (ಯುಬಿಟಿ) ಮುಖ್ಯಸ್ಥರಾದ ಉದ್ಧವ್ ಠಾಕ್ರೆ ಹೇಳಿದ್ದರು. ಇದೀಗ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿರುವಾಗಲೂ ವಿರೋಧ ಪಕ್ಷಗಳು ಈ ವಿಷಯವನ್ನು ಪ್ರಮುಖ ಅಸ್ತ್ರವನ್ನಾಗಿ ಇರಿಸಿಕೊಂಡಿವೆ.
ಶಿವಾಜಿ ಅವರ ಪ್ರತಿಮೆ ಕುಸಿದ ಬೆನ್ನಲ್ಲೇ ವಿಪಕ್ಷಗಳ ಒಕ್ಕೂಟ (ವಿರೋಧ ಪಕ್ಷಗಳು ಸಹ ಇಲ್ಲಿ ಮೈತ್ರಿ ಮಾಡಿಕೊಂಡಿವೆ) ಕಾಂಗ್ರೆಸ್, ಶಿವಸೇನೆ (ಉದ್ಧವ ಠಾಕ್ರೆ ಬಣ) ಹಾಗೂ ಎನ್‌ಸಿಪಿ (ಶರದ್ ಪವಾರ್ ಬಣ) ಮಹಾವಿಕಾಸ ಅಘಾಡಿ ನಾಯಕರು ಬೃಹತ್ ಪ್ರತಿಭಟನೆಯನ್ನು ನಡೆಸಿದ್ದರು. ಅಲ್ಲದೇ ಪ್ರತಿಭಟನೆಯ ಸಂದರ್ಭದಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಭಾವಚಿತ್ರಕ್ಕೆ ಶೂನಿಂದಲೂ ಸಹ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದರು.
100 ಅಡಿ ಶಿವಾಜಿ ಪ್ರತಿಮೆ ನಿರ್ಮಾಣದ ಪ್ರಸ್ತಾವ
ಮಹಾರಾಷ್ಟ್ರದಲ್ಲಿ ಶಿವಾಜಿ ಪ್ರತಿಮೆ ಕುಸಿತ ಕಂಡ ಮೇಲೆ ಅಲ್ಲಿನ ಸರ್ಕಾರದ ಸಚಿವರು ಸಹ ಈ ಘಟನೆಗೆ ಖಂಡನೆ ವ್ಯಕ್ತಪಡಿಸಿದ್ದರು. ಅಲ್ಲದೇ ಶಿವಾಜಿ ಮಹಾರಾಜರ ಬೃಹತ್ ಪ್ರತಿಮೆಯನ್ನು ಅದೇ ಜಾಗದಲ್ಲಿ ನಿರ್ಮಾಣ ಮಾಡಬೇಕು ಎನ್ನುವ ಆಗ್ರಹ ಕೇಳಿ ಬಂದಿತ್ತು. ಮಹಾರಾಷ್ಟ್ರ ಸಚಿರಾದ ದೀಪಕ್ ಕೇಸರ್ಕರ್ ಅವರು, 100 ಅಡಿ ಎತ್ತರದ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಪ್ರತಿಮೆ ಕುಸಿದ ಜಾಗದಲ್ಲೇ ನಿರ್ಮಿಸಬೇಕು ಎಂದು ಆಗ್ರಹಿಸಿದ್ದರು. ಸರ್ಕಾರವು ಸಹ ಬಲಿಷ್ಠವಾದ ಹಾಗೂ ಅತ್ಯುತ್ತಮ ಶಿವಾಜಿ ಪ್ರತಿಮೆ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದೆ. ಆದರೆ, ವಿಪಕ್ಷಗಳು ಇದು ಸಣ್ಣ ವಿಷಯವಲ್ಲ ಎಂದು ಹೇಳಿವೆ. ಹೀಗಾಗಿ, ಶಿವಾಜಿ ಮಹಾರಾಜರ ಪ್ರತಿಮೆ ನಿರ್ಮಾಣ ವಿಷಯ ಚುನಾವಣೆ ವಿಷಯವೂ ಆಗಿದೆ.












Click it and Unblock the Notifications