ಮಹಾರಾಷ್ಟ್ರ ಚುನಾವಣೆ: ಕಾಂಗ್ರೆಸ್ ನಿದ್ದೆ ಕೆಡಿಸಿದ ಬಿಜೆಪಿ ಸ್ಫೋಟಕ ಪ್ಲಾನ್!
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಸರಿಯಾಗಿ ಇನ್ನು ಒಂದು ತಿಂಗಳು ಸಹ ಬಾಕಿ ಉಳಿದಿಲ್ಲ. ಈ ಸಂದರ್ಭದಲ್ಲಿ ಬಿಜೆಪಿಯ ಮಹಾಯುತಿ ಪಕ್ಷವು ಹಾಗೂ ಕಾಂಗ್ರೆಸ್‌ನ ಮಹಾ ವಿಕಾಸ ಅಘಾಡಿಗೆ ಬಿಗ್ ಶಾಕ್ ಕೊಟ್ಟಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಶಿವಸೇನಾ ಹಾಗೂ ನ್ಯಾಷಲಿಸ್ಟ್ ಕಾಂಗ್ರೆಸ್ ಪಾರ್ಟಿಯೊಂದಿಗೆ ಮೈತ್ರಿ ಮಾಡಿಕೊಂಡಿವೆ. ಈ ಎರಡೂ ಪಕ್ಷಗಳು ಎರಡು ಬಣಗಳಾಗಿದ್ದು, ಒಂದು ಬಣ ಆಡಳಿತರೂಢ ಬಿಜೆಪಿಯೊಂದಿಗೂ ಮತ್ತೊಂದು ಬಣ ವಿರೋಧ ಪಕ್ಷದೊಂದಿಗೂ ಗುರುತಿಸಿಕೊಂಡಿದೆ.
ಇದೀಗ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವಾಗ ಶಿವಸೇನ ಮೂಲ ಬಣವನ್ನೇ ಕಾಂಗ್ರೆಸ್‌ನಿಂದ ಬಿಜೆಪಿ ತನ್ನತ್ತ ಸೆಳೆದುಕೊಳ್ಳುವ ಮಾಸ್ಟರ್ ಪ್ಲಾನ್ ಮಾಡಿದೆ. ಈ ಮೂಲಕ ಕಾಂಗ್ರೆಸ್ ನಿದ್ದೆಕೆಡಿಸಲು ಮುಂದಾಗಿದೆ. ಈಚೆಗೆ ಶಿವಸೇನೆ (ಉದ್ಧವ್ ಠಾಕ್ರೆ ಬಣ - ಯುಬಿಟಿ) ಉದ್ಧವ್ ಠಾಕ್ರೆ ಅವರೊಂದಿಗೆ ಬಿಜೆಪಿ ಮುಖಂಡ ಹಾಗೂ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಸಭೆ ನಡೆಸಿದ್ದಾರೆ ಎನ್ನಲಾಗಿದ್ದು, ಭಾರೀ ಅಲ್ಲೋಕ ಕಲ್ಲೋಲವನ್ನೇ ಸೃಷ್ಟಿ ಮಾಡಿದೆ.

ಇದಕ್ಕೆ ಕಾರಣ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷವಾಗಿರುವ ಕಾಂಗ್ರೆಸ್‌ನ ಮಹಾವಿಕಾಸ್ ಅಘಾಡಿ ಮೈತ್ರಿ ಪಕ್ಷಗಳಲ್ಲಿ ಉದ್ಧವ್ ಠಾಕ್ರೆ ಅವರ ಬಣ ಪ್ರಮುಖವಾಗಿದೆ. ಈ ಹಿಂದೆ ಶಿವಸೇನೆ ಪಕ್ಷ ಒಂದಾಗಿತ್ತು. ಈಗ ಎರಡು ಭಾಗವಾಗಿದ್ದು, ಏಕನಾಥ್ ಶಿಂಧೆ ಬಣ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದು, ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದಾರೆ. ಇದೀಗ ಸದ್ದಿಲ್ಲದೆ ಬಿಜೆಪಿ ಪಾರ್ಟಿಯು ಮೂಲ ಶಿವಸೇನಾ ಪಾರ್ಟಿಯನ್ನು ಸಹ ತನ್ನತ್ತ ಸೆಳೆದುಕೊಳ್ಳುವ ಪ್ರಯತ್ನ ಮಾಡುತ್ತಿದೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ದಿನ ಗಣನೆ ಶುರುವಾಗಿರುವಾಗಲೇ ಬಿಜೆಪಿಯ ಮಾಸ್ಟರ್ ಪ್ಲಾನ್ ಕಾಂಗ್ರೆಸ್ ಮೈತ್ರಿ ಪಕ್ಷಗಳಲ್ಲಿ ನಡುಕವನ್ನೇ ಸೃಷ್ಟಿ ಮಾಡಿದೆ. ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಹಾಗೂ ದೇವೇಂದ್ರ ಫಡ್ನವಿಸ್ ನಡುವೆ ಮಾತುಕತೆ ನಡೆದಿದೆ. ಗೃಹ ಸಚಿವ ಅಮಿತ್ ಶಾ ಅವರು ಈಚೆಗೆ ಮಹಾರಾಷ್ಟ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಸಭೆ ನಡೆದಿದೆ ಎನ್ನಲಾಗಿದೆ.
ಟಿಕೆಟ್ ವಿಚಾರಕ್ಕೆ ಅಸಮಾಧಾನ: ಮಹಾರಾಷ್ಟ್ರದಲ್ಲಿ ಯುಬಿಟಿ ಹಾಗೂ ಕಾಂಗ್ರೆಸ್ ಮೈತ್ರಿ ಪಕ್ಷಗಳ ನಡುವೆ ವೈಮನಸ್ಸು ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಮೈತ್ರಿ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಶಿವಸೇನಾದ (ಉದ್ಧವ್ ಠಾಕ್ರೆ ಬಣ) ಟಿಕೆಟ್ ಘೋಷಿಸಿರುವುದು ಸಹ ಅಸಮಾಧಾನ ಕಾರಣವಾಗಿದೆ.

ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲ: ಮಹಾರಾಷ್ಟ್ರದಲ್ಲಿ ರಾಜಕೀಯದಲ್ಲಿ ಈ ಬೆಳವಣಿಗೆ ಹೊಸ ಸಂಚಲನವನ್ನೇ ಸೃಷ್ಟಿ ಮಾಡಿದೆ. ನವೆಂಬರ್ 20ರಂದು ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿದ್ದು, ಮ್ಯಾಜಿಕ್ ಸಂಖ್ಯೆ 145 ಇದೆ. ಹರಿಯಾಣದಲ್ಲಿ ಸೋಲು ಕಂಡ ನಂತರ ಮಹಾರಾಷ್ಟ್ರದಲ್ಲಿ ಹೇಗಾದರೂ ಗೆಲ್ಲಬೇಕು ಎನ್ನುವ ಹುಮ್ಮಸ್ಸಿನಲ್ಲಿ ಕಾಂಗ್ರೆಸ್ ಇತ್ತು. ಆದರೆ, ಕಾಂಗ್ರೆಸ್ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಲು ಬಿಜೆಪಿ ಮುಂದಾಗಿದೆ.
ಇದೀಗ ಬಿಜೆಪಿಯ ಹೊಸ ಪ್ಲಾನ್ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳನ್ನು ಇನ್ನಿಲ್ಲದಂತೆ ತಲೆಕೆಡಿಸಿವೆ. ಶಿವಸೇನೆ (ಉದ್ಧವ್ ಠಾಕ್ರೆ ಬಣ) ಕಾಂಗ್ರೆಸ್ ಮೈತ್ರಿ ಪಕ್ಷದಲ್ಲೇ ಉಳಿಯಲಿದೆಯೇ ಇಲ್ಲ ಬಿಜೆಪಿಯೊಂದಿಗೆ ಮತ್ತೆ ಕೈಜೋಡಿಸಲಿದೆಯೇ ಎನ್ನುವುದನ್ನು ಕಾದು ನೋಡಬೇಕಾಗಿದೆ.












Click it and Unblock the Notifications