Maharashtra Elections "ಡಬಲ್ ಎಂಜಿನ್ ಇದೆ; ಏನು ಪ್ರಯೋಜನ ಶಿವಾಜಿ ಪ್ರತಿಮೆ 8 ವರ್ಷವಾದ್ರೂ.."
ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದ್ದು, ಇದೀಗ ಮುಂದಿನ ದಿನಗಳಲ್ಲಿ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆ ಕಾವು ಪಡೆದುಕೊಂಡಿದೆ. ಮಹಾರಾಷ್ಟ್ರ ಚುನಾವಣೆ ಸಮೀಪಿಸುತ್ತಿರುವ ನಡುವೆ ಛತ್ರಪತಿ ಶಿವಾಜಿ ಪ್ರತಿಮೆ ವಿಚಾರ ಮತ್ತೆ ರಾಜಕೀಯವಾಗಿ ಮುನ್ನೆಲೆಗೆ ಬಂದಿದೆ. ಛತ್ರಪತಿ ಮಹಾರಾಜರ ಪ್ರತಿಮೆ ವಿಚಾರವು ಇದೀಗ ಮತ್ತೆ ರಾಜಕೀಯ ವಿಚಾರಕ್ಕೆ ಹೆಚ್ಚು ಚರ್ಚೆಯಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮಾಡಿ ಬರೋಬ್ಬರಿ 8 ವರ್ಷಗಳಾದರೂ ಮುಂಬೈನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಯಾಕೆ ಪೂರ್ಣಗೊಳಿಸಿಲ್ಲ ಎಂದು ಮಾಜಿ ರಾಜ್ಯಸಭಾ ಸದಸ್ಯ ಸಂಭಾಜಿ ರಾಜೆ ಛತ್ರಪತಿ ಅವರು ಪ್ರಶ್ನೆ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರಿಗೆ ವಿಶೇಷ ಗೌರವ ಹಾಗೂ ಸ್ಥಾನವನ್ನು ನೀಡಲಾಗಿದೆ. ಈಚೆಗೆ ಮಹಾರಾಷ್ಟ್ರದಲ್ಲಿ 35 ಅಡಿ ಎತ್ತರದ ಶಿವಾಜಿ ಪ್ರತಿಮೆ ಕುಸಿದಿತ್ತು.

ನಿರ್ಮಾಣವಾಗಿ ಒಂದೇ ವರ್ಷದಲ್ಲಿ ಈ ಪ್ರತಿಮೆ ಕುಸಿತಕಂಡಿತ್ತು. ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಒಂದೇ ವರ್ಷದ ಅವಧಿಯಲ್ಲಿ ಕುಸಿತ ಕಂಡ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರು ಸಹ ಕ್ಷಮಾಪಣೆ ಕೇಳಿದ್ದರು.
ಇದೀಗ ಮಹಾರಾಷ್ಟ್ರದಲ್ಲಿ ಮತ್ತೆ ಛತ್ರಪತಿ ಶಿವಾಜಿ ಪ್ರತಿಮೆ ನಿರ್ಮಾಣ ವಿಷಯ ಚರ್ಚೆಯ ಮುನ್ನೆಲೆಗೆ ಬಂದಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಡಬಲ್ ಎಂಜಿನ್ ಸರ್ಕಾರವೇ ಅಧಿಕಾರದಲ್ಲಿ ಇದೆ. ಆದರೆ, ಕಳೆದ ಎಂಟು ವರ್ಷಗಳಿಂದಲೂ ಶಿವಾಜಿ ಪ್ರತಿಮೆ ನಿರ್ಮಾಣ ಕಾರ್ಯಪೂರ್ಣಗೊಂಡಿಲ್ಲ ಎಂದು ಸಂಭಾಜಿ ರಾಜೆ ಛತ್ರಪತಿ ಅವರು ಪ್ರಶ್ನಿಸಿದ್ದಾರೆ. ಇನ್ನು ಮಹಾರಾಷ್ಟ್ರದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ನಿರ್ಮಾಣ ವಿಷಯವೂ ಈ ಬಾರಿ ಚುನಾವಣಾ ಚರ್ಚಿತ ವಿಷಯಗಳಲ್ಲಿ ಒಂದಾಗಿದೆ.
ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ನಿರ್ಮಾಣ ಮಾಡುವ ವಿಚಾರ ಕಳೆದ ಎಂಟು ವರ್ಷದಿಂದ ಬರೀ ಚರ್ಚೆಯಲ್ಲೇ ಉಳಿದಿದೆ. 2016ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಮಹಾರಾಷ್ಟ್ರದ ಮುಂಬೈನಲ್ಲಿ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಛತ್ರಪತಿ ಶಿವಾಜಿ ಪ್ರತಿಮೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿತ್ತು. ಈ ಯೋಜನೆಯ ವೆಚ್ಚವೇ ಬರೋಬ್ಬರಿ 3,600 ಕೋಟಿ ರೂಪಾಯಿ ಇದ್ದು, ಮೊದಲ ಹಂತದಲ್ಲಿ ಬರೋಬ್ಬರಿ 2,300 ಕೋಟಿ ವೆಚ್ಚ ಮಾಡಲು ಉದ್ದೇಶಿಸಲಾಗಿತ್ತು ಎಂದು ಹೇಳಲಾಗಿದೆ.
ಸಂಭಾಜಿ ರಾಜೆ ಅವರ ರಾಜಕೀಯ ಹಿನ್ನೆಲೆ ಏನು
ಸಂಭಾಜಿ ರಾಜೆ ಅವರು ಮಹಾರಾಷ್ಟ್ರದ ಕೊಲ್ಲಾಪುರದ ರಾಜಮನೆತಕ್ಕೆ ಸೇರಿದವರಾಗಿದ್ದಾರೆ. ಅಲ್ಲದೇ ದೇಶದ ಹೆಮ್ಮೆಯ ಛತ್ರಪತಿ ಶಿವಾಜಿ ಮಹಾರಾಜ ಮತ್ತು ಅಪ್ರತಿಮ ಸಮಾಜ ಸುಧಾರಕ ಛತ್ರಪತಿ ರಾಜರ್ಷಿ ಶಾಹು ಅವರ ವಂಶಸ್ಥರಾಗಿದ್ದಾರೆ. ಇನ್ನು ಇವರ ತಂದೆ ಶಾಹು ಛತ್ರಪತಿ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ, ಸಂಸದರಾಗಿ ಆಯ್ಕೆಯಾಗಿದ್ದಾರೆ. ಮಹಾರಾಷ್ಟ್ರದ ಮಿತ್ರ ವಿರೋಧ ಪಕ್ಷ (ಮಹಾ ವಿಕಾಸ ಅಘಾಡಿ)ಯಲ್ಲೂ ಗುರುತಿಸಿಕೊಂಡಿದ್ದಾರೆ.












Click it and Unblock the Notifications