ಮಹಾರಾಷ್ಟ್ರ ಚುನಾವಣೆ: ಲೈನ್ ಕ್ಲಿಯರ್ ಮಾಡಿಕೊಂಡ ಕಾಂಗ್ರೆಸ್, ಬಿಜೆಪಿಯಲ್ಲಿ ಇನ್ನೂ ಗೊಂದಲ!
ಮಹಾರಾಷ್ಟ್ರ ಚುನಾವಣೆ ದಿನಾಂಕ ಸಮೀಪಿಸುತ್ತಿರುವಂತೆ ಮಹಾರಾಷ್ಟ್ರದಲ್ಲಿ ಹಲವು ರಾಜಕೀಯ ಹೈಡ್ರಾಮಾವೇ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ನವೆಂಬರ್ 20ಕ್ಕೆ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಬಾರಿ ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇಲ್ಲಿ ಕಾಂಗ್ರೆಸ್ ಪಕ್ಷವು ಶಿವಸೇನಾ (ಉದ್ಧವ್ ಠಾಕ್ರೆ ಬಣ) ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಶರದ್ ಪವಾರ್ ಬಣ) ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದೆ. ಆದರೆ..
ಇದೀಗ ಈ ಪಕ್ಷಗಳ ನಡುವೆ ಸೀಟು ಹಂಚಿಕೆಯ ವಿವಾದ ಇನ್ನೂ ಇತ್ಯಾರ್ಥವಾದಂತಿಲ್ಲ. ಬಿಜೆಪಿಯೂ ಮೈತ್ರಿ ಪಕ್ಷಗಳೊಂದಿಗೆ ಚುನಾವಣಾ ಅಖಾಡಕ್ಕೆ ಧುಮುಕಿದೆ. ಆದರೆ, ಬಿಜೆಪಿ ಈ ಚುನಾವಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಯಾವುದೇ ದೊಡ್ಡ ಮಟ್ಟದ ಗೊಂದಲಗಳು ಸೃಷ್ಟಿಯಾಗದಂತೆ ಎಚ್ಚರಿಕೆ ವಹಿಸುತ್ತಿದೆ. ಆದರೆ, ಕಾಂಗ್ರೆಸ್‌ನ ವಿಚಾರದಲ್ಲಿ ಆ ರೀತಿ ಬೆಳವಣಿಗೆ ಇಲ್ಲ ಎನ್ನಲಾಗುತ್ತಿದೆ.

ಇದೀಗ ಕಾಂಗ್ರೆಸ್ ಮೈತ್ರಿ ಒಕ್ಕೂಟ ಮಹಾವಿಕಾಸ್ ಅಘಾಡಿಯಲ್ಲಿ ಹಲವು ಮಹತ್ವದ ಬದಲಾವಣೆಗಳು ಆಗುತ್ತಿವೆ. ಮಹಾರಾಷ್ಟ್ರ ಚುನಾವಣೆ ಸಮೀಪಿಸುತ್ತಿರುವಂತೆಯೇ ಈ ಪಕ್ಷಗಳ ನಡುವೆ ಬಿರುಕು ಹೆಚ್ಚಾಗ್ತಿದೆ. ಇದೀಗ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವಾಗ ಕಾಂಗ್ರೆಸ್ ಅಚ್ಚರಿ ಮೂಡಿಸಿದೆ.
ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷದಲ್ಲಿರುವ ಕಾಂಗ್ರೆಸ್ ಸೇರಿದಂತೆ ಮೈತ್ರಿ ಪಕ್ಷಗಳು ಈ ಚುನಾವಣೆಯಲ್ಲಿ ಸೀಟು ಹಂಚಿಕೆ ಮಾಡಿಕೊಂಡಿವೆ. ಕಾಂಗ್ರೆಸ್ ಇದೀಗ ಮಹಾರಾಷ್ಟ್ರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಅಂದರೆ, 288 ವಿಧಾನಸಭಾ ಕ್ಷೇತ್ರಗಳಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಯಾಗಿದೆ ಎಂದು ಕಾಂಗ್ರೆಸ್ ಹೇಳಿದೆ.
ಈ ಮೂಲಕ ಮಹಾರಾಷ್ಟ್ರದಲ್ಲಿ ಎಲ್ಲಾ ಗೊಂದಲಗಳಿಗೂ ಕಾಂಗ್ರೆಸ್ ತೆರೆ ಎಳೆಯುತ್ತಿದೆ. ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಮೈತ್ರಿ ಕೂಟದ ನಡುವೆ ಎಲ್ಲವೂ ಸರಿ ಇಲ್ಲ ಎಂದು ಹೇಳುತ್ತಿರುವಾಗಲೇ ಈ ರೀತಿಯ ಬೆಳವಣಿಗೆಯೊಂದು ನಡೆದಿದೆ. ಮಹಾವಿಕಾಸ್ ಅಘಾಡಿಯೂ ಮೈತ್ರಿಗೆ ಸಿದ್ಧವಾಗಿದೆ ಎಂದು ಕಾಂಗ್ರೆಸ್ ಘೋಷಿಸಿಕೊಂಡಿದೆ.
ಮಹಾರಾಷ್ಟ್ರ ಚುನಾವಣೆಗೆ ಮಂಗಳವಾರವೇ ಕೊನೆಯ ದಿನವಾಗಿತ್ತು. ಆದರೆ, ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳ ಪೈಕಿ 11 ವಿಧಾನಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ಅಂತಿಮವಾಗಿಲ್ಲ ಎಂದೇ ಹೇಳಲಾಗಿತ್ತು.
ಮಹಾಯುತಿಯಲ್ಲೂ ಮುಂದುವರಿದ ಗೊಂದಲ!
ಇನ್ನು ಮಹಾರಾಷ್ಟ್ರದಲ್ಲಿ ಆಡಳಿತದಲ್ಲಿ ಇರುವ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದಲ್ಲೂ ಗೊಂದಲ ಇದೆ ಎನ್ನಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನಾ (ಏಕನಾಥ್ ಶಿಂಧೆ ಬಣ) ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಅಜಿತ್ ಪವಾರ್) ಬಣ ಅಧಿಕಾರದಲ್ಲಿ ಇದೆ. ಇದೀಗ ಈ ಮೈತ್ರಿಕೂಟದಲ್ಲೂ ಸಣ್ಣ ಗೊಂದಲವಿರುವುದು ಬಹಿರಂಗವಾಗಿದೆ.
ಮಹಾರಾಷ್ಟ್ರದ ಮಹಾಯುತಿ ಬಣದಿಂದಲೂ ಮಹಾರಾಷ್ಟ್ರದ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಮಾಡಿಲ್ಲ ಎಂದು ಹೇಳಲಾಗಿದೆ.
ಚುನಾವಣಾ ಕಣದಲ್ಲಿ 8 ಸಾವಿರ ಅಭ್ಯರ್ಥಿಗಳು!
ಇನ್ನು ಮಹಾರಾಷ್ಟ್ರದಲ್ಲಿ ಇರುವುದೇ 288 ವಿಧಾನಸಭಾ ಕ್ಷೇತ್ರಗಳು. ಆದರೆ, ಇಷ್ಟು ಕ್ಷೇತ್ರಗಳಿಗೆ ಬರೋಬ್ಬರಿ 8 ಸಾವಿರಕ್ಕೂ ಹೆಚ್ಚು ಜನ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ. ಮಹಾರಾಷ್ಟ್ರ ಚುನಾವಣಾ ಅಖಾಡವು ಈಗಾಗಲೇ ರಂಗೇರಿದೆ. ಚುನಾವಣೆಯಲ್ಲಿ ಭಾರೀ ಜಿದ್ದಾಜಿದ್ದಿನ ಪೈಟೋಟಿ ಇದೆ.











Click it and Unblock the Notifications